
ಮೈಸೂರು, [ಡಿ.03]: ಜೆಡಿಎಸ್ ನಿಂದ ದೂರವಾಗಿರುವ ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಹುಣಸೂರು ಉಪಚುಣಾವಣೆಯಲ್ಲಿ ಯಾರಿಗೂ ಬೆಂಬಲಿಸದೇ ಸೈಲೆಂಟ್ ಆಗಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಾಯಕರುಗಳು ತಮಗೆ ಬೆಂಬಲಿಸುವಂತೆ ಭೇಟಿ ಮಾಡಿ ಮನವಿ ಮಾಡಿದರೂ ಸಹ ಜಿಟಿಡಿ ಯಾರಿಗೂ ಸಪೋರ್ಟ್ ಮಾಡದೇ ತಟಸ್ಥರಾಗಿದ್ದಾರೆ. ಈ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ.
ಶ್ರೀರಾಮುಲು ಭೇಟಿ ಬಳಿಕ ಜಿಟಿಡಿ ರಿಯಾಕ್ಷನ್: ಸಂಚಲನ ಮೂಡಿಸಿದ ಗೌಡ್ರ ಮಗ ಹರೀಶ್ ಮಾತು
ಆದ್ರೆ, ಮತ್ತೊಂದೆಡೆ ಮಾಜಿ ಸಚಿವ ಜಿಟಿ ದೇವೇಗೌಡ ಬಿಜೆಪಿ ಸೇರಲಿದ್ದಾರೆ. ಮಗನ ಭವಿಷ್ಯಕ್ಕಾಗಿ ಅವರು ಜೆಡಿಎಸ್ ತೊರೆಯುವ ಸಾಧ್ಯತೆಗಳು ಅಧಿಕವಿದೆ. ಈ ಹಿನ್ನೆಲೆಯಲ್ಲಿಯೇ ಅವರು ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರವಾಗಿದ್ದು, ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಾಯಕರೊಟ್ಟಿಗಿನ ಅವರ ಒಡನಾಟ ಹೆಚ್ಚಿದೆ ಎಂಬ ಊಹಾಪೋಹಾಗಳು ಹರಿದಾಡಿತ್ತಿವೆ.
ಅಷ್ಟೇ ಅಲ್ಲದೇ ಹುಣಸೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ ಅಂತೆಲ್ಲಾ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿವೆ. ಇವೆಲ್ಲವುಗಳಿಗೆ ಸ್ಪಷ್ಟನೆ ನೀಡಲು ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮತದಾರರಿಗೆ ಪತ್ರ ಬರೆದಿದ್ದಾರೆ. ಅದು ಈ ಕೆಳಗಿನಂತಿದೆ ಓದಿ...
ಸನ್ಮಾನ್ಯ ಹುಣಸೂರಿನ ಮತದಾರರೇ..
ನಾನು ಈ ಉಪ ಚುನಾವಣೆಯಲ್ಲಿ ರಾಜಕೀಯವಾಗಿ ತಟಸ್ಥನಾಗಿದ್ದಾನೆ. ಯಾವ ಪಕ್ಷದ ಅಭ್ಯರ್ಥಿ ಪರವೂ ಮತ ಕೇಳಿಲ್ಲ. ಯಾವ ಅಭ್ಯರ್ಥಿ ಪರವೂ ಒಲವು ತೋರಿಸಿಲ್ಲ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ನಾನು ಬಿಜೆಪಿ ಅಭ್ಯರ್ಥಿ ಗೆ ಬೆಂಬಲ ಸೂಚಿಸಿದ್ದೇನೆ ಎಂಬ ಪೋಸ್ಟರ್‌ಗಳು ಹರಿದಾಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ.
ಇಂತಹ ಸುದ್ದಿ ಸೃಷ್ಟಿಸಿದವರ ವಿರುದ್ದ ಹಾಗೂ ಇಂತಹ ಸುದ್ದಿ ಹರಡುತ್ತಿರುವವರ ವಿರುದ್ದ ಕ್ರಮಕೈಗೊಳ್ಳಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ.
ಕಿಡಿಗೇಡಿಗಳು ಸೃಷ್ಟಿಸಿರುವ ಇಂತಹ ಸುಳ್ಳು ಸುದ್ದಿಗೆ ಮಾನ್ಯ ಮತದಾರರು ಕಿವಿಗೊಡಬಾರದೆಂದು ಈ ಮೂಲಕ ಮನವಿ ಮಾಡುತ್ತಿದ್ದೇನೆ.
ಇಂತಿ ನಿಮ್ಮ ವಿಶ್ವಾಸಿ
ಜಿ.ಟಿ. ದೇವೇಗೌಡ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.