ಕರಸೇವಕ ಶ್ರೀಕಾಂತ್ ಪೂಜಾರಿ ಬಂಧಿಸಿದ್ದ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್‌ಗೆ ಕಡ್ಡಾಯ ರಜೆ ಶಿಕ್ಷೆ!

By Kannadaprabha News  |  First Published Jan 4, 2024, 2:01 PM IST

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ..


ಹುಬ್ಬಳ್ಳಿ (ಡಿ.4): ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮಾಡಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವುದು ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ..

ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದ ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಮಹಮದ್ ರಫೀಕ್. ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದ್ದು, ಅವರ ಜಾಗಕ್ಕೆ ಪ್ರಭಾರಿ ಇನ್ಸ್‌ಪೆಕ್ಟರ್‌ ಆಗಿ ಬಿಎ ಜಾಧವ್ ಅವರನ್ನು ನೇಮಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಬಿಎ ಜಾಧವ್‌ಗೆ ಪ್ರಭಾರಿ ಠಾಣಾಧಿಕಾರಿಯಾಗಿ ಹೆಚ್ಚುವರಿ ಅಧಿಕಾರ ನೀಡಿದ್ದಾರೆ.

Tap to resize

Latest Videos

ರಾಮಭಕ್ತರ ಮೇಲೆ ಕಾಂಗ್ರೆಸ್ಸಿಗೆ ಇಷ್ಟೊಂದು ಆಕ್ರೋಶ ಏಕೆ?: ಶಾಸಕ ವೇದವ್ಯಾಸ್‌ ಕಾಮತ್

ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿತ್ತು. ಮೂವತ್ತು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬಂಧನವಾಗ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿರುವ ಬಿಜೆಪಿ ನಾಯಕರು. 

ಹಳೇಯ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಬಂಧನ ಮಾಡಲಾಗಿದೆ. ಇದರಲ್ಲಿ ರಾಜಕೀಯವಿಲ್ಲ ಎಂದು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ರಫೀಕ್‌ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸುವ ಅಗತ್ಯ ಏನಿತ್ತು? ಹಾಗೆ ಕಳುಹಿಸಿರುವುದರ ಹಿಂದೆ ಸರ್ಕಾರದ ಹುನ್ನಾರ ಇದೆ ಎಂದು ಹಲವು ಅನುಮಾನಗಳು ಮೂಡತೊಡಗಿವೆ. ಅಂದಹಾಗೆ ಸರ್ಕಾರ ಕಾನೂನು ಪ್ರಕಾರವೇ ನಡೆದುಕೊಂಡಿದ್ದರೆ ಪ್ರಭಾರಿಯನ್ನು ನೇಮಿಸುವ ಅಗತ್ಯವೇ ಇರಲಿಲ್ಲ. ಕಡ್ಡಾಯ ರಜೆಯ ಮೇಲೆ ಇನ್ಸ್‌ಪೆಕ್ಟರ್‌ ಅವರನ್ನು ಬಂಧಿಸಿ ಇಕ್ಕಟ್ಟಿಗೆ ಸಿಲುಕಿರುವ ಸರ್ಕಾರ ಪರೋಕ್ಷವಾಗಿ ತಪ್ಪನ್ನು ಒಪ್ಪಿಕೊಂಡಂತೆ ಕಾಣುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ನಾನೂ ಕರಸೇವಕ; ನನ್ನನ್ನು ಬಂಧಿಸಿ: ಪ್ರತಿಭಟನೆಗಿಳಿದ ಶಾಸಕ ವಿ.ಸುನಿಲ್ ಕುಮಾರ್ ಪೊಲೀಸರ ವಶಕ್ಕೆ

click me!