ತನ್ನದೇ ಅಭ್ಯರ್ಥಿ ಬಿಟ್ಟು ಪಕ್ಷೇತರಗೆ ಜೆಡಿಎಸ್‌ ಬೆಂಬಲ!

By Kannadaprabha NewsFirst Published Oct 23, 2020, 7:45 AM IST
Highlights

ಅಚ್ಚರಿ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಇದೀಗ ವಿಚಿತ್ರ ನಿರ್ಧಾರ ತೆಗೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿಗೆ ತನ್ನ ಬೆಂಬಲ ನೀಡುತ್ತಿದೆ. 

ಬೆಂಗಳೂರು(ಅ.23):  ವಿಧಾನಪರಿಷತ್ತಿನ ಚುನಾವಣೆಯ ಪ್ರಚಾರ ಭರದಿಂದ ನಡೆಯುತ್ತಿರುವ ಹೊತ್ತಿನಲ್ಲಿ ತನ್ನ ಅಭ್ಯರ್ಥಿ ಕಣದಲ್ಲಿದ್ದರೂ ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಲು ಜೆಡಿಎಸ್‌ ದಿಢೀರ್‌ ನಿರ್ಧಾರ ಕೈಗೊಂಡಿದೆ.

ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಪಕ್ಷವು ಬೆಂಬಲ ನೀಡಲಿದೆ ಎಂದು ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಂದು ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ಘೋಷಣೆ ಮಾಡಿದ್ದಾರೆ.

ಹತ್ತು ಜನ ಮಾಡುವ ಕೆಲ್ಸ ಒಬ್ಬ ಮಾಡ್ತಾರೆ, ಮುನಿರತ್ನ ಮಿನಿಸ್ಟರ್ ಫಿಕ್ಸ್! ...

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಶಂಕರ ಕಲ್ಲೂರ ಅವರು ಚುನಾವಣೆಯಲ್ಲಿ ತಟಸ್ಥ ಧೋರಣೆ ಅನುಸರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಲಾಗುವುದು. ಪಕ್ಷದ ತೀರ್ಮಾನವನ್ನು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಸೇರಿದಂತೆ ಎಲ್ಲರೂ ಬೆಂಬಲಿಸಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯನ್ನು ಹೆಚ್ಚಿನ ಮತಗಳ ಅಂತರದಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ.

ಬಸವರಾಜ ಗುರಿಕಾರ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್‌ನಿಂದ ಟಿಕೆಟ್‌ ಸಿಗದ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಜೆಡಿಎಸ್‌ನಿಂದ ಶಿವಶಂಕರ ಕಲ್ಲೂರ ಅವರು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್‌ ಪಡೆಯುವ ದಿನ ಮುಗಿದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹೆಸರು ಬ್ಯಾಲೆಟ್‌ ಪೇಟರ್‌ನಲ್ಲಿ ಮುದ್ರಣ ಮಾಡಲಾಗುತ್ತದೆ. ಪ್ರಸ್ತುತ ಸನ್ನಿವೇಶದಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣದಿಂದ ಹಿಂದೆ ಸರಿಯಲು ಸಾಧ್ಯವಿಲ್ಲ. ಹೀಗಾಗಿ ತಟಸ್ಥ ಧೋರಣೆ ತಳೆಯಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

click me!