
ರಾಂಚಿ:[ಡಿ.23]: ಐದು ಹಂತಗಳಲ್ಲಿ ಒಂದು ತಿಂಗಳ ಕಾಲ ನಡೆದ ಜಾರ್ಖಂಡ್ ವಿಧಾನಸಭೆ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ರಾಜ್ಯದ 24 ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, 81 ಕ್ಷೇತ್ರಗಳ ಚುನಾವಣಾ ಫಲಿತಾಂಶ ಬೆಳಗ್ಗೆ 11 ಅಥವಾ ಮಧ್ಯಾಹ್ನ 12 ಗಂಟೆ ಒಳಗಾಗಿ ಪ್ರಕಟವಾಗುವ ಸಾಧ್ಯತೆಯಿದೆ. ಆಡಳಿತಾರೂಢ ಬಿಜೆಪಿಗೆ ಜಾರ್ಖಂಡ್ ಜನತೆ ಸೋಲಿನ ರುಚಿ ತೋರಿಸುವ ಸಂಭವ ಇದೆ. ಜೆಎಂಎಂ ಹಾಗೂ ಕಾಂಗ್ರೆಸ್ ಮೈತ್ರಿಗೆ ಬಹುಮತ ದೊರೆಯುವ ಸಾಧ್ಯತೆ ಇದೆ ಎಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಸತ್ಯವಾಗಲಿವೆಯೇ ಅಥವಾ ಸುಳ್ಳಾಗಲಿವೆಯೇ ಎಂಬುದನ್ನು ಫಲಿತಾಂಶ ತಿಳಿಸಲಿದೆ.
ಜಾರ್ಖಂಡ್ ಎಕ್ಸಿಟ್ ಪೋಲ್ ಅಚ್ಚರಿ, ಹೀಗಾದ್ರೆ ಮುಂದೇನು?
ಏತನ್ಮಧ್ಯೆ, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಜೆಎಂಎಂ-ಕಾಂಗ್ರೆಸ್ ಮೈತ್ರಿಗೆ ಸ್ಪಷ್ಟಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಪಕ್ಕಾ ಎಂದು ಭವಿಷ್ಯ ನುಡಿದ ಹೊರತಾಗ್ಯೂ, ಜಾರ್ಖಂಡ್‌ನ ಜೆಎಂಎಂಗೆ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ತಿರುಚುವಿಕೆಯ ಭೀತಿ ಎದುರಾಗಿದೆ. ಇದೇ ಕಾರಣಕ್ಕಾಗಿ ಜೆಎಂಎಂ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಅವರ ನೇತೃತ್ವದ ಪಕ್ಷದ ನಿಯೋಗ, ಮತ ಎಣಿಕೆ ಕಾರ್ಯ ಮುಗಿಯುವವರೆಗೂ ಇವಿಎಂಗಳ ಮೇಲೆ ಕಣ್ಗಾವಲು ವಹಿಸಬೇಕು ಎಂದು ಕೋರಿ ಚುನಾವಣಾಧಿಕಾರಿಗೆ ಕೋರಿದೆ.
ಚುನಾವಣಾ ಆಯೋಗದ ದಕ್ಷತೆ ಮತ್ತು ನಿಷ್ಪಕ್ಷಪಾತದ ಮೇಲೆ ನಮಗೆ ಸಂಪೂರ್ಣ ಭರವಸೆಯಿದೆ. ಆದರೆ, ಇವಿಎಂಗಳ ನಿರ್ವಹಣೆಗಾಗಿ ಚುನಾವಣಾ ಆಯೋಗದಿಂದ ನೇಮಕವಾದ ಇಂಜಿನಿಯರ್‌ಗಳು ಮತ್ತು ತಂತ್ರಜ್ಞರ ಮೇಲೆ ಆಡಳಿತಾರೂಢ ಬಿಜೆಪಿ ತನ್ನ ಪ್ರಭಾವ ಬೀರಬಹುದು ಎಂಬ ಅನುಮಾನವಿದೆ ಎಂದು ಭಟ್ಟಾಚಾರ್ಯ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.