ಮಳೆ: ಜೆಡಿಎಸ್‌ ಪಂಚರತ್ನ ಯಾತ್ರೆ 4 ದಿನ ಮುಂದೂಡಿಕೆ, ಕುಮಾರಸ್ವಾಮಿ

By Kannadaprabha News  |  First Published Dec 11, 2022, 2:00 AM IST

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ. 


ಬೆಂಗಳೂರು(ಡಿ.11):  ಇಂದಿನಿಂದ(ಭಾನುವಾರ) ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕುಮಾರಸ್ವಾಮಿ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ. ಪೂರ್ವನಿಗದಿತ ವೇಳಾಪಟ್ಟಿಯಂತೆ ರಥಯಾತ್ರೆಯು ಚಿಕ್ಕನಾಯಕನಹಳ್ಳಿಯಿಂದ ಶುರುವಾಗಬೇಕಿತ್ತು. ನಂತರ ತುರುವೇಕೆರೆ, ತುಮಕೂರು ಗ್ರಾಮಾಂತರ, ಕುಣಿಗಲ್‌ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಬೇಕಿತ್ತು ಎಂದಿದ್ದಾರೆ.

Tap to resize

Latest Videos

JDS Pancharatna Rathayatra: ಜೆಡಿಎಸ್‌ ಪಂಚರತ್ನ ಯಾತ್ರೆಗೆ ತುಮಕೂರಲ್ಲಿ ಭವ್ಯ ಸ್ವಾಗತ

ತುಮಕೂರು ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಿರುವ ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಕಾರಣಕ್ಕೆ ಪಂಚರತ್ನ ರಥಯಾತ್ರೆ ಮಾರ್ಗ, ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಡಿ.15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿ.27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ.27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್‌ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಡಿ.16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣದಲ್ಲಿ ಪಂಚರತ್ನ ರಥಯಾತ್ರೆ ಜರುಗಲಿದೆ. ಡಿ.20ರಂದು ಮಂಡ್ಯ ಜಿಲ್ಲೆಗೆ ಯಾತ್ರೆ ಪ್ರವೇಶಿಸಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್‌.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಹೇಳಿದ್ದಾರೆ.
 

click me!