ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಜೀವ ಬೆದಕರಿಕೆ ಕೇಸ್..!

Published : Dec 06, 2019, 09:40 PM IST
ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ಧ ಜೀವ ಬೆದಕರಿಕೆ ಕೇಸ್..!

ಸಾರಾಂಶ

ಹಾಸನದಲ್ಲಿ ಜೆಡಿಎಸ್-ಬಿಜೆಪಿ ಮಧ್ಯೆ ಜಟಾಪಟಿ ಮುಂದುವರೆದಿದ್ದು, ಮಾಜಿ ಸಚಿವ ಎಚ್ ಡಿ ರೇವಣ್ಣ ಪುತ್ರನ ಮೇಲೆ FIR ದಾಖಲಾದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕ ಪ್ರೀತಂಗೌಡ ಮೇಲೆ ಎಫ್.ಐ.ಆರ್ ದಾಖಲಾಗಿದೆ.

ಹಾಸನ, [ಡಿ.06]:  ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಜೆಡಿಎಸ್ ಕಾರ್ಯಕರ್ತರನ್ನು ತಡೆದು ಹಲ್ಲೆ ಮಾಡಿದ್ದಾರೆ, ಜೀವ ಬೆದಕರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ಮಂಡ್ಯ: ಮಾಜಿ ಸಚಿವ ರೇವಣ್ಣ ಪುತ್ರನ ವಿರುದ್ಧ FIR

ಈ ಸಂಬಂಧ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ  ಎಫ್.ಐ.ಆರ್ ದಾಖಲಾಗಿದೆ. ಜೆಡಿಎಸ್ ಮುಖಂಡ ಪ್ರಭಾಕರ್ ಎಂಬುವವರು ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದಾರೆ. 

ಈಗಾಗಲೇ  ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪದಲ್ಲಿ ರೇವಣ್ಣ ಪುತ್ರ ಸೂರಜ್ ಹಾಗೂ ಇತರರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಕೆ.ಆರ್.ಪೇಟೆ ಉಪ ಚುನಾವಣ ಪ್ರಚಾರ ಮುಗಿಸಿ ವಾಪಸ್ ಹೋಗುವಾಗ ಹಲ್ಲೆ ಮಾಡಲಾಗಿದೆ ಎಂಬ ಆರೋಪದ ಮೇಲೆ ನಿಂಬೆಹಳ್ಳಿಯ ಶಿವಾನಂದ್ ಎಂಬುವವರ ದೂರು ದಾಖಲಿಸಿದ್ದಾರೆ.

ಒಟ್ಟಾರೆ ಕೆ.ಆರ್‌.ಪೇಟೆ ಉಪಚುನಾವಣೆ ಜಟಾಪಟಿಯಲ್ಲಿ ಮೂರು ಕೇಸ್​​ಗಳು ದಾಖಲಾಗಿವೆ. ಡಿಸೆಂಬರ್ 3ರ ರಾತ್ರಿ ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ರೇವಣ್ಣ ಪುತ್ರ ಸೂರಜ್ ವಿರುದ್ಧ ಕೇಸ್ ದಾಖಲಾಗಿತ್ತು. ಹಾಗೂ ನೆನ್ನೆ (ಗುರುವಾರ] ಬೆಂಗಳೂರಿನ ಬಿಜೆಪಿ ಕಾರ್ಪೊರೇಟರ್ ಆನಂದ್ ಹೊಸೂರ್ ವಿರುದ್ಧ ಕೇಸ್ ದಾಖಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!