ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗಳಿಗೆ ದಿನಾಂಕ ಘೋಷಣೆ

By Suvarna NewsFirst Published Mar 16, 2021, 5:20 PM IST
Highlights

ಕರ್ನಾಟಕದ 3 ಕ್ಷೇತ್ರಗಳ ಉಪಚುನಾವಣೆಗಳಿಗೆ ದಿನಾಂಕ ಘೋಷಣೆಯಾಗಿದೆ. ಒಂದು ಕ್ಷೇತ್ರಕ್ಕೆ ಮಾತ್ರ ದಿನಾಂಕ ನಿಗದಿ ಮಾಡಿಲ್ಲ.

ಬೆಂಗಳೂರು, (ಮಾ.16): ಕರ್ನಾಟಕದ ಮೂರು ಉಪಚುನಾವಣೆಗಳಿಗೆ ದಿನಾಂಕ ಘೋಷಣೆಯಾಗಿದೆ. ಇಂದು (ಮಂಗಳವಾರ) ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದೆ.

ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಆದ್ರೆ, ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಪ್ರಕಟವಾಗಿಲ್ಲ. 

ಕ್ರಿಕೆಟ್ ಫ್ಯಾನ್ಸ್‌ಗೆ ಬಿಸಿಸಿಐ ಶಾಕ್, ಚಿನ್ನದ ದರ ಏರಿಕೆಗೆ ಬ್ರೇಕ್: ಮಾ.16ರ ಟಾಪ್ 10 ಸುದ್ದಿ!

ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಏ.17 ಮತದಾನ ನಡೆಯಲಿದ್ದು, ಮೇ.2ಕ್ಕೆ ಫಲಿತಾಂಶ ಪ್ರಕಟವಾಗಿದೆ. ಈಗಿನಿಂದಲೇ ನೀತಿ ಸಂಹಿತಿ ಜಾರಿಯಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.

ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಶಾಸಕರಾಗಿದ್ದ ಬಿ ನಾರಾಯಣರಾವ್ ನಿಧನದಿಂದ ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ಪ್ರತಾಪ್​ಗೌಡ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರ ತೆರವಾಗಿತ್ತು.

ಮಾರ್ಚ್ 23 ನಾಮಪತ್ರ
ಮಾ.30 ನಾಮಪತ್ರ ಸಲ್ಲಿಕೆ ಕೊನೆ ದಿನ
ಏ.3 ನಾಮಪತ್ರ ವಾಪಸ್ ಕೊನೆ ದಿನ
ಏ.17 ಮತದಾನ
ಮೇ.2ಕ್ಕೆ ಫಲಿತಾಂಶ

click me!