ಕಲಬುರಗಿ ಈಗ ‘ಪ್ರಿಯಾಂಕ್‌ ಖರ್ಗೆ ರಿಪಬ್ಲಿಕ್‌’: ಛಲವಾದಿ ನಾರಾಯಣಸ್ವಾಮಿ

By Kannadaprabha News  |  First Published Dec 29, 2024, 10:35 AM IST

ಕಲಬುರಗಿ ಜಿಲ್ಲೆ ಈಗ ''ರಿಪಬ್ಲಿಕ್‌ ಆಫ್‌ ಕಲಬುರಗಿ''ಯಾಗಿದ್ದು, ಅಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. 
 


ಬೆಂಗಳೂರು (ಡಿ.29): ಕಲಬುರಗಿ ಜಿಲ್ಲೆ ಈಗ ''ರಿಪಬ್ಲಿಕ್‌ ಆಫ್‌ ಕಲಬುರಗಿ''ಯಾಗಿದ್ದು, ಅಲ್ಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. 

ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಹೇಳಿದ್ದೇ ಆಡಳಿತ ಎಂಬಂತಾಗಿದೆ. ರಾಜ್ಯದಲ್ಲೆಲ್ಲ ಒಂದು ಆಡಳಿತ ಇದ್ದರೆ, ಕಲಬುರಗಿಯಲ್ಲಿ ಮತ್ತೊಂದು ಆಡಳಿತ ಇದೆ.  ಜಿಲ್ಲೆಯಲ್ಲಿ ಪ್ರಿಯಾಂಕ್‌ ಖರ್ಗೆ ಅಟ್ಟಹಾಸ ಹೆಚ್ಚಾಗುತ್ತಿದ್ದು, ಇದರಿಂದ ಆಡಳಿತ ಸಂಪೂರ್ಣವಾಗಿ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

ಮೈಸೂರಿನ ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ರೆ ತಪ್ಪಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಪ್ರಿಯಾಂಕ್‌ ಬಂಧನ ಆಗಬೇಕು: ಜಿಲ್ಲೆಯಲ್ಲಿ ಆಡಳಿತ ನಡೆಸಲು ತಮಗೆ ಬೇಕಾದವರನ್ನು ಆಪ್ತರನ್ನಾಗಿ ನೇಮಿಸಿಕೊಂಡು ಎಲ್ಲಾ ದಂಧೆಗಳನ್ನು ನಡೆಸುತ್ತಿದ್ದಾರೆ. ಇದೇ ಕಾರಣಕ್ಕಾಗಿ ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪಾರದರ್ಶಕ ತನಿಖೆಯಾಗಬೇಕಾದರೆ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಜತೆಗೆ, ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೊಲೆಗಾರರ ಸರ್ಕಾರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರೇ ಹೆಚ್ಚಾಗಿದ್ದಾರೆ. ಇದು ಕೊಲೆಗಾರರ ಸರ್ಕಾರ ಎಂದು ಕರೆಯಲು ನೋವಾಗುತ್ತದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಕಲಬುರಗಿ ಜಿಲ್ಲೆಯಲ್ಲಿ ಮರಳು ದಂಧೆ, ಟೈಲ್ಸ್, ಸಿಮೆಂಟ್ ಫ್ಯಾಕ್ಟರಿಗಳ ದಂಧೆ ನಡೆಯುತ್ತಿದೆ. ಗುತ್ತಿಗೆ ವಿಚಾರದಲ್ಲಿ ಬೇಕಾದವರ ನೇಮಕವಾಗಿದೆ. ಇದೇ ಕಾರಣಕ್ಕೆ ಸಚಿನ್ ಆತ್ಮಹತ್ಯೆಯಾಗಿದೆ. ಈ ಸಾವಿನ ಕುರಿತು ಉನ್ನತ ಮಟ್ಟದ ತನಿಖೆ ಆಗಲೇಬೇಕು. ಇಲ್ಲದಿದ್ದರೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು. 

ಈ ಮೂವರು ಅಕ್ಕ-ತಂಗಿಯರ ಜೊತೆ ರೊಮ್ಯಾನ್ಸ್ ಮಾಡಿದ ಏಕೈಕ ಹೀರೋ ಯಾರು?: ಇದೊಂದು ವಿಶಿಷ್ಟ ದಾಖಲೆ!

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಯನಾಡಿನಲ್ಲಿ ಅಪಮಾನ ಮಾಡಲಾಗಿದೆ. ಬೆಳಗಾವಿಯಲ್ಲೂ ಅವಮಾನಿಸಲಾಗಿದೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಆಗಮಿಸಿದ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿದ ಘಟನೆ ನಡೆದಿದೆ. ಇದು ದಲಿತರಿಗೆ ಕಾಂಗ್ರೆಸ್‌ ನೀಡುವ ಗೌರವ ಎಂದು ಕಿಡಿಕಾರಿದರು.

click me!