
ಬೆಂಗಳೂರು(ಏ.24): ಮುಂಬರುವ ಮೇ.19ರಂದು ನಡೆಯಲಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ, ವಿಧಾನಸಭೆ ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಪಕ್ಷ ಬೆಂಬಲಿಸಲಿದೆ ಎಂದು ಘೋಷಿಸಿದರು.
ಆಡಳಿತಾರೂಢ ಸಮ್ಮಿಶ್ರ ಸರ್ಕಾರ ಎರಡೂ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಗೆ ಸಹಕರಿಸಲಿದ್ದಾರೆ ಎಂದು ದೇವೇಗೌಡ ಭರವಸೆ ನೀಡಿದ್ದಾರೆ.
ಸಚಿವ ಸಿ.ಎಸ್.ಶಿವಳ್ಳಿ ಹೃದಯಾಘಾತದಿಂದ ನಿಧನ ಹೊಂದಿದ್ದರಿಂದ ಕುಂದಗೋಳ ಕ್ಷೇತ್ರ ತೆರವಾಗಿದ್ದರೆ, ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರಿಂದ ಚಿಂಚೋಳಿ ವಿಧಾನಸಭಾ ಕ್ಷೇತ್ರ ತೆರವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.