ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಫೆ.21ರಂದು ನಗರಕ್ಕೆ ಪಂಚರತ್ನ ಯಾತ್ರೆ ಮೂಲಕ ಆಗಮಿಸಲಿದ್ದು, ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷತೆಯಾಗಿದೆ.
ಭದ್ರಾವತಿ (ಫೆ.18) : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಫೆ.21ರಂದು ನಗರಕ್ಕೆ ಪಂಚರತ್ನ ಯಾತ್ರೆ ಮೂಲಕ ಆಗಮಿಸಲಿದ್ದು, ಒಂದೇ ತಿಂಗಳಿನಲ್ಲಿ 2ನೇ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷತೆಯಾಗಿದೆ.
ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿ ಫೆ.3ರಂದು ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮಾತನಾಡುವ ಮೂಲಕ ವಿಐಎಸ್‌ಎಲ್ ಕಾರ್ಖಾನೆ(VISL) ಉಳಿಸಿಕೊಳ್ಳುವ ಭರವಸೆ ನೀಡಿದ್ದರು. ಈ ನಡುವೆ ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚುವ ಕುರಿತು ಸ್ಪಷ್ಟಪಡಿಸಿದೆ. ಇದರಿಂದಾಗಿ ಕಾರ್ಮಿಕ ವಲಯದಲ್ಲಿ ಆತಂಕದ ಕಾರ್ಮೋಡ ಆವರಿಸಿಕೊಂಡಿದೆ. ಕಾರ್ಖಾನೆ ಉಳಿಸುವ ಸಂಬಂಧ ಕುಮಾರಸ್ವಾಮಿ ಅವರ ಮುಂದಿನ ನಿಲುವಿಗಾಗಿ ಎದುರು ನೋಡುವಂತಾಗಿದೆ.
undefined
ಯಡಿಯೂರಪ್ಪ ಅವರನ್ನು ನೇಗಿಲಯೋಗಿ ಎಂದಿದ್ದರು ವಾಜಪೇಯಿ: ಸಂಸದ ಬಿವೈ ರಾಘವೇಂದ್ರ
ರಾಜ್ಯಾದ್ಯಂತ ಪಂಚರತ್ನ ಯಾತ್ರೆ(Pancharatna rathayatre) ಸಂಚರಿಸುತ್ತಿದ್ದು, ಫೆ.21ರಂದು ಬೆಳಗ್ಗೆ 9 ಗಂಟೆಗೆ ತಾಲೂಕಿನ ಗಡಿಭಾಗ ಕಾರೇಹಳ್ಳಿಗೆ ಆಗಮಿಸಲಿದೆ. ಅನಂತರ ಯಾತ್ರೆ ಕೆಂಪೇಗೌಡ ನಗರ, ಬಾರಂದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್‌ನಗರ, ಯರೇಹಳ್ಳಿ, ಮಾರುತಿನಗರ, ಶಿವನಿ ಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್.ನಗರ, ಅಂತರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್‌ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್ ಬ್ರಿಡ್ಜ್, ಹೊಸ ಸೇತುವೆ, ಕೆಎಸ್‌ಆರ್‌ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕ ಮಂಟಪ ಮೈದಾನ ತಲುಪಲಿದೆ.
ಸಂಜೆ 4 ಗಂಟೆಗೆ ಕನಕ ಮಂಟಪ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ(HD Kumaraswamy), ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ(CM Ibrahim), ವಿಧಾನ ಪರಿಷತ್ತು ಸದಸ್ಯ ಭೋಜೇಗೌಡ, ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ, ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಕರುಣಾಮೂರ್ತಿ, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
Karnataka Budget 2023: ಕ್ಯಾನ್ಸರ್ ಆಸ್ಪತ್ರೆಗೆ ಮತ್ತೆ ಜೈ, ಉಳಿದಿದ್ದಕ್ಕೆ ಬೈಬೈ!...