
ಹಾಸನ, (ಮಾ.12): ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರದ ಅವಧಿಯಲ್ಲಿ ಚಾಲನೆ ನೀಡಿದ್ದ ಕಾಮಗಾರಿಗಳನ್ನು ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರ ತಡೆ ಹಿಡಿದಿದೆ. ಇದನ್ನು ಖಂಡಿಸಿ ಸೋಮವಾರದಿಂದ ವಿಧಾನಸಭೆಯಲ್ಲಿ ಧರಣಿಗೆ ಕೂರುತ್ತೇವೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಹಾಸನದಲ್ಲಿ ಇಂದು (ಶುಕ್ರವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ರೇವಣ್ಣ ಅವರು, ಜೆಡಿಎಸ್ ಶಾಸಕರೆಲ್ಲರೂ ಸದನದಲ್ಲಿ ಧರಣಿ ಮಾಡುತ್ತೇವೆ. ಈ ವಿಚಾರವನ್ನು ಸಭಾಪತಿಯವರ ಗಮನಕ್ಕೂ ತಂದಿದ್ದು, ಇನ್ನೂ ಎರಡು ವರ್ಷ ದ್ವೇಷದ ರಾಜಕಾರಣ ಮಾಡಲಿ. ನಾವು ಹೋರಾಟದಿಂದಲೇ ಬಂದಿದ್ದೇವೆ. ಎಷ್ಟು ದಿನ ಅಂತಾ ತಾಳ್ಮೆಯಿಂದ ಇರೋಣ. ಇನ್ನು ನಾವು ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ ಎಂದು ಸರ್ಕಾರ ವಿರುದ್ಧ ಕಿಡಿಕಾಡಿದರು.
ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಮಾಡಿ ತೀರ್ಮಾನ ಮಾಡಿದ್ದೇವೆ. ಯಾವುದೇ ಯೋಜನೆಗಳಿಗೆ ಹಣಕೊಡುತ್ತಿಲ್ಲ. ಕುಡಿಯುವ ನೀರು ನೀಡೋದಕ್ಕೂ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಜಿಲ್ಲೆಯ ಶಾಲಾ ಕಾಲೇಜುಗಳಲ್ಲೂ ಸಾಕಷ್ಟು ಸಮಸ್ಯೆಗಳಿದೆ. ಇವೆಲ್ಲವನ್ಯಾರೂ ಹೇಳೋರಿಲ್ಲ, ಕೇಳೋರಿಲ್ಲ ಎಂದು ಆಕ್ರೋಶ ವ್ಯಕ್ತಪಿಪಡಿಸಿದರು.
ಎಲ್ಲಾ ಪಕ್ಷವನ್ನು ಜೊತೆಗೆ ಕರೆದುಕೊಂಡು ಹೋಗಲು ಕೇಳುತ್ತೇನೆ. ಶಾಸಕರಿಗೆ ಅನ್ಯಾಯವಾದಾಗ ಸ್ಪೀಕರ್ ನಮ್ಮ ನೆರವಿಗೆ ಬರಬೇಕು. ಸಭಾಪತಿಗಳು ಒಂದು ಪಕ್ಷಕ್ಕೆ ಸೀಮಿತವಾದವರಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.