Latest Videos

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ರಾ ದರ್ಶನ್? ಸಿಪಿವೈ ಸ್ಫೋಟಕ ಹೇಳಿಕೆ

By Ravi JanekalFirst Published Jun 14, 2024, 1:34 PM IST
Highlights

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣ (ಜೂ.14): ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ ಯೋಗೇಶ್ವರ್, ಇತ್ತೀಚೆಗೆ ಚನ್ನಪಟ್ಟಣದಲ್ಲಿ ನಡೆದ ಸಭೆಯಲ್ಲಿ ಉಪಚುನಾವಣೆಗೆ ಅಚ್ಚರಿ ಅಭ್ಯರ್ಥಿ ನಿಲ್ಲಿಸುತ್ತೇವೆ ಎಂದಿದ್ದ ಡಿಕೆ ಸುರೇಶ್. ಆದರೆ ಆ ಅಚ್ಚರಿ ಅಭ್ಯರ್ಥಿ ಇದೀಗ ಜೈಲುಪಾಲಾಗಿದ್ದಾರೆ. ಚಿತ್ರನಟರೊಬ್ಬರು ಕಾಂಗ್ರೆಸ್ ಪರವಾಗಿ ಹೆಚ್ಚು ಪ್ರಚಾರ ಮಾಡಿದ್ರು. ಹೀಗಾಗಿ ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಗೆ ನಿಲ್ಲಿಸಲು ಡಿಕೆ ಬ್ರದರ್ಸ್ ಪ್ಲಾನ್ ಮಾಡಿದ್ದರು. ಆ ವ್ಯಕ್ತಿ ಯಾರೆಂದು ನೀವೇ ಊಹೆ ಮಾಡಿಕೊಳ್ಳಿ ಎಂದಿದ್ದಾರೆ.

ಕಾಂಗ್ರೆಸ್ ಯಾರ ಮೇಲೂ ದ್ವೇಷ ರಾಜಕಾರಣ ಮಾಡೊಲ್ಲ: ಡಿಕೆ ಶಿವಕುಮಾರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಬಂಧಿತರಾಗಿರುವುದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಕೇಸ್ ಅನ್ನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತಾ ಆಸೆ ಇತ್ತೇನೋ ಆದರೆ ಈ ರೀತಿ ಅನಾಹುತ ಆಗೋಗಿದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡೊಣ ಎಂದಿದ್ದಾರೆ.

click me!