ಕುಮಾರಸ್ವಾಮಿ ಅವರ ಸೇವೆ ಇವತ್ತಿಗೂ ರಾಜ್ಯಕ್ಕೆ ಅನಿವಾರ್ಯ: ನಿಖಿಲ್ ಕುಮಾರಸ್ವಾಮಿ

By Ravi Janekal  |  First Published Sep 4, 2024, 5:48 PM IST

ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ರಾಜಕೀಯ ಜನ್ಮ ನೀಡಿದ್ದು‌ ರಾಮನಗರ. ಚನ್ನಪಟ್ಟಣ ಕುಮಾರಸ್ವಾಮಿಯವರ ಸ್ವಕ್ಷೇತ್ರವಾಗಿದೆ. ಹೀಗಾಗಿ ನಾನು ಚನ್ನಪಟ್ಟಣದಲ್ಲಿ ಪ್ರವಾಸ ಮಾಡುತ್ತಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.


ಕೊಪ್ಪಳ (ಸೆ.4): ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ರಾಜಕೀಯ ಜನ್ಮ ನೀಡಿದ್ದು‌ ರಾಮನಗರ. ಚನ್ನಪಟ್ಟಣ ಕುಮಾರಸ್ವಾಮಿಯವರ ಸ್ವಕ್ಷೇತ್ರವಾಗಿದೆ. ಹೀಗಾಗಿ ನಾನು ಚನ್ನಪಟ್ಟಣದಲ್ಲಿ ಪ್ರವಾಸ ಮಾಡುತ್ತಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇಂದು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಸಂಸದನಾಗಬೇಕು, ಶಾಸಕನಾಗಬೇಕು ಅನ್ನೋ ಹಪಾಹಪಿಯಿಂದ ರಾಜಕೀಯಕ್ಕೆ ಬಂದಿಲ್ಲಾ. ಚನ್ನಪಟ್ಟಣ ಅಷ್ಟೇ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ. ಆ ಮೂಲಕ  ಕಟ್ಟ ಕಡೆಯ ಕಾರ್ಯಕರ್ತನನ್ನು ಹುಡುಕಿ ಅವರಿಗೆ ಅಧಿಕಾರ ನೀಡಲು ಕೆಲಸ ಮಾಡುತ್ತೇನೆ ಎಂದರು.

Tap to resize

Latest Videos

undefined

ದಸರಾ ಉದ್ಘಾಟಕರ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ: ಸಚಿವ ಹೆಚ್‌ಸಿ ಮಹದೇವಪ್ಪ

ರಾಮನಗರ, ಚನ್ನಪಟ್ಟಣದಲ್ಲಿ ನಮ್ಮ ದೊಡ್ಡ ಕಾರ್ಯಕರ್ತರ ಪಡೆ ಇದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಚುನಾವಣೆಯಲ್ಲಿ ಯಾರೇ ಸ್ಪರ್ಧಿಸಿದರೂ ಗೆಲುವು ಖಚಿತ. ರಾಮನಗರ ಚನ್ನಪಟ್ಟಣದಲ್ಲಿ ನಮ್ಮ ಕಾರ್ಯಕರ್ತರ ಪಡೆ ಬಲಿಷ್ಠವಾಗಿದೆ ಎಂದರು.

ಚಾಮುಂಡಿ ಬೆಟ್ಟದ ಪ್ರಾಧಿಕಾರದ ಸಭೆ ಅಕ್ರಮ, ನಾನು ಹೋಗಲ್ಲ: ಸಂಸದ ಯದುವೀರ್

ಎಲ್ಲಾ ಭಗವಂತನ ಆಟ ನಮ್ಮ ಕೈಯಲ್ಲಿ ಏನೂ ಇಲ್ಲ. ಜನರ ಬಯಕೆಯಂತೆ ನಾವು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಕಳೆದ ಚುನಾವಣೆಯಲ್ಲಿ 144 ವಿಧಾನಸಭೆ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ಹೆಚ್ಚಿನ ಮತ ಪಡೆದಿದೆ ಇದೀಗ ಮತ್ತೆ ಚುನಾವಣೆ ನಡೆದ್ರೆ ಮೈತ್ರಿ ಪಕ್ಷ 180 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕುಮಾರಸ್ವಾಮಿ ಅವರ ಸೇವೆ ಇವತ್ತಿಗೂ ರಾಜ್ಯಕ್ಕೆ ಅನಿವಾರ್ಯವಿದೆ

click me!