ಜೆಡಿಎಸ್ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿರುವ ಮಧುಬಂಗಾರಪ್ಪ ಹಾಗೂ ಶಾರದಾ ಪೂರ್ಯನಾಯ್ಕ್ ಕಾಂಗ್ರೆಸ್ ಸೆರ್ತಾರೆ ಎನ್ನುವು ಸುದ್ದಿ ಹಬ್ಬಿದೆ. ಇನ್ನು ಇದಕ್ಕೆ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ನಿಲುವೇನು..? ಪಕ್ಷಕ್ಕೆ ಬಂದ್ರೆ ಸೇರಿಸಿಕೊಳ್ಳುತ್ತಾರಾ..? ಹಾಗಾದ್ರೆ ಈ ಬಗ್ಗೆ ಅವರು ಹೇಳಿದ್ದೇನು..?
ಶಿವಮೊಗ್ಗ, [ನ.20]: ಜೆಡಿಎಸ್ ಮುಖಂಡರಾದ ಮಧುಬಂಗಾರಪ್ಪ ಮತ್ತು ಶಾರದಾ ಪೂರ್ಯನಾಯ್ಕ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳುತ್ತಾರೆಂಬುದ ಬಗ್ಗೆ ಯಾವುದೇ ಮಾಹಿತಿ ತಮಗೆ ಲಭ್ಯವಿಲ್ಲ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಿಚಾರ ಇದುವರೆಗು ನನ್ನ ಗಮನಕ್ಕೂ ಬಂದಿಲ್ಲ. ಇಬ್ಬರು ಮುಖಂಡರು ಪಕ್ಷಕ್ಕೆ ಬರುವುದಾದರೆ ಸ್ವಾಗತವಿದೆ. ಪಕ್ಷ ಸೇರ್ಪಡೆಗೊಂಡರೆ ಸಂಘಟನೆಗೆ ಇನ್ನಷ್ಟು ಅನುಕೂಲವಾಗುತ್ತಿದೆ ಎಂದರು.
ಶಿವಮೊಗ್ಗ ಲೋಕಸಭಾ ಚುನಾವಣೆಗೆ ನಿಂತು ಸೋಲುಕಂಡಿರುವ ಮಧುಬಂಗಾರಪ್ಪ ಇತ್ತೀಚೆಗೆ ಜೆಡಿಎಸ್ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದು, ಅವರು ಕಾಂಗ್ರೆಸ್ ಸೇರ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.
undefined
ಇನ್ನು ಇದೇ ವೇಳೆ ಬೈ ಎಲೆಕ್ಷನ್ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ತಾವು ಬಾರಿ ಉಪಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಚುನಾವಣೆ ಕಾವು ಹೆಚ್ಚಾಗುತ್ತಿದೆ. ಉಪಚುನಾವಣೆ ನಡೆಯುವ ಎಲ್ಲಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪರವಾದ ಅಲೆ ಕಂಡುಬರುತ್ತಿದೆ. ನಮ್ಮ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನಾರೋಗ್ಯದ ಕಾರಣ ತಾವು ನೇರವಾಗಿ ಚುನಾವಣಾ ಪ್ರಚಾರಕ್ಕೆ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಚುನಾವಣಾ ಪ್ರಚಾರ ಕಾರ್ಯದಿಂದ ದೂರ ಉಳಿಯಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.