ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಮಧುಮೇಹ ಪ್ರಮಾಣ ಕಡಿಮೆಯಾಗುತ್ತಿದೆ. ಸಕ್ಕರೆ ಪ್ರಮಾಣ 60ಕ್ಕಿಂತ ಕಡಿಮೆಯಾದರೆ ಪ್ರಾಣಕ್ಕೆ ಮಾರಕವಾಗುವ ಸಾಧ್ಯತೆ ಇದೆ. ಆದರೂ ಕೇಂದ್ರ ಸರ್ಕಾರವು ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದ ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ
ಬೆಂಗಳೂರುಜು.31): ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಕರಣದಲ್ಲಿ ಸಾಕ್ಷಿಗಳಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್‌ನಲ್ಲಿ ಛೀಮಾರಿ ಹಾಕಿ ಜಾಮೀನು ನೀಡಬಹುದು ಎಂದಿದ್ದರೂ, ದುರುದ್ದೇಶಪೂರ್ವಕವಾಗಿ ಜೈಲಿನಲ್ಲಿರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕಿಡಿಕಾರಿದ್ದಾರೆ.
ಮಂಗಳವಾರ ಕೇಂದ್ರದ ನಡೆ ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಜ್ರಿವಾಲ್ ಅವರನ್ನು ಜೈಲಿನಲ್ಲೇ ಕೊಲೆ ಮಾಡಲು ಸಹ ಕೇಂದ್ರ ಸರ್ಕಾರ ಸಂಚು ರೂಪಿಸಿದೆ. ಕೇಂದ್ರ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದು, ಜನ ಬುದ್ದಿ ಕಲಿಸುವ ದಿನ ದೂರವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಭಾರತದ ಕೇಜ್ರಿವಾಲ್ ಬಂಧನಕ್ಕೂ ಪಾಕ್ ಇಮ್ರಾನ್ ಖಾನ್ ಅರೆಸ್ಟ್‌ಗೂ ಏನು ಸಂಬಂಧ? ಸಿಂಘ್ವಿ ವಾದ
ಅರವಿಂದ್ ಕೇಜ್ರಿವಾಲ್ ಆರೋಗ್ಯ ಹದಗೆಡುತ್ತಿದ್ದರೂ ಚಿಕಿತ್ಸೆ ಪಡೆಯಲು ಅವಕಾಶ ನೀಡದ ಕೇಂದ್ರ ಸರ್ಕಾರ, ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದೆ. ತಕ್ಷಣವೇ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಮತ್ತು ಸೂಕ್ತ ಚಿಕಿತ್ಸೆ ಪಡೆಯಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
ಎಎಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಮಧುಮೇಹ ಪ್ರಮಾಣ ಕಡಿಮೆಯಾಗುತ್ತಿದೆ. ಸಕ್ಕರೆ ಪ್ರಮಾಣ 60ಕ್ಕಿಂತ ಕಡಿಮೆಯಾದರೆ ಪ್ರಾಣಕ್ಕೆ ಮಾರಕವಾಗುವ ಸಾಧ್ಯತೆ ಇದೆ. ಆದರೂ ಕೇಂದ್ರ ಸರ್ಕಾರವು ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದರು.
ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಾಜಿದ್ ಮಾತನಾಡಿ, ಮುಖ್ಯಮಂತ್ರಿ ಹೇಗಿರಬೇಕು ಎಂಬುದನ್ನು ಅರವಿಂದ ಕೇಜ್ರಿವಾಲ್ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ಆಸ್ಪತ್ರೆ, ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಿದರು. ಅವರ ಜನಪ್ರಿಯತೆ ಹೆಚ್ಚುವುದನ್ನು ಸಹಿಸದೆ ಈ ರೀತಿಯ ಕುತಂತ್ರ ಮಾಡಿ ಅವರನ್ನು ಜೈಲಿನಲ್ಲಿಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ನರೇಂದ್ರ ಮೋದಿ ಸರ್ಕಾರ ಬುಡಮೇಲು ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದರು.
ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್: ಜಾಮೀನು ಸಿಕ್ಕರೂ ಜೈಲೇ ಗತಿ
ಮಾಜಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಮಾತನಾಡಿ, ಕೇಜ್ರಿವಾಲ್ ಅವರಿಗೆ ಸೂಕ್ತ ಚಿಕಿತ್ಸೆ ಸಿಗದಂತೆ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶನ ಮಾಡುತ್ತಿದ್ದು, ಕೂಡಲೇ ಅರವಿಂದ್ ಕೇಜ್ರಿವಾಲ್ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹಿರಿಯ ರಂಗಕರ್ಮಿ ಶ್ರೀನಿವಾಸ್ ಕಪ್ಪಣ್ಣ, ಸಿಪಿಐ ಸಹ ಕಾರ್ಯದರ್ಶಿ ಅಮ್ಜದ್ ಖಾನ್, ಸಿಪಿಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಯು.ಬಸವರಾಜು, ಎಸ್‌ಟಿಪಿಐನ ಭಾಸ್ಕರ್ ಪ್ರಸಾದ್, ದಲಿತ ಮುಖಂಡ ಹರಿರಾಮ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಭಾಗವಹಿಸಿದ್ದರು.