ಕೊರೋನಾದಿಂದ ಗುಣಮುಖರಾದ ಮರುದಿನವೇ ಸಚಿವ ಸಾವು

Published : Oct 03, 2020, 06:25 PM ISTUpdated : Oct 03, 2020, 06:32 PM IST
ಕೊರೋನಾದಿಂದ ಗುಣಮುಖರಾದ ಮರುದಿನವೇ ಸಚಿವ ಸಾವು

ಸಾರಾಂಶ

ಕೊರೋನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಮಾರನೇ ದಿನವೇ ಸಚಿವರೊಬ್ಬರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ,

ರಾಂಚಿ, (ಅ.03): ಜಾರ್ಖಂಡ್ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಾಜಿ ಹುಸೇನ್ ಅನ್ಸಾರಿ ಅವರು ಕೊರೋನಾ ಸೋಂಕಿನಿಂದ ಗುಣಮುಖರಾದ ಮರುದಿನವೇ ವಿಧಿವಶರಾಗಿದ್ದಾರೆ.

 ಚೇತರಿಸಿಕೊಂಡ ಮಾರನೇ ದಿನ ಅಂದ್ರೆ (ಶನಿವಾರ) ರಾಂಚಿಯ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನ್ಸಾರಿ ಅವರಿಗೆ ಸೆಪ್ಟೆಂಬರ್ 23 ರಂದು ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಉದ್ಘಾಟನೆಗೊಂಡಿತು ಅಟಲ್ ಟನಲ್, ಮತ್ತೆ ಹತ್ರಾಸ್‌ಗೆ ರಾಹುಲ್: ಅ.3ರ ಟಾಪ್ 10 ಸುದ್ದಿ!

ಕೊರೋನಾ ವೈರಸ್ ನಿಂದ ಚೇತರಿಸಿಕೊಂಡಿದ್ದ ಅನ್ಸಾರಿ ಅವರಿಗೆ ನಿನ್ನೆಯಷ್ಟೇ (ಶುಕ್ರವಾರ) ಕೋವಿಡ್-19 ಪರೀಕ್ಷೆಯಲ್ಲಿ ನೆಗಟಿವ್ ವರದಿ ಬಂದಿತ್ತು. ಆದರೆ ಇಂದು (ಶನಿವಾರ) ದಿಢೀರ್ ನಿಧನರಾಗಿದ್ದಾರೆ. ಅನ್ಸಾರಿ ಅವರು ಹೃದಯ ಕಾಯಿಲೆ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು.

73 ವರ್ಷದ ಅನ್ಸಾರಿ ಅವರು 1995, 2000, 2010 ಮತ್ತು 2019 ರಲ್ಲಿ ನಾಲ್ಕು ಬಾರಿ ಮಧುಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು ಮತ್ತು 2002ರಲ್ಲಿ ಪ್ರತಿಪಕ್ಷದ ನಾಯಕರಾಗಿದ್ದರು.

ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತಮ್ಮ ಸಂಪುಟದ ಹಿರಿಯ ಸಹೋದ್ಯೋಗಿಯ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ