
ಪಾಟ್ನಾ, (ಡಿ.25): ಅರುಣಾಚಲ ಪ್ರದೇಶ ವಿಧಾನಸಭೆಯ 7 ಜೆಡಿಯು ಶಾಸಕರ ಪೈಕಿ 6 ಜನರು ಬಿಜೆಪಿಗೆ ಪಕ್ಷಾಂತರ ಮಾಡಿದ್ದಾರೆ. ಈ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಭಾರೀ ಮುಖಭಂಗವಾಗಿದೆ.
ಬಿಹಾರದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಯು ಸರ್ಕಾರ ರಚನೆ ಮಾಡಿದೆ. ಅರುಣಾಚಲದ ಈ ಬೆಳವಣಿಗೆ ಜೆಡಿಯುಗೆ ನುಂಗಲಾರದ ತುತ್ತಾಗಿದೆ.
ಬಿಹಾರದಲ್ಲಿ ಅಚ್ಚರಿಯ ಬೆಳವಣಿಗೆ, ನಿತೀಶ್‌ಗೆ ‘ಮಹಾಗಠಬಂಧನ’ ಆಫರ್!
60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್ ಪಾರ್ಟಿ ಆಫ್ ಅರುಣಾಚಲ ಪಕ್ಷದ ಬೆಂಬಲವೂ ಸೇರಿ ಬಿಜೆಪಿ ಈಗ 48 ಸದಸ್ಯ ಬಲವನ್ನು ಹೊಂದಿದಂತಾಗಿದೆ.
ಹಯೇಂಗ್ ಮಂಗ್ಫಿ, ಜಿಕ್ಕೆ ತಕೊ, ಡೊಂಗ್ರು ಸಿಯೊಂಗ್ಜು, ತಲೇಮ್ ತಬೋಹ್, ಕಾಂಗ್ಗಾಂಗ್ ಟಕು ಮತ್ತು ಡೋರ್ಜಿ ವಾಂಗ್ಡಿ ಖರ್ಮಾ ಬಿಜೆಪಿ ಸೇರಿದ ಶಾಸಕರು. ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗಿದ ಆರೋಪದ ಮೇಲೆ ಮೂವರನ್ನು ಸಸ್ಪೆಂಡ್ ಮಾಡಲಾಗಿತ್ತು ಮತ್ತು ನೋಟಿಸ್ ಕೂಡ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಮೆಚ್ಚಿ ಈ ಆರು ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಹೇಳಿದೆ.
ಅರುಣಾಚಲ ರಾಜಕೀಯ ಬೆಳವಣಿಗೆಯಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ಅರುಣಾಚಲ ಪ್ರದೇಶದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಬಿಜೆಪಿ (41) ನಂತರ ಅತಿ ಹೆಚ್ಚು ಸ್ಥಾನ ಗಳಿಸಿದ ಹೆಗ್ಗಳಿಕೆ ಜೆಡಿಯುನದ್ದಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.