Karnataka Assembly Elections 2023: ಡಿ.30ರಿಂದ ಜ.16ರವರೆಗೆ ಸಿದ್ದು, ಡಿಕೆಶಿ ಜಂಟಿಯಾತ್ರೆ

Published : Dec 23, 2022, 12:00 AM IST
Karnataka Assembly Elections 2023: ಡಿ.30ರಿಂದ ಜ.16ರವರೆಗೆ ಸಿದ್ದು, ಡಿಕೆಶಿ ಜಂಟಿಯಾತ್ರೆ

ಸಾರಾಂಶ

ಡಿ.30ರಿಂದ 2023ರ ಜನವರಿ 29ರವರೆಗೆ ಇಬ್ಬರೂ ನಾಯಕರು ಒಟ್ಟಾಗಿ ಬಸ್‌ ಯಾತ್ರೆ ಮಾಡಲಿದ್ದಾರೆ. ಈ ಮಧ್ಯೆ, ಹೊಸ ವರ್ಷಾಚರಣೆ, ಸಂಕ್ರಾಂತಿ ಹಬ್ಬ ಸೇರಿದಂತೆ ಮತ್ತಿತರ ಕಾರಣಕ್ಕೆ ಕೆಲ ದಿನಗಳ ಬಿಡುವು ಹೊರತುಪಡಿಸಿ ಒಟ್ಟು 16 ದಿನಗಳ ಕಾಲ ಜಂಟಿ ಯಾತ್ರೆ ನಡೆಯಲಿದೆ. 

ಬೆಂಗಳೂರು(ಡಿ.23): ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜಂಟಿ ರಾಜ್ಯ ಪ್ರವಾಸಕ್ಕೆ ಕಡೆಗೂ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಡಿ.30ರಿಂದ 2023ರ ಜನವರಿ 29ರವರೆಗೆ ಇಬ್ಬರೂ ನಾಯಕರು ಒಟ್ಟಾಗಿ ಬಸ್‌ ಯಾತ್ರೆ ಮಾಡಲಿದ್ದಾರೆ. ಈ ಮಧ್ಯೆ, ಹೊಸ ವರ್ಷಾಚರಣೆ, ಸಂಕ್ರಾಂತಿ ಹಬ್ಬ ಸೇರಿದಂತೆ ಮತ್ತಿತರ ಕಾರಣಕ್ಕೆ ಕೆಲ ದಿನಗಳ ಬಿಡುವು ಹೊರತುಪಡಿಸಿ ಒಟ್ಟು 16 ದಿನಗಳ ಕಾಲ ಜಂಟಿ ಯಾತ್ರೆ ನಡೆಯಲಿದೆ. ಈ ದಿನಗಳಲ್ಲಿ ನಿತ್ಯ ಬಸ್‌ ಮೂಲಕ ಇಬ್ಬರೂ ನಾಯಕರು ಕನಿಷ್ಠ ಎರಡು ಜಿಲ್ಲೆಗಳಲ್ಲಿ ತಲಾ 60ರಿಂದ 80 ಕಿ.ಮೀ.ನಷ್ಟುದೂರ ಯಾತ್ರೆ ನಡೆಸುವರು ಮತ್ತು ವಿವಿಧೆಡೆ ಬಹಿರಂಗ ಸಾರ್ವಜನಿಕ ಸಭೆ, ಸಮಾರಂಭ, ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಈ ಯಾತ್ರೆಗೆ ಸಿದ್ಧತೆ ನಡೆಸುವಂತೆ ಕೆಪಿಸಿಸಿಯು ತಂಡವೊಂದನ್ನು ರಚಿಸಿದೆ. ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಕಾರ್ಯಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಕಾಯದರ್ಶಿಗಳು (ಕರ್ನಾಟಕ ರಾಜ್ಯ ಜಿಲ್ಲಾ ಉಸ್ತುವಾರಿ), ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಪದಾಧಿಕಾರಿಗಳನ್ನೊಳಗೊಂಡ ತಂಡವು ಮುಂಚಿತವಾಗಿಯೇ ಸಭೆಗಳು ನಡೆಯುವ ಪ್ರತಿಯೊಂದು ಬ್ಲಾಕ್‌ ಮತ್ತು ವಿಭಾನಸಭಾ ಕ್ಷೇತ್ರಗಳಿಗೆ ತೆರಳಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳು ಮತ್ತು ಬ್ಲಾಕ್‌ ಕಾಂಗ್ರೆಸ್‌ ಸಮಿತಿಗಳು ಪಕ್ಷದ ಎಲ್ಲಾ ಹಂತಗಳಲ್ಲಿ ನಡೆಯುವ ಬೃಹತ್‌ ಸಭೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಪಕ್ಷದ ಎಲ್ಲಾ ನಾಯಕರು ಮತ್ತು ಕಾರ್ಯದರ್ಶಿಗಳು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಂದು ನಿರ್ದೇಶನ ನೀಡಲಾಗಿದೆ.

Assembly election: ಕೋವಿಡ್‌ ನೆಪವೊಡ್ಡಿ ಅವಧಿಪೂರ್ವ ಚುನಾವಣೆ ನಡೆಸಲು ಸಿದ್ಧತೆ: ಡಿ.ಕೆ.ಶಿವಕುಮಾರ್

ಇದೇ ವೇಳೆ ಚಿತ್ರದುರ್ಗದಲ್ಲಿ ಜ.8ರಂದು ಎಸ್ಸಿ-ಎಸ್ಟಿಸಮುದಾಯದ ಸಮಾವೇಶ ನಡೆಯಲಿದೆ. ಅದರಲ್ಲೂ ಉಭಯ ನಾಯಕರು ಪಾಲ್ಗೊಳ್ಳುವರು. ಉತ್ತರ ಕನ್ನಡ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಕಾರ್ಯಕ್ರಮಗಳಿಗೆ ಪಟ್ಟಿಪ್ರತ್ಯೇಕವಾಗಿ ಪ್ರಕಟವಾಗಲಿದೆ.

ಯಾವ ಜಿಲ್ಲೆಯಲ್ಲಿ ಯಾವ ದಿನ ಯಾತ್ರೆ?

ಡಿ.30-ವಿಜಯಪುರ (ಕೃಷ್ಣಾ ಜಲಾನಯನ), ಜ.2- ಹುಬ್ಬಳ್ಳಿ-ಧಾರವಾಡ (ಮಹದಾಯಿ ಜಲಾನಯನ), ಜ.8-ಚಿತ್ರದುರ್ಗದಲ್ಲಿ ಎಸ್ಸಿ ಎಸ್ಟಿಸಮಾವೇಶ, ಜ.11- ಬೆಳಗಾವಿ, ಚಿಕ್ಕೋಡಿ, ಜ.17- ಹೊಸಪೇಟೆ, ಕೊಪ್ಪಳ, ಜ.18- ಬಾಗಲಕೋಟೆ, ಗದಗ, ಜ.19- ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಜ.21- ಹಾಸನ, ಚಿಕ್ಕಮಗಳೂರು, ಮಂಗಳೂರು, ಜ.22- ಉಡುಪಿ, ಮಂಗಳೂರು, ಜ.23- ಕೋಲಾರ, ಚಿಕ್ಕಬಳ್ಳಾಪುರ, ಜ.24- ಬೆಂಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ಜ.25- ಬೆಂಗಳೂರು, ಮೈಸೂರು, ಜ.26- ಮೈಸೂರು, ಚಾಮರಾಜನಗರ, ಜ.27- ಮೈಸೂರು, ಮಂಡ್ಯ, ರಾಮನಗರ, ಜ.28- ಕಲಬುರಗಿ, ಯಾದಗಿರಿ, ವಿಜಯಪುರ, ಜ.29- ಬೆಂಗಳೂರಿಗೆ ವಾಪಸ್‌.

ಕಾಂಗ್ರೆಸ್‌ ಗೆಲುವು ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಹೆಚ್ಚಿದ್ದಾರೆ: ಡಿಕೆಶಿ

ಜಂಟಿ ಬಸ್‌ ಯಾತ್ರೆ ಬಳಿಕ ಪ್ರತ್ಯೇಕ ಯಾತ್ರೆ

ಇಬ್ಬರೂ ನಾಯಕರ ಜಂಟಿ ಯಾತ್ರೆ ಮುಗಿದ ಬಳಿಕ ಅಂದರೆ ಜಿಲ್ಲಾ ಪ್ರವಾಸದ ಮುಂದುವರೆದ ಭಾಗವಾಗಿ ಎರಡು ಪ್ರತ್ಯೇಕ ತಂಡಗಳು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಕೈಗೊಳ್ಳಲಿವೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದ ತಂಡ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ತಂಡ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಪ್ರವಾಸ ಮಾಡಿ ಬಹಿರಂಗ ಸಭೆ ನಡೆಸಲಿವೆ. ಈ ಪ್ರವಾಸಗಳ ವೇಳಾಪಟ್ಟಿಯನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್‌ ಅವರನ್ನು ದಕ್ಷಿಣ ಕರ್ನಾಟಕ ಭಾಗದ ಪ್ರವಾಸ ಕಾರ್ಯಕ್ರಮಗಳ ಸಂಯೋಜಕರಾಗಿ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ಉತ್ತರ ಕರ್ನಾಟಕ ಭಾಗದ ಪ್ರವಾಸ ಕಾರ್ಯಕ್ರಮಗಳ ಸಂಯೋಜಕರಾಗಿ ನೇಮಿಸಲಾಗಿದೆ. ಈ ತಂಡಗಳಲ್ಲಿ ಆಯಾ ಭಾಗದ ಜಿಲ್ಲಾ ಕಾಂಗ್ರೆಸ್‌/ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು, ಸಂಸದರು, ವಿಧಾನ ಪರಿಷತ್‌ ಸದಸ್ಯರು, ಕೆಪಿಸಿಸಿ ಉಸ್ತುವಾರಿ ಪದಾಧಿಕಾರಿಗಳು, ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಭಾರತ್‌ ಜೋಡೋ ಯಾತ್ರೆಯ ಸಮಿತಿಯವರು, ವಿಧಾನಸಭಾವಾರು ಕೆಪಿಸಿಸಿ ಸಂಯೋಜಕರು, ಪಕ್ಷದ ಟಿಕೆಟ್‌ ಆಕಾಂಕ್ಷಿಗಳು ಪ್ರವಾಸ ಕಾರ್ಯಕ್ರಮಗಳನ್ನು ಸಂಘಟಿಸಲು ಪೂರ್ಣ ಸಹಕಾರ ನೀಡುವಂತೆ ಪಕ್ಷ ಕೋರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ