Chamarajanagar: ಬಿಜೆಪಿ ಭದ್ರಕೋಟೆ ಸೃಷ್ಟಿಗೆ ಕೈ ಜೋಡಿಸಿ: ಸಚಿವ ಸೋಮಣ್ಣ

Published : Dec 04, 2022, 08:07 PM IST
Chamarajanagar: ಬಿಜೆಪಿ ಭದ್ರಕೋಟೆ ಸೃಷ್ಟಿಗೆ ಕೈ ಜೋಡಿಸಿ: ಸಚಿವ ಸೋಮಣ್ಣ

ಸಾರಾಂಶ

ಜಿಲ್ಲೆಯಲ್ಲಿ ಬಿಜೆಪಿ ಭದ್ರಕೋಟೆ ಸೃಷ್ಟಿಸುವ ಮೂಲಕ ಹಲವು ವರ್ಷಗಳ ಕನಸು ನನಸು ಮಾಡಲು ಜಿಲ್ಲೆಯ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕರೆ ನೀಡಿದರು. 

ಚಾಮರಾಜನಗರ (ಡಿ.04): ಜಿಲ್ಲೆಯಲ್ಲಿ ಬಿಜೆಪಿ ಭದ್ರಕೋಟೆ ಸೃಷ್ಟಿಸುವ ಮೂಲಕ ಹಲವು ವರ್ಷಗಳ ಕನಸು ನನಸು ಮಾಡಲು ಜಿಲ್ಲೆಯ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕರೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ಶನಿವಾರ ಡಾ. ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 

ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿ ಬರೆಯುವ ಸಲುವಾಗಿ ಬಸವರಾಜ ಬೊಮ್ಮಾಯಿ ಅವರು ಡಿ. 12ರಂದು ಚಾಮರಾಜನಗರ, ಹನೂರು, ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ 1490 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಜಗದೀಶ್‌ ಶೆಟ್ಟರ್‌, ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಇದೀಗ ಮತ್ತೇ ಉಸ್ತುವಾರಿ ಸಚಿವನಾಗಿರುವ ವೇಳೆ ಮುಖ್ಯಮಂತ್ರಿ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದು, 30 ಸಾವಿರಕ್ಕೂ ಹೆಚ್ಚು ಜನರು ಜಿಲ್ಲೆಯಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಸೇರುವ ಮೂಲಕ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಬೇಕಿದೆ ಎಂದು ಸಲಹೆ ನೀಡಿದರು. ಮುಖ್ಯಮಂತ್ರಿಭೇಟಿ ಕಾರ್ಯಕ್ರಮವನ್ನು ಜಿಲ್ಲೆಯ ಹಬ್ಬದ ಮಾದರಿಯಲ್ಲಿ ಮಾಡಲು ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕಿದೆ. 

Bandipur: ಬೇಸಿಗೆಯಲ್ಲಿ ಜೀರೋ ಫೈರ್‌ಗೆ ಸೂಚನೆ

ಇಡೀ ಚಾಮರಾಜನಗರ ಪಟ್ಟಣವನ್ನು ತಳಿರು ತೋರಣ, ಪ್ಲೆಕ್ಸ್‌ಗಳಿಂದ ಸಜ್ಜುಗೊಳಿಸಬೇಕು. ಎಲ್ಲೆಡೆ ಪಕ್ಷದ ಸಾಧನೆ, ರಾಷ್ಟೀಯ ನಾಯಕರು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭಾವಚಿತ್ರಗಳನ್ನು ಹಾಕುವ ಮೂಲಕ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸಂಭ್ರಮಿಸುವ ವಾತವರಣ ನಿರ್ಮಿಸುವ ನಿಟ್ಟಿನಲ್ಲಿ ಪ್ರತಿ ಹಳ್ಳಿ, ಪಟ್ಟಣ, ನಗರಗಳಿಂದ ಜನರು ಆಗಮಿಸುವ ಮೂಲಕ ವಿನೂತನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯಿರಿ ಎಂದು ಅವರು ಮನವಿ ಮಾಡಿದರು.

ಶಾಸಕರಾದ ಎನ್‌.ಮಹೇಶ್‌, ಸಿ.ಎನ್‌.ನಿರಂಜನ್‌ಕುಮಾರ್‌, ಮಾಜಿ ಶಾಸಕರಾದ ಪ್ರೊ. ಕೆ.ಆರ್‌. ಮಲ್ಲಿಕಾರ್ಜುನಪ್ಪ, ಜಿ.ಎನ್‌.ನಂಜುಂಡಸ್ವಾಮಿ, ಚಾಮುಲ್‌ ಅಧ್ಯಕ್ಷ ನಾಗೇಂದ್ರ, ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಪುರಸಭಾ ಅಧ್ಯಕ್ಷ ಪಿ. ಗಿರೀಶ್‌, ಎಪಿಎಂಸಿ ಅಧ್ಯಕ್ಷ ಮನೋಜ್‌ ಪಟೇಲ್‌, ಜಿ.ಪಂ ಮಾಜಿ ಅಧ್ಯಕ್ಷ ಎಂ. ರಾಮಚಂದ್ರ, ಬಿಜೆಪಿ ಅಧ್ಯಕ್ಷ ಆರ್‌.ಸುಂದರ್‌, ನೂರೊಂದು ಶೆಟ್ಟಿ, ಮೈ.ವಿ. ರವಿಶಂಕರ್‌, ಮಲ್ಲೇಶ್‌ ನಾಯಕ, ಬಿಜೆಪಿ ಉಪಾಧ್ಯಕ್ಷ ಪಿ. ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀ, ನಾರಾಯಣಪ್ರಸಾದ್‌ ಇದ್ದರು.

Chamarajanagar: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿ ಹಿನ್ನೆಲೆ ಪೂರ್ವ ಸಿದ್ದತಾ ಸಭೆ

ನನ್ನ ಯಾವುದೋ ಜನ್ಮದ ಪುಣ್ಯವೋ ಚಾಮರಾಜನಗರ ಜಿಲ್ಲೆಯ ಜನತೆಯ ಸೇವೆ ಮಾಡಲು ಮಲೆಮಹದೇಶ್ವರ ನನ್ನನ್ನು ಇಲ್ಲಿಗೆ ಕರೆತಂದು ಬಿಟ್ಟಿದ್ದಾನೆ. ನಾನು ಅನಿರೀಕ್ಷಿತವಾಗಿ ಇಲ್ಲಿಗೆ ಬಂದಿದ್ದೇನೆ. ಯಾವುದೇ ಕೆಲಸವನ್ನು ಸೇವೆ ಎಂದು ಭಾವಿಸಿದ್ದೇವೆ. ಇದರ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ಮಾದರಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಪಣತೊಟ್ಟಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಜೋಡಿಸಲಿದ್ದಾರೆ.
-ವಿ. ಸೋಮಣ್ಣ , ಜಿಲ್ಲಾ ಉಸ್ತುವಾರಿ ಸಚಿವ, ಚಾಮರಾಜನಗರ ಜಿಲ್ಲೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ