
ಬೆಂಗಳೂರು, (ಆ.28): ಜೆಡಿಎಸ್ ಶಾಸಕ ಎಚ್. ಡಿ. ರೇವಣ್ಣ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಮೊದಲು ಜ್ವರ ಕಾಣಿಸಿಕೊಂಡಿದ್ದರಿಂದ ರೇವಣ್ಣ ಅವರು ಇಂದು (ಶುಕ್ರವಾರ) ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಪಾಸಿಟಿವ್ ಅಂತ ಬಂದಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಮತ್ತೋರ್ವ ಜೆಡಿಎಸ್ ಶಾಸಕರೊಬ್ಬರಿಗೆ ಕೊರೋನಾ: ಚೇತರಿಕೆಗೆ ದೇವೇಗೌಡ ಹಾರೈಕೆ
ಸದ್ಯ ಎಚ್.ಡಿ ರೇವಣ್ಣ ಬೆಂಬಲಿಗರು, ಕಾರ್ ಚಾಲಕ ಸೇರಿದಂತೆ ಮನೆಯ ಸದಸ್ಯರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಾಗೆಯೇ ಅವರೊಂದಿಗೆ ಇತ್ತೀಚೆಗೆ ಸಂಪರ್ಕ ಹೊಂದಿದ್ದ ಎಲ್ಲರನ್ನು ಕೋವಿಡ್-19 ಟೆಸ್ಟ್ಗೆ ಒಳಗಾಗುವಂತೆ ರೇವಣ್ಣ ಮನವಿ ಮಾಡಿದ್ದಾರೆ.
ಇನ್ನು, ಎಚ್.ಡಿ ರೇವಣ್ಣಗೆ ಹಲವರು ಹಿರಿಯ ರಾಜಕಾರಣಿಗಳು ಸೇರಿದಂತೆ ಬೆಂಬಲಿಗರು ಫೋನ್ ಮಾಡಿ ಬೇಗ ಗುಣಮುಖರಾಗಿ ಎಂದು ಹಾರೈಸಿದ್ದಾರೆ. ಎಲ್ಲರೂ ಶೀಘ್ರದಲ್ಲೇ ರೇವಣ್ಣ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಈಗಾಗಲೇ ಹಾಸನ ಜಿಲ್ಲೆಯ ಬೇಲೂರು ಜೆಡಿಎಸ್ ಶಾಸಕ ಲಿಂಗೇಶ್ ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕ ಕೆ. ಎಂ ಶಿವಲಿಂಗೇಗೌಡರಿಗೂ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ಇದೀಗ ಜಿಲ್ಲೆಯ ಮೂರನೇ ಜೆಡಿಎಸ್ ಶಾಸಕ ರೇವಣ್ಣ ಅವರಿಗೂ ಕೊರೋನಾ ವಕ್ಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.