ಜೆಡಿಎಸ್ ಪಾಲಾದ ವಿಧಾನ ಪರಿಷತ್ ಉಪಸಭಾಪತಿ ಸ್ಥಾನ

By Web DeskFirst Published Dec 19, 2018, 5:29 PM IST
Highlights

ಹಗ್ಗಜಗ್ಗಾಟದ ನಡುವೆಯೂ ವಿಧಾನ ಪರಿಷತ್ ಸಭಾಪತಿ ಸ್ಥಾನ ಕಾಂಗ್ರೆಸ್ ಪಾಲಾಗಿತ್ತು. ಈಗ ಉಪಸಭಾಪತಿ ಸ್ಥಾನ ಜೆಡಿಎಸ್ ಪಾಲಾಗಿದೆ.

ಬೆಳಗಾವಿ, (ಡಿ.19): ವಿಧಾನ ಪರಿಷತ್ ಉಪಸಭಾಪತಿಯಾಗಿ ಜೆಡಿಎಸ್ ಸದಸ್ಯ ಎಸ್.ಎಲ್ ಧರ್ಮೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು (ಬುಧವಾರ) ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ಉಪಸಭಾಪತಿ ಹೆಸರು ಘೋಷಣೆ ಮಾಡಿದರು. ಉಪ ಸಭಾಪತಿಯಾಗಿ ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಆಯ್ಕೆಯಾಗುವ ನಿರೀಕ್ಷೆ ಇತ್ತು.

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಚ್ಚರಿ ಹೆಸರು, ಹೊರಟ್ಟಿಗೆ ಮಂತ್ರಿಗಿರಿ ನಾ..?

ಮತ್ತೊಂದೆಡೆ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಮತ್ತೊಮ್ಮೆ ಆಯ್ಕೆ ಬಯಸಿ ಪ್ರಯತ್ನ ನಡೆಸಿದ್ದರು. ಆದರೆ, ಅಚ್ಚರಿಯ ಬೆಳವಣಿಗೆಯಲ್ಲಿ ಜೆಡಿಎಸ್ ವರಿಷ್ಠರು ಧರ್ಮೇಗೌಡ ಅವರನ್ನು ಅಭ್ಯರ್ಥಿಯಾಗಿಸಿದರು.

ಇನ್ನು ಮೊನ್ನೇ ಅಷ್ಟೇ ವಿಧಾನ ಪರಿಷತ್ ಸ್ಥಾನದಿಂದ ಜೆಡಿಎಸ್ ಸದಸ್ಯ ಬಸವರಾಜ್ ಹೊರಟ್ಟಿ ಅವರನ್ನು ಕೆಳಗಿಳಿಸಿ ಕಾಂಗ್ರೆಸ್ ನ ಪ್ರತಾಪಚಂದ್ರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿತ್ತು.

ಇದ್ರಿಂದ ಬಸವರಾಜ್ ಹೊರಟ್ಟಿ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕ ನಡೆಗೆ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

click me!