ಬಿಜೆಪಿ ಮೈತ್ರಿಗೆ ಜೆಡಿಎಸ್ ಶಾಸಕರ ಸಹಮತ ಇದೆಯಾ?: ದಳ ಶಾಸಕರು ಹೇಳಿದ್ದಿಷ್ಟು

Published : Sep 20, 2023, 12:30 AM IST
ಬಿಜೆಪಿ ಮೈತ್ರಿಗೆ ಜೆಡಿಎಸ್ ಶಾಸಕರ ಸಹಮತ ಇದೆಯಾ?: ದಳ ಶಾಸಕರು ಹೇಳಿದ್ದಿಷ್ಟು

ಸಾರಾಂಶ

ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದ ಶಾಸಕ ಮೇಲೂರು ಬಿ.ಎನ್. ರವಿಕುಮಾರ್, ಗೌರಿಬಿದನೂರು ಕ್ಷೇತ್ರದ ಜೆಡಿಎಸ್ ಮುಖಂಡ ನರಸಿಂಹಮೂರ್ತಿ ಸೇರಿದಂತೆ ಹಲವು ನಾಯಕರು ಸಮ್ಮತ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ(ಸೆ.20): 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಯ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರಿಂದ ಯಾವುದೇ ವಿರೋಧ ಇಲ್ಲ. ಬಿಜೆಪಿ ಜೊತೆ ಮೈತ್ರಿಗೆ ತಮ್ಮ ಸಹಮತ ಇರುವುದಾಗಿ ಎರಡೂ ಪಕ್ಷಗಳ ಹಾಲಿ ಹಾಗೂ ಮಾಜಿ ಶಾಸಕರು ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಹೊರವಲಯದ ಬೆಂಗಳೂರು ಕಡಪ ಹೆದ್ದಾರಿಯಲ್ಲಿರುವ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರ ಜೆಕೆ ಭವನದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ, ಶಿಡ್ಲಘಟ್ಟ ಕ್ಷೇತ್ರದ ಶಾಸಕ ಮೇಲೂರು ಬಿ.ಎನ್. ರವಿಕುಮಾರ್, ಗೌರಿಬಿದನೂರು ಕ್ಷೇತ್ರದ ಜೆಡಿಎಸ್ ಮುಖಂಡ ನರಸಿಂಹಮೂರ್ತಿ ಸೇರಿದಂತೆ ಹಲವು ನಾಯಕರು ಸಮ್ಮತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಜತೆ ಮೈತ್ರಿ ಆಗದಿದ್ದರೆ ಜೆಡಿಎಸ್‌ಗೆ ಉಳಿಗಾಲವಿಲ್ಲ: ಮಾಜಿ ಸಂಸದ ಶಿವರಾಮೇಗೌಡ

ಜೆಡಿಎಸ್‌ ಬಲಿಷ್ಠ ಕ್ಷೇತ್ರ ಪಕ್ಷಕ್ಕೇ ಇರಲಿ

ಬಳಿಕ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ‌ಮಾತನಾಡಿ, ಮುಂಬರುವ 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ. ಆದರೆ ಜೆಡಿಎಸ್ ಬಲಿಷ್ಟವಾಗಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೋಡುವ ಕುರಿತು ಎರಡೂ ಪಕ್ಷಗಳ ಹಿರಿಯ ನಾಯಕರು ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದರು.

ಜೆಡಿಎಸ್ ವರಿಷ್ಠರಿಗೆ ಈಗಾಗಲೇ ನಮ್ಮ ಸಹಮತದ ಅಭಿಪ್ರಾಯದ ಬಗ್ಗೆ ತಿಳಿಸಲಾಗಿದೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಹುತೇಕ ಫಿಕ್ಸ್ ಆಗಲಿದೆ. ಆದರೆ ಯಾವ-ಯಾವ ಕ್ಷೇತ್ರ ನಮಗೆ ಬಿಟ್ಟುಕೊಡಬೇಕು ಎಂಬುದು ತೀರ್ಮಾನವಾಗಿಲ್ಲ. ಈ ಬಗ್ಗೆ ವರಿಷ್ಠರು ಚರ್ಚೆ ನಡೆಸಿ ತೀರ್ಮಾನ ಮಾಡಿಕೊಳ್ಳಲಿದ್ದಾರೆ. ನಮ್ಮ ವರಿಷ್ಟರ ತಿರ್ಮಾನದಂತೆ ನಾವುಗಳು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

ವರಿಷ್ಟರ ತೀರ್ಮಾನಕ್ಕೆ ಬದ್ಧ

ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದ ಶಾಸಕ ಮೇಲೂರು ಬಿ.ಎನ್. ರವಿಕುಮಾರ್ ಮಾತನಾಡಿ, 2024ರ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಎರಡೂ ಜಿಲ್ಲೆಯ ನಾಯಕರು ಒಮ್ಮತದಿಂದ ಸಹಮತ ವ್ಯಕ್ತಪಡಿಸುತ್ತೇವೆ. ನಾವು ಬಿಜೆಪಿಗೆ ಸಪೋರ್ಟ್ ಅಂತ ಹೇಳುವುದಲ್ಲ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ. ಹಾಗಾಗಿ ಈ ಭಾಗದಲ್ಲಿ ಬಿಜೆಪಿ ನಮಗೆ ಸಪೋರ್ಟ್ ಮಾಡಲಿದೆ. ಹಾಗಾಗಿ ನಮ್ಮ ವರಿಷ್ಠರ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ ಅಂತ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಹಾಲಿ‌ ಶಾಸಕರಾದ ಶ್ರೀನಿವಾಸಪುರ ಜಿ.ಕೆ. ವೆಂಕಟಶಿವಾರೆಡ್ಡಿ, ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಜೆಡಿಎಸ್ ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮುನೇಗೌಡ, ಮುಖಂಡರಾದ ಕೋಲಾರದ ಸಿ.ಎಂ.ಆರ್ ಶ್ರೀನಾಥ್, ಮಾಲೂರು ರಾಮೇಗೌಡ, ಬಂಗಾರಪೇಟೆ ಮಲ್ಲೇಶಬಾಬು, ವಕ್ಕಲೆರಿರಾಮು, ಗೌರಿಬೀದನೂರು ನರಸಿಂಹಮೂರ್ತಿ, ಸೇರಿದಂತೆ ಎರಡು ಜಿಲ್ಲೆಗಳ ಜೆಡಿಎಸ್ ಪಕ್ಷದ ಮುಖಂಡರು ಮತ್ತಿತರರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್