ಮೂರು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ.
ರಾಯಚೂರು, (ಫೆ.10): ಮಸ್ಕಿ, ಬಸವಕಲ್ಯಾಣ, ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ಇದರ ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಬೈ ಎಲೆಕ್ಷನ್ ಎದುರಾಗಿದ್ದು, ಈ ತಿಂಗಳು ಅಂದ್ರ ಫೆಬ್ರವರಿ ಕೊನೆ ವಾರದಲ್ಲಿ ಉಪಚುನಾವಣೆಗೆ ದಿನಾಂಕ ಪ್ರಕಟವಾಗು ಎಲ್ಲಾ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ಮತ್ತು ಪಕ್ಷ ಸಂಘಟನೆಗಿಳಿದಿವೆ. ಇನ್ನು ಪ್ರಮುಖವಾಗಿ ಜೆಡಿಎಸ್ ಈ ಕಣದಿಂದ ಹಿಂದೆ ಸರಿದಿದ್ದು, ಬಿಜೆಪಿಗೆ ವರದಾನವಾಗಲಿದೆ.
ಹೌದು..3 ವಿಧಾನಸಭಾ ಮತ್ತು 1 ಲೋಕಸಭಾ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನಕ್ಕೆ ಬಂದಿದೆ. ಈ ಬಗ್ಗೆ ಸ್ವತಃ ದೇವೇಗೌಡ್ರೇ ಖಚಿತಪಡಿದ್ದಾರೆ.
ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಬೈ ಎಲೆಕ್ಷನ್: ಚುನಾವಣಾಧಿಕಾರಿ ಮಹತ್ವದ ಮಾಹಿತಿ
ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ನಿಲ್ಲಿಸುವ ಕುರಿತು ಕುಮಾರಸ್ವಾಮಿ ಅವರು ಕೈಗೊಂಡಿರುವ ನಿರ್ಧಾರ ಅಂತಿಮ ಎಂದು ದೇವೇಗೌಡರು ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಇಂದು ರಾಯಚೂರಿನಲ್ಲಿ ಮಾತನಾಡಿರುವ ದೇವೇಗೌಡ್ರು, ಈ ಬಾರಿಯ ಉಪ ಚುನಾವಣೆಗಳಿಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ. ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣದಲ್ಲಿ ಅಭ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉಪ ಚುನಾವಣೆಯಲ್ಲಿ ನಾವು ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಅದನ್ನು ಉಲ್ಲೇಖಿಸಿರುವ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣೆಗೆ ನಮ್ಮ ಪಕ್ಷದ ಅಬ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಸೂಕ್ತ ನಿರ್ಧಾರ. ಹೀಗಾಗಿ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದರು.
ಬಿಜೆಪಿಗೆ ಪ್ಲಸ್
ಹೌದು...ಉಪಚುನಾವಣೆಗೆ ಜೆಡಿಎಸ್ ಕಣಕ್ಕಿಳಿಯದಿರುವುದು ಆಡಳಿರೂಢ ಬಿಜೆಪಿಗೆ ಪ್ಲಸ್ ಆಗಲಿದೆ. ಹೇಗೆಂದರೆ, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ಹೊಸ ರಾಜಕೀಯ ಶುರುವಾಗಿದೆ.
ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್‌ಗೆ ಬಿಜೆಪಿ ಬಿಟ್ಟುಕೊಟ್ಟಿದೆ. ಇದೀಗ ಜೆಡಿಎಸ್ ಈ ಬೈಲೆಕ್ಷನ್‌ನಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲಿಸಿ ಸಭಾಪತಿ ಋಣ ತೀರಿಸುವ ಎಲ್ಲಾ ಸಾಧ್ಯತೆಗಳಿವೆ.