ಸಿದ್ದರಾಮಯ್ಯನ ಸೋಲಿಸಬೇಕೆಂದು ಒಳ ಒಪ್ಪಂದವಾಗಿತ್ತು: ಜೆಡಿಎಸ್ ಶಾಸಕ ಬಾಂಬ್

Published : Dec 19, 2020, 05:30 PM ISTUpdated : Dec 19, 2020, 07:58 PM IST
ಸಿದ್ದರಾಮಯ್ಯನ ಸೋಲಿಸಬೇಕೆಂದು ಒಳ ಒಪ್ಪಂದವಾಗಿತ್ತು: ಜೆಡಿಎಸ್ ಶಾಸಕ ಬಾಂಬ್

ಸಾರಾಂಶ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಮ್ಮವರಿಂದಲೇ ಸೋಲಬೇಕಾಯ್ತು ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ಮಧ್ಯೆ ಜೆಡಿಎಸ್ ಶಾಸಕ ಹೊಸ ಬಾಂಬ್ ಸಿಡಿಸಿದ್ದಾರೆ.

ತುಮಕೂರು, (ಡಿ.19): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಳ ಒಪ್ಪಂದ ಹಾಗೂ ನಮ್ಮವರಿಂದ ಸೋಲಬೇಕಾಯ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೊತ್ತೊಮ್ಮೆ ಹೇಳಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯನವರ ಈ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಮ್ಮ ಅಭಿಪ್ರಾಯಗಳನ್ನ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಜೆಡಿಎಸ್ ಶಾಸ ಹೊಸ ಬಾಂಬ್ ಸಿಡಿಸಿದ್ದಾರೆ.

ಪಕ್ಷದ್ರೋಹಿ ಪಕ್ಷ ಬಿಡಲಿ: ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದು ಸ್ಫೋಟಕ ಹೇಳಿಕೆ..!

ಮಾಜಿ ಸಿಎಂ ಸಿದ್ದರಾಮಯ್ಯ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲದೇ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎಂದು ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ. ಆದ್ರೆ ಸಿದ್ದರಾಮಯ್ಯ ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಚಾಮುಂಡೇಶ್ವರಿ ಕ್ಷೇತ್ರ ಮಾತ್ರವಲ್ಲ, ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು. ಒಳ ಒಪ್ಪಂದ ಎಲ್ಲರಿಗೂ ಗೊತ್ತಿರುವಂತ ವಿಚಾರವಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಸೋಲಿನ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!