ದೇವೇಗೌಡರ ಮೇಲಿನ ದ್ವೇಷದಿಂದ ಹಾಸನಕ್ಕೆ ಅನ್ಯಾಯ: ಎಚ್.ಡಿ. ರೇವಣ್ಣ

By Kannadaprabha News  |  First Published Aug 15, 2024, 10:28 AM IST

ಹಾಸನಾಂಬೆ ದರ್ಶನೋತ್ಸವದ ಪೂರ್ವಭಾವಿ ಸಭೆಗೆ ತಮ್ಮನ್ನು ಆಹ್ವಾನಿಸದ ಜಿಲ್ಲಾಧಿಕಾರಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದ್ವೇಷ ರಾಜಕಾರಣದ ಮೂಲಕ ಜಿಲ್ಲೆಯ ಬೆಳವಣಿಗೆಗೆ ಅಡ್ಡಿಯಾಗಿದ್ದು, ಇಲ್ಲಿನ ಅಧಿಕಾರಿಗಳು ದರ್ಪ, ದುರಹಂಕಾರದಿಂದ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ ಎಚ್.ಡಿ. ರೇವಣ್ಣ 


ಹಾಸನ(ಆ.15):  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಹೋಗಿ ಕೆಲವರು ಜಿಲ್ಲೆಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಾಸನಾಂಬೆ ದರ್ಶನೋತ್ಸವದ ಪೂರ್ವಭಾವಿ ಸಭೆಗೆ ತಮ್ಮನ್ನು ಆಹ್ವಾನಿಸದ ಜಿಲ್ಲಾಧಿಕಾರಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ದ್ವೇಷ ರಾಜಕಾರಣದ ಮೂಲಕ ಜಿಲ್ಲೆಯ ಬೆಳವಣಿಗೆಗೆ ಅಡ್ಡಿಯಾಗಿದ್ದು, ಇಲ್ಲಿನ ಅಧಿಕಾರಿಗಳು ದರ್ಪ, ದುರಹಂಕಾರದಿಂದ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್‌: ಸಂತ್ರಸ್ತೆಯ ಕಿಡ್ನಾಪ್‌ ಮಾಡಿಸಿದ್ದು ರೇವಣ್ಣ, ಭವಾನಿ..!

ಜಿಲ್ಲೆಯಲ್ಲಿ ರೇವಣ್ಣನ ರಾಜಕೀಯ ಜೀವನ ಮುಗಿಯಿತು ಎಂದು ಯಾರಾದರೂ ಭಾವಿಸಿದ್ದರೆ ಅದು ಸುಳ್ಳು. 40 ವರ್ಷಗಳ ರಾಜಕೀಯದಲ್ಲಿ ಇಂಥ ಅನೇಕ ಘಟನೆಗಳನ್ನು ಎದುರಿಸಿದ್ದೇನೆ. ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿರುವ ಜಾಗ ಹಾಗೂ ಹಣವನ್ನು ದುರ್ಬಳಕೆ ಮಾಡಿದರೆ ಜೆಡಿಎಸ್ ಏನು ಎಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

click me!