ಕನ್ನಡಿಗರಿಗೆ ಉದ್ಯೋಗ ಮೀಸಲು ಅವಿವೇಕತನ: ಶಶಿ ತರೂರ್‌ ಕಿಡಿ

By Kannadaprabha News  |  First Published Jul 20, 2024, 2:57 PM IST

ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲು ನೀಡುವ ಮಸೂದೆ ಜಾರಿಗೆ ತರಲು ಸಿದ್ಧವಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಅವರದ್ದೇ ಪಕ್ಷದ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಕಟುವಾಗಿ ಟೀಕಿಸಿದ್ದಾರೆ. 


ತಿರುವನಂತಪುರಂ (ಜು.20): ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಮೀಸಲು ನೀಡುವ ಮಸೂದೆ ಜಾರಿಗೆ ತರಲು ಸಿದ್ಧವಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಅವರದ್ದೇ ಪಕ್ಷದ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಶಶಿ ತರೂರ್ ಕಟುವಾಗಿ ಟೀಕಿಸಿದ್ದಾರೆ. ಇಂಥ ನೀತಿ 'ಅಸಂವಿಧಾನಿಕ ಮತ್ತು ಅವಿವೇಕತನದ್ದು' ಎಂದಿದ್ದಾರೆ. ಕರ್ನಾಟಕದ ಪ್ರಸ್ತಾವಿತ ಉದ್ಯೋಗ ಮೀಸಲು ಮಸೂದೆ ಕುರಿತು ಪ್ರತಿಕ್ರಿಯಿಸಿರುವ ತಿರುವನಂತರಪುರಂ ಸಂಸದ ತರೂರ್, 'ಅದು ವಿವೇಕತನದ ನಿರ್ಧಾರವಲ್ಲ. 

ಪ್ರತಿ ರಾಜ್ಯ ಆ ರೀತಿ ಕಾನೂನುಗಳನ್ನು ತಂದರೆ ಅದು ಅಸಂವಿಧಾನಿಕವಾಗುತ್ತದೆ. ಸಂವಿಧಾನದ ಪ್ರಕಾರ ಪ್ರತಿ ನಾಗರಿಕನು ದೇಶದ ಯಾವುದೇ ಭಾಗದಲ್ಲಿ ಬದುಕಲು, ಕೆಲಸಮಾಡಲು ಮತ್ತು ಪ್ರಯಾಣಿಸುವ ಹಕ್ಕಿದೆ. ಆದರೆ ಕರ್ನಾಟಕ ಸರ್ಕಾರ ಏತಕ್ಕಾಗಿ, ಯಾವ ಆಧಾರದ ಮೇಲೆ ಈ ಬಗ್ಗೆ ಯೋಚಿಸಿದೆ ಗೊತ್ತಿಲ್ಲ' ಎಂದರು. ಇನ್ನು ಇದೇ ವೇಳೆ ಕರ್ನಾಟಕ ಸರ್ಕಾರ ತನ್ನ ನಿರ್ಧಾರಕ್ಕೆ ತಡೆ ನೀಡಿರುವುದಕ್ಕೆ ತರೂರ್‌ಸಂತಸ ವ್ಯಕ್ತಪಡಿಸಿದರು.

Tap to resize

Latest Videos

ಖಾಸಗಿಯಲ್ಲೂ ಉದ್ಯೋಗ ಮೀಸಲು: ಕರ್ನಾಟಕ ಸರ್ಕಾರ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕಾಯ್ದೆ ಜಾರಿಗೆ ಮುಂದಾಗಿರುವ ಹೊತ್ತಿನಲ್ಲೇ, ‘ಖಾಸಗಿ ವಲಯದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರಿಗೂ ಮೀಸಲು ನೀಡುವುದು ಅಗತ್ಯ’ ಎಂದು ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಒತ್ತಾಯ ಮಾಡಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಖಾಸಗಿ ವಲಯದಲ್ಲಿ ಉದ್ಯೋಗ ಮಾಡಲು ಎಸ್‌ಸಿ, ಎಸ್ಟಿ, ಒಬಿಸಿ ಸಮುದಾಯದ ಜನರು ಆಸಕ್ತರಾಗಿದ್ದಾರೆ. ಆದರೆ ಮೀಸಲು ಸೌಲಭ್ಯ ಇಲ್ಲದ ಕಾರಣ ಅವರೆಲ್ಲಾ ಅಲ್ಲಿ ಉದ್ಯೋಗ ವಂಚಿತರಾಗಿದ್ದಾರೆ. 

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ಕೊಡಿ: ಕೇಂದ್ರ ಸಚಿವ ಸೋಮಣ್ಣ

ಮುಂದಿನ ದಿನಗಳಲ್ಲಿ ಇನ್ನಷ್ಟು ಸರ್ಕಾರಿ ವಲಯದ ಕಂಪನಿಗಳು ಖಾಸಗೀಕರಣವಾಗಬಹುದು. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಖಾಸಗಿ ವಲಯದಲ್ಲೂ ದಲಿತರುಗೆ ಹಾಗೂ ಹಿಂದುಳಿದ ಸಮುದಾಯ ವರ್ಗಗಳಿಗೆ ಮೀಸಲು ನೀಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು. ಆದರೆ ಹಾಗಂತ ತಾವು ಸಾಮಾನ್ಯ ವರ್ಗದ ಉದ್ಯೋಗಾಕಾಂಕ್ಷಿಗಳ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದರು.

click me!