ಮಸ್ಕಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆಗೆ ಅಡ್ಡಿಯಾಗಿದ್ದ ಕೋರ್ಟ್ ವಿವಾದ ಕೊನೆಗೂ ನಿವಾರಣೆಯಾಗಿದ್ದು, ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್‌ಗೆ ಗೆಲುವಾಗಿದೆ.
ಕಲಬುರಗಿ, (ಸೆ.28): ಮಸ್ಕಿ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಗೆಲುವು ಪ್ರಶ್ನಿಸಿ ದಾಖಲಿಸಿದ್ದ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಗೆಲುವು ಸಿಕ್ಕಂತಾಗಿದೆ. ಮತ್ತೊಂದೆಡೆ ಮಸ್ಕಿ ಉಪಚುನಾವಣೆಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ.
ಬೈ ಎಲೆಕ್ಷನ್: ಮಸ್ಕಿ, RR ನಗರ ಕ್ಷೇತ್ರಗಳಿಗೆ ಚುನಾವಣೆಯಾಕಿಲ್ಲ? ಕಾರಣ ಇಲ್ಲಿದೆ
2018ರಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಪ್ರತಾಪಗೌಡ ಪಾಟೀಲ್ ಅವರು ನಕಲಿ ಮತಗಳನ್ನು ಹಾಕಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಪರಾಜಿತ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಆರೋಪಿಸಿದ್ದರು.
ಈ ಬಗ್ಗೆ ಕಲಬುರಗಿ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ್ದರು. ಅಲ್ಲದೇ ಪರಾಜಿತ ಅಭ್ಯರ್ಥಿ ವಿಜಯಿ ಘೋಷಿಸಲು ಮನವಿ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇಂದು (ಸೋಮವಾರ) ಬಸನಗೌಡ ತುರ್ವಿಹಾಳ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸೂಕ್ತ ದಾಖಲೆ ನೀಡದ್ದಕ್ಕೆ ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಮಸ್ಕಿ ವಿಧಾನಸಭಾ ಉಪ ಚುನಾವಣೆ ಇದ್ದಂತ ಅಡ್ಡಿ ನಿವಾರಣೆಯಾದಂತೆ ಆಗಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ, ಸಮ್ಮಿಶ್ರ ಸರ್ಕಾರದಲ್ಲಿ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಗೌಡ ಅವರನ್ನು ಅನರ್ಹಗೊಳಿಸಲಾಗಿತ್ತು.
ಇದರಿಂದ ಉಪಚುನಾವಣೆ ನಡೆಸಲು ಈ ಪ್ರಕರಣ ಕೋರ್ಟ್‌ನಲ್ಲಿತ್ತು. ಆದ್ದರಿಂದ ಚುನಾವಣೆ ಆಯೋಗ ಎಲೆಕ್ಷನ್ ದಿನಾಂಕ ಘೋಷಣೆ ಮಾಡಿರಲಿಲ್ಲ.