Karnataka BJP: ನಾಳೆ ರಾಜ್ಯದ 10 ಬಿಜೆಪಿ ಕಚೇರಿ ನಡ್ಡಾ ಉದ್ಘಾಟನೆ

Published : Dec 14, 2022, 12:03 AM IST
Karnataka BJP: ನಾಳೆ ರಾಜ್ಯದ 10 ಬಿಜೆಪಿ ಕಚೇರಿ ನಡ್ಡಾ ಉದ್ಘಾಟನೆ

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿ ಸ್ವಂತ ಕಟ್ಟಡವನ್ನು ಡಿ.15ರ ಗುರುವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್‌ ತಿಳಿಸಿದರು.

ಕೋಲಾರ (ಡಿ.14) : ಬಿಜೆಪಿ ಜಿಲ್ಲಾ ಕಚೇರಿ ಸ್ವಂತ ಕಟ್ಟಡವನ್ನು ಡಿ.15ರ ಗುರುವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ವೇಣುಗೋಪಾಲ್‌ ತಿಳಿಸಿದರು. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಈಗಾಗಲೇ 10 ಜಿಲ್ಲೆಯಲ್ಲಿ ಬಿಜೆಪಿ ಕಚೇರಿಯ ಸ್ವಂತ ಕಚೇರಿಗಳನ್ನು ಉದ್ಥಾಟಿಸಲಾಗಿದೆ. 2ನೇ ಹಂತದಲ್ಲಿ 11 ಜಿಲ್ಲೆಗಳಲ್ಲಿ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಡಿ.15ರಂದು ರಾಜ್ಯದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ನಂತರ ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಕೋಲಾರ, ಬಾಗಲಕೋಟೆ, ರಾಯಚೂರು, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೀದರ್‌, ಗದಗ, ಚಾಮರಾಜನಗರದಲ್ಲಿ ಬಿಜೆಪಿ ಕಚೇರಿಯನ್ನು ನಡ್ಡಾ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

Bagalakote: ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಸಿದ್ದರಾಮಯ್ಯ ಕಾರ್ಯಕ್ರಮ ರದ್ದು

ಸಂಸದ, ಸಚಿವರು, ಎಂಎಲ್ಸಿಗಳು ಭಾಗಿ

ಕಚೇರಿ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ, ಸಂಸದ ಎಸ್‌.ಮುನಿಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕರು ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ ನೀಡುವ ನಿರೀಕ್ಷೆ ಇದೆ ಎಂಜರು.

ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಮುಂದಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ವರ್ಧಿಸಲಿದ್ದು, ಮುಂದಿನ ಶಾಸಕ ನಾನೇ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬಿಜೆಪಿ ಪದಾಧಿಕಾರಿಗಳು ಯಾರೂ ಈ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲವೇಕೆ ಎಂಬ ಪ್ರಶ್ನೆಗೆ ಜಿಲ್ಲಾ ಅಧ್ಯಕ್ಷ ಡಾ.ವೇಣುಗೋಪಾಲ್‌ ಪ್ರತಿಕ್ರಿಯಿಸಿ, ವಿಧಾನಸಭಾ ಕ್ಷೇತ್ರದ ಅಕಾಂಕ್ಷಿಯಾಗಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರು ಬಿಜೆಪಿ ಟಿಕೆಟ್‌ ಅಕಾಂಕ್ಷಿಯಾಗಿದ್ದಾರೆ ಹೊರತಾಗಿ ಅವರನ್ನು ಅಭ್ಯರ್ಥಿಯಾನ್ನಾಗಿ ಘೋಷಿಸಿಲ್ಲ ಎಂದು ಸ್ವಷ್ಟಪಡಿಸಿದರು.

ಅಧ್ಯಕ್ಷರ ತೀರ್ಮಾನವೇ ಅಂತಿಮ

ಇದಕ್ಕೆ ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಧ್ವನಿಗೊಡಿಸಿ, ಕಳೆದ ಹತ್ತಾರು ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ನಿಷ್ಠಾವಂತ ಕಾರ್ಯಕರ್ತರು ಇದ್ದಾರೆ. ಅವರು ಸಹ ಪಕ್ಷದಲ್ಲಿ ಚುನಾವಣಾ ಆಕಾಂಕ್ಷಿಗಳಾಗಿದ್ದಾರೆ. ಏನೇ ಅದರೂ ಬಿಜೆಪಿಯಲ್ಲಿ ರಾಜ್ಯದ ಅಧ್ಯಕ್ಷರ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಕರ್ನಾಟಕ, 2024ರ ಚುನಾವಣೆಗೆ ಪಕ್ಷ ಅಣಿಗೊಳಿಸಿ: ಬಿಜೆಪಿ ನಾಯಕರಿಗೆ ಪ್ರಧಾನಿ ಗುರಿ

ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಜಿಲ್ಲಾ ವಕ್ತಾರ ಎಸ್‌.ಬಿ. ಮುನಿವೆಂಕಟಪ್ಪ, ಮಾಜಿ ಜಿಲ್ಲಾಧ್ಯಕ್ಷ ಕೃಷ್ಣರೆಡ್ಡಿ, ಮಾವು ಅಭಿವೃದ್ದಿ ಮಂಡಳಿ ರಾಜ್ಯಾಧ್ಯಕ್ಷ ವಾಸುದೇವ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ನಗರಸಭಾ ಸದಸ್ಯ ಮುರುಳಿಗೌಡ, ಮಾಜಿ ಉಪ ಸಂಚಾಲಕ ಸತ್ಯನಾರಾಯಣರಾವ್‌, ಮುಖಂಡರಾದ ರಾಜೇಶ್‌ಸಿಂಗ್‌, ನಾಯಕರಹಳ್ಳಿ ವೆಂಕಟೇಗೌಡ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ