ಇಂದು ಮೈಸೂರಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ

Published : Mar 26, 2023, 04:45 AM IST
ಇಂದು ಮೈಸೂರಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ

ಸಾರಾಂಶ

ಮೂರು ತಿಂಗಳಿನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ರಥಯಾತ್ರೆಯ ಸಂಪನ್ನವು ಚಾಮುಂಡೇಶ್ವರಿ ಮತ್ತು ಉತ್ತನಹಳ್ಳಿ ತ್ರಿಪುರಸುಂದರಿ ದೇವಿಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವ ನಿಗದಿಯಂತೆ ಸಂಜೆ 4.30ರ ನಂತರ ಕಾರ್ಯಕ್ರಮ ನಡೆಯಲಿದ್ದು. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವರು. 

ಮೈಸೂರು(ಮಾ.26):  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಆಯೋಜಿಸಿದ್ದ ಪಂಚರತ್ನ ರಥಯಾತ್ರೆಯ ಇಂದು(ಭಾನುವಾರ) ಸಂಜೆ 4.30ಕ್ಕೆ ನಗರದ ಹೊರ ವಲಯದಲ್ಲಿನ ಉತ್ತನಹಳ್ಳಿ ಸಮೀಪ ನಡೆಯಲಿದೆ.

ಮೂರು ತಿಂಗಳಿನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ರಥಯಾತ್ರೆಯ ಸಂಪನ್ನವು ಚಾಮುಂಡೇಶ್ವರಿ ಮತ್ತು ಉತ್ತನಹಳ್ಳಿ ತ್ರಿಪುರಸುಂದರಿ ದೇವಿಯ ಸನ್ನಿಧಿಯಲ್ಲಿ ನಡೆಯಲಿದೆ. ಪೂರ್ವ ನಿಗದಿಯಂತೆ ಸಂಜೆ 4.30ರ ನಂತರ ಕಾರ್ಯಕ್ರಮ ನಡೆಯಲಿದ್ದು. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದಲ್ಲದೇ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸೇರಿದಂತೆ ಹಲವಾರು ಮುಖಂಡರು, ಶಾಸಕರು, ಮಾಜಿ ಶಾಸಕರು ಭಾಗವಹಿಸುವರು.

ಕೋಲಾರ, ವರುಣ ಎರಡೂ ಕಡೆ ಸಿದ್ದರಾಮಯ್ಯ ಸ್ಪರ್ಧೆ: ಪುತ್ರ ಯತೀಂದ್ರ

ರಥಯಾತ್ರೆಯ ಸಮಾರೋಪದ ಹಿನ್ನೆಲೆಯಲ್ಲಿ ನಗರದ ಶ್ರೀರಾಂಪುರ ಬಳಿಯಿಂದ ಆಯೋಜಿಸಿದ್ದ ರೋಡ್‌ ಶೋ ಅನಿವಾರ್ಯ ಕಾರಣಗಳಿಂದ ರದ್ದುಪಡಿಸಿದ್ದು, ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಮೆರವಣಿಗೆಯಲ್ಲಿ ಬರುವರು. ನವೆಂಬರ್‌ನಿಂದ ರಾಜ್ಯದ ಬಹುತೇಕ ಎಲ್ಲಾ ಕ್ಷೇತ್ರಗಳನ್ನು ಸಂಪರ್ಕಿಸಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಆಡಳಿತಾರೂಢ ಬಿಜೆಪಿ ಮತ್ತು ಅಧಿಕೃತ ವಿರೋಧಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದರು. ವಿವಿಧ ಬಗೆಯ ಹಾರಗಳ ಮೂಲಕವೇ ಈ ರಥಯಾತ್ರೆ ಪ್ರಚಾರದಲ್ಲಿತ್ತು. ಈಗ ಮೈಸೂರಿನಲ್ಲಿ ಲಕ್ಷಾಂತರ ಮಂದಿಯನ್ನು ಸೇರಿಸುವ ಮೂಲಕ ತನ್ನ ಭದ್ರಕೋಟೆಯಾದ ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್‌ ಶಕ್ತಿಪ್ರದರ್ಶನಕ್ಕೆ ಮುಂದಾಗಿದೆ.
ಒಂದು ಕಾಲಕ್ಕೆ ಜೆಡಿಎಸ್‌ ಭದ್ರಕೋಟೆಯಾಗಿದ್ದ ಮೈಸೂರಿನಲ್ಲಿ ನಡು ನಡುವೆ ಕಾಂಗ್ರೆಸ್‌ ಚಿಗುರೊಡೆಯಿತು. ಆದರೆ ಮತ್ತೆ ಈ ಬಾರಿ ಹೆಚ್ಚು ಸ್ಥಾನಗಳನ್ನು ಹಳೇ ಮೈಸೂರು ಭಾಗದಲ್ಲಿ ಪಡೆಯಬೇಕು ಎಂಬು ಉತ್ಸಾಹದಲ್ಲಿ ಪಕ್ಷದ ವರಿಷ್ಠರಿದ್ದಾರೆ. ಈ ಎಲ್ಲಾ ಕಾರಣಗಳಿಂದ ಈ ಪಂಚರತ್ನ ರಥಯಾತ್ರೆಯ ಸಮಾರೋಪವು ಪ್ರಾಮುಖ್ಯತೆ ಪಡೆದಿದೆ.

ಲಕ್ಷಾಂತರ ಮಂದಿಯನ್ನು ಸೇರಿಸುವ ಉದ್ದೇಶದಿಂದ ನಗರದ ಹೊರ ವಲಯದಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿದೆ. ಈ ಹಿಂದೆ ಮಹಾರಾಜ ಕಾಲೇಜು ಮೈದಾನ ಅಥವಾ ಇಲವಾಲ ಸಮೀಪ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಆದರೆ ಈಗ ನಡೆಯುತ್ತಿರುವ ಸಮಾರೋಪದ ಸ್ಥಳ ಹೊಸದು. ಜೊತೆಗೆ ಸಮೀಪದಲ್ಲಿಯೇ ಚಾಮುಂಡೇಶ್ವರಿ ಬೆಟ್ಟಮತ್ತು ಉತ್ತನಹಳ್ಳಿ ತ್ರಿಪುರಸುಂದರಿ ದೇವಸ್ಥಾನ ಇರುವುದು ಇಲ್ಲಿನ ವಿಶೇಷ. ಅಲ್ಲದೆ ಸಂಜೆ ವೇಳೆ ಕಾರ್ಯಕ್ರಮ ಆಯೋಜಿಸಿರುವುದೂ ಕೂಡ ಶಾಸೊತ್ರೕಕ್ತವಾಗಿ ಎನ್ನಲಾಗಿದೆ.

ಸುತ್ತೂರು ಶಾಖಾ ಮಠಕ್ಕೆ ಭೇಟಿಕೊಟ್ಟ ಕೇಂದ್ರ‌ ಸಚಿವ ರಾಜೀವ್‌ ಚಂದ್ರಶೇಖರ್

ಮೈಸೂರಿನ ವರುಣ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಲು ತೀರ್ಮಾನಿಸಿರುವಾಗಲೇ ಪಕ್ಕದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ ಸಮಾವೇಶ ನಡೆಯುತ್ತಿರುವುದು ಪ್ರಾಮುಖ್ಯತೆ ಪಡೆದಿದೆ.

ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಶಾಸಕರಾದ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್‌, ಅಶ್ವಿನ್‌ಕುಮರ್‌, ವಿಧಾನ ಪರಿಷತ್‌ ಸದಸ್ಯರಾದ ಬೋಜೇಗೌಡ, ಸಿ.ಎನ್‌. ಮಂಜೇಗೌಡ ಸೇರಿದಂತೆ ಅನೇಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ತೆರೆದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ ಮಾಡಲಾಗಿದೆ.

ಶನಿವಾರ ಸಂಜೆ ಖುದ್ದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ವೇದಿಕೆ ಸಿದ್ಧತೆಯನ್ನು ಪರಿಶೀಲಿಸಿದರು. ಈ ವೇಳೆ ಶಾಸಕರಾದ ಜಿ.ಟಿ. ದೇವೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌