
ಕಾರ್ಕಳ(ಜೂ.01): ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ‘ಬಿ’ ರಿಪೋರ್ಟ್ ಸಲ್ಲಿಸಿದೆ ಎಂದು ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು. ರಸ್ತೆಯಲ್ಲಿ ನಮಾಜ್ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಸಮಸ್ಯೆ ಸೃಷ್ಟಿಸಿದವರನ್ನು ಬಂಧಿಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ ಎಂದರು.
ಭಯೋತ್ಪಾದಕನ ಠಾಣೆಗೆ ಕರೆತಂದರೆ ಪೊಲೀಸರನ್ನ ಪ್ರಶ್ನಿಸ್ತೀರಾ? ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ
ಒಂದು ಸಮುದಾಯದ ಓಲೈಕೆಗಾಗಿ ಇಡೀ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲಿಬಾನ್‌ಗಿರಿ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.