ಕರ್ನಾಟಕದ 4 ಕ್ಷೇತ್ರಗಳ ಉಪ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ

By Suvarna NewsFirst Published Feb 26, 2021, 8:57 PM IST
Highlights

ಕರ್ನಾಟಕದ ಒಟ್ಟು 4 ಉಪಚುನಾವಣೆ ಫಲಿತಾಂಶದ ದಿನಾಂಕ ಫಿಕ್ಸ್ ಆಗಿದ್ದು, ಶೀಘ್ರದಲ್ಲೇ ಚುನಾವಣಾ ದಿನಾಂಕ ಪ್ರಕಟವಾಗಲಿದೆ. 
 

ನವದೆಹಲಿ, (ಫೆ.26): ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ.

 ಇದರ ನಡುವೆಯೇ ಕರ್ನಾಟಕದ ಕೆಲ ಕ್ಷೇತ್ರ ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಮೂಲಕ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾಧಿಕಾರಿ ಸುನಿಲ್ ಅರೋರಾ ತಿಳಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿದ್ದು, ಮೇ 2ರಂದೇ ಎಲ್ಲಾ ರಾಜ್ಯದ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದೆ ಕರ್ನಾಟಕದ 4 ಕ್ಷೇತ್ರಗಳ ರಿಸಲ್ಟ್ ಪ್ರಕಟವಾಗಲಿದೆ. ಆದ್ರೆ, ಚುನಾವಣೆ ದಿನಾಂಕ ಇನ್ನೂ ಪ್ರಕಟಿಸಿಲ್ಲ. ಈ ಹಿನ್ನೆಲೆಯಲ್ಲಿ ಯಾವ ಸಂದರ್ಭದಲ್ಲಾದರೂ ಘೋಷಣೆಯಾಗಬಹುದು.

ಪಂಚ ರಾಜ್ಯ ಚುನಾವಣೆ ಡೇಟ್ ಫಿಕ್ಸ್, ರೈತ ಜನಾಂದೋಲನದಲ್ಲಿ ಟ್ವಿಸ್ಟ್: ಫೆ.26ರ ಟಾಪ್ 10 ಸುದ್ದಿ!

ನವದೆಹಲಿಯ ವಿಜ್ಞಾನ ಭವನದಲ್ಲಿ ಫೆ.26ರಂದು ಸುದ್ದಿಗೋಷ್ಠಿ ನಡೆಸಿದ ಸಿಇಸಿ ಸುನಿಲ್ ಅರೋರಾ ಅವರು ಕರ್ನಾಟಕ ಹಾಗೂ ಇತರೆ ರಾಜ್ಯಗಳ ಉಪ ಚುನಾವಣೆಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.

5 ರಾಜ್ಯಗಳ ಜೊತೆಗೆ ಕರ್ನಾಟಕದ ಒಂದು ಲೋಕಸಭೆ ಹಾಗೂ 3 ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ದಿನಾಂಕವನ್ನು ಪ್ರಕಟಿಸಲಾಗುವುದು. ಮಾರ್ಚ್ 27ರಿಂದ ಮೇ 2 ರೊಳಗೆ ಕರ್ನಾಟಕ, ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ 18ಕ್ಕೂ ಅಧಿಕ ಉಪ ಚುನಾವಣೆ ಪ್ರಕ್ರಿಯೆ ಮುಗಿಸಬೇಕಿದೆ. ಎಲ್ಲಾ ವಿಧಾನಸಭೆ, ಲೋಕಸಭೆ ಉಪ ಚುನಾವಣೆಗಳ ಫಲಿತಾಂಶವೂ ಮೇ 2ರಂದೇ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಜೊತೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧಾನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೂ ಬೈ ಎಲೆಕ್ಷನ್ ನಡೆಯಲಿದ್ದು, ಶೀಘ್ರವೇ ದಿನಾಂಕ ಅನೌನ್ಸ್ ಆಗುವ ಸಾಧ್ಯತೆಗಳಿವೆ.

click me!