ಬೆಂಗಳೂರು: 7 ವರ್ಷ ಕಳೆದ್ರೂ ಮುಗಿಯದ ಕೆಂಪೇಗೌಡ ಬಡಾವಣೆ, ಕಾಮಗಾರಿ ಪೂರ್ಣಗೊಳಿಸಲು ಶರವಣ ಆಗ್ರಹ

Published : Jul 13, 2023, 09:52 PM ISTUpdated : Jul 13, 2023, 09:54 PM IST
ಬೆಂಗಳೂರು: 7 ವರ್ಷ ಕಳೆದ್ರೂ ಮುಗಿಯದ ಕೆಂಪೇಗೌಡ ಬಡಾವಣೆ, ಕಾಮಗಾರಿ ಪೂರ್ಣಗೊಳಿಸಲು ಶರವಣ ಆಗ್ರಹ

ಸಾರಾಂಶ

ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನ ಪೂರ್ಣಗೊಳಿಸುವಲ್ಲಿ ಬಿಡಿಎ ವಿಫಲವಾಗಿದೆ ಎಂದು ಆರೋಪಿಸಿದ ಟಿ.ಎ. ಶರವಣ 

ಬೆಂಗಳೂರು(ಜು.13):  ನಗರದಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣವಾಗಿ 7 ವರ್ಷ ಕಳೆದರೂ ಸಮಗ್ರ ಅಭಿವೃದ್ಧಿಯನ್ನು ಕಂಡಿಲ್ಲ. ಈ ಪ್ರಕರಣದ ಬಗ್ಗೆ  RERA ದಲ್ಲಿ ಕೇಸ್ ದಾಖಲಾಗಿದೆ. 2021-22 ರ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜೆಡಿಎಸ್‌ ಎಂಎಲ್‌ಸಿ ಟಿ.ಎ. ಶರವಣ  ತಿಳಿಸಿದ್ದಾರೆ. 

ಇಂದು(ಗುರುವಾರ) ಸದನದ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಟಿ.ಎ. ಶರವಣ ಅವರು, ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನ ಪೂರ್ಣಗೊಳಿಸುವಲ್ಲಿ ಬಿಡಿಎ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. 

ಕೆಂಪೇಗೌಡ ಲೇಔಟಲ್ಲಿ 180 ಎಕರೆಯ ಸೈಟ್‌ ಅಕ್ರಮವಾಗಿ ಪರಿವರ್ತಿಸಿ ಮಾರಾಟ..?

ನಿವೇಶನ ಪಡೆದ ಜನರು ಬ್ಯಾಂಕ್‌ನಿಂದ ಮನೆ ನಿರ್ಮಾಣಕ್ಕೆ ಸಾಲ ಪಡೆದು ವಾಣಿಜ್ಯ ಬಡ್ಡಿ ದರ ಗೃಹ ಸಾಲ ಬಡ್ಡಿ ದರದಿಂದ ತೊಂದರೆ ಅನುಭವಿಸುತ್ತಿದ್ದಾರೆ. ಬಡಾವಣೆಯ ವಿವಿಧೆಡೆಯಲ್ಲಿ ನಿವೇಶನ ಅಭಿವೃದ್ಧಿ, ರಸ್ತೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಟಿ.ಎ. ಶರವಣ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ