ಚನ್ನಪಟ್ಟಣ ಉಪಚುನಾವಣೆ ಕಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಜನಾಂಗೀಯ ದ್ವೇಷದ ಮಾತುಗಳನ್ನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಚುನಾವಣಾ ಪ್ರಚಾರದ ಭಾಷಣದ ವೇಳೆ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಕರೆದಿದ್ದಾರೆ.
ಬೆಂಗಳೂರು (ನ.11): 'ಬಿಜೆಪಿ ಅವರಿಗಿಂತ ಕರಿಯ ಕುಮಾರಸ್ವಾಮಿ ಖತರ್ನಾಕ್..' ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. ವರ್ಣನಿಂದಕ ಹಾಗೂ ಜನಾಂಗೀಯ ದ್ವೇಷಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಒತ್ತಾಯ ಮಾಡಿದೆ. ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಸಂದರ್ಭಧಲ್ಲಿ ಜಮೀರ್ ಅಹ್ಮದ್ ಖಾನ್ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾನುವಾರ ರಾತ್ರಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಪ್ರಚಾರ ಮಾಡಿದ್ದ ಜಮೀರ್ ಅಹ್ಮದ್ ಖಾನ್, ಮಾತಿ ಭರಾಟೆಯಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಹೇಳಿದ್ದಾರೆ. ಹಿಂದಿ ಹಾಗೂ ಉರ್ದು ಭಾಷೆಯಲ್ಲಿ ಕಾಲಾ ಎಂದರೆ ಕರಿಯ ಎಂದರ್ಥ. ಕಪ್ಪು ವರ್ಣದವರ ವಿರುದ್ಧ ಜಮೀರ್ ಜನಾಂಗೀಯ ನಿಂದನೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಜೆಡಿಎಸ್, 'ವರ್ಣನಿಂದಕ, ಜನಾಂಗೀಯ ದ್ವೇಷಿ ಮಿಸ್ಟರ್ ಜಮೀರ್, ನಿನ್ನನ್ನು ರಾಜಕೀಯವಾಗಿ ಬೆಳೆಸಿದ್ದ ದೇವೇಗೌಡರ ಕುಟುಂಬವನ್ನೇ ಖರೀದಿ ಮಾಡುತ್ತೇನೆ ಎನ್ನುವ ನಿನ್ನ ಅಧಿಕಾರ ಮತ್ತು ದುಡ್ಡಿನ ದರ್ಪ ಹೆಚ್ಚು ದಿನ ಉಳಿಯಲ್ಲ.. ನಿನ್ನ ಸೊಕ್ಕಿನ ಮಾತಿಗೆ, ಕಪ್ಪು ವರ್ಣದ ಬಗ್ಗೆ ನಿನಗಿರುವ ಹೊಲಸು ಮನಸ್ಥಿತಿಗೆ ರಾಜ್ಯದ ಜನರು ತಕ್ಕ ಉತ್ತರ ನೀಡುತ್ತಾರೆ..' ಎಂದು ಬರೆದಿದೆ.
ಅದರೊಂದಿಗೆ ಕನ್ನಡಿಗರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಬಣ್ಣ ಯಾವುದು ? ಹೆಚ್.ಸಿ. ಮಹದೇವಪ್ಪ ಅವರ ಬಣ್ಣ ಯಾವುದು ? ಸತೀಶ್ ಜಾರಕಿಹೊಳಿ ಅವರ ಬಣ್ಣ ಯಾವುದು ? ಪ್ರಿಯಾಂಕ್ ಖರ್ಗೆ ಅವರ ಬಣ್ಣ ಯಾವುದು ? ಕೆ.ಹೆಚ್. ಮುನಿಯಪ್ಪ ಅವರ ಬಣ್ಣ ಯಾವುದು ?ಕೆ.ಜೆ. ಜಾರ್ಜ್ ಅವರ ಬಣ್ಣ ಯಾವುದು ? ಡಿ.ಕೆ. ಸುರೇಶ್ ಅವರ ಬಣ್ಣ ಯಾವುದು ? ರಹೀಮ್ ಖಾನ್ ಅವರ ಬಣ್ಣ ಯಾವುದು ? ಮನುಷ್ಯರ ಚರ್ಮ ಕಪ್ಪಾದರೇನು, ಬಿಳಿಯಾದರೇನು ? ಇಷ್ಟೊಂದು ಕೀಳು ಮನಸ್ಥಿತಿಯ ವ್ಯಕ್ತಿ ಜಮೀರ್ ಅಹ್ಮದ್ ಅವರನ್ನು ಈ ಕೂಡಲೇ ರಾಷ್ಟ್ರೀಯ ಕಾಂಗ್ರೆಸ್,ರಾಜ್ಯ ಕಾಂಗ್ರೆಸ್ , ಹಾಗೂ ಸಿದ್ದರಾಮಯ್ಯ ಸಂಪುಟದಿಂದ ವಜಾಮಾಡಿ'ಎಂದು ಪೋಸ್ಟ್ ಮಾಡಿದೆ.
undefined
ಭಾನುವಾರ ರಾತ್ರ ಪ್ರಚಾರದ ವೇಳೆ, 'ಸಿ.ಪಿ.ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭಿಸಿದರು. ನಂತರ ಜೆಡಿಎಸ್‌ಗೆ ಹೋಗಬೇಕು ಎಂದುಕೊಂಡಿದ್ದರು. ಆದರೆ ಕೆಲವು ವ್ಯತ್ಯಾಸಗಳಾಸಗಿ ಬಿಜೆಪಿಗೆ ಹೋದರು. ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಎಂಬ ಕಾರಣಕ್ಕೆ ಜೆಡಿಎಸ್‌ಗೆ ಹೋಗಿಲ್ಲ. ಈ ಹಿಂದೆ ಹಿಜಾಬ್ ಬೇಡ ಎಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡುತ್ತಾನಂತೆ. ಏ ಕುಮಾರಸ್ವಾಮಿ ನೀನ್ ರೇಟು ಹೇಳು, ಮುಸಲ್ಮಾನರು ಒಂದೊಂದು ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ..' ಎಂದು ವಾಗ್ದಾಳಿ ಮಾಡಿದ್ದರು.\
77 ವರ್ಷದ ಹಿಂದಿನ ಕೇಕ್ ಪೀಸ್ ಹರಾಜಿನಲ್ಲಿ 2.36 ಲಕ್ಷ ರೂಪಾಯಿಗೆ ಮಾರಾಟ!
ಇದಕ್ಕೂ ಮುನ್ನ ಮತ್ತೊಂದು ಟ್ವೀಟ್ ಮಾಡಿದ್ದ ಜೆಡಿಎಸ್, ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಜನಾಂಗೀಯ ನಿಂದನೆ ಮಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ "ಕಾಲಾ ಕುಮಾರಸ್ವಾಮಿ" (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್ ಅಹ್ಮದ್ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ.
ಈ ಕೂಡಲೇ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ರಾಮನಗರ ಎಸ್‌ಪಿ, ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಖರ್ಗೆ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್ ರಾಜೀನಾಮೆ ಪಡೆಯಬೇಕು ಎಂದು ಪೋಸ್ಟ್ ಮಾಡಿತ್ತು.
ಬೆಂಗಳೂರು-ಮಂಗಳೂರು ನಡುವೆ ಎಲ್ಲಾ ಕಾಲಕ್ಕೂ ಸಲ್ಲುವ ಹೈ-ಸ್ಪೀಡ್ ರೋಡ್, 2028ರಿಂದ ನಿರ್ಮಾಣ ಕಾರ್ಯ?
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜನಾಂಗೀಯ ನಿಂದನೆ ಮಾಡಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ "ಕಾಲಾ… pic.twitter.com/fPOGcbgBgX