ಡಿಕೆಶಿ ಸಿದ್ದು ಯಾತ್ರೆ ನಡೆಸಿದ 88 ಕ್ಷೇತ್ರ ಪೈಕಿ 66ರಲ್ಲಿ ಕಾಂಗ್ರೆಸ್‌ ಜಯ

Published : May 14, 2023, 09:11 AM IST
ಡಿಕೆಶಿ ಸಿದ್ದು ಯಾತ್ರೆ ನಡೆಸಿದ 88 ಕ್ಷೇತ್ರ ಪೈಕಿ 66ರಲ್ಲಿ ಕಾಂಗ್ರೆಸ್‌ ಜಯ

ಸಾರಾಂಶ

ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್‌ ನಾಯಕರು ನಡೆಸಿದ ಪ್ರಜಾಧ್ವನಿ ಯಾತ್ರೆಯ ಯಶಸ್ಸು ಉತ್ತಮ ಫಲ ತಂದುಕೊಟ್ಟಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಯಾತ್ರೆ ನಡೆಸಿದ 18 ಜಿಲ್ಲೆಗಳ 88 ಕ್ಷೇತ್ರಗಳ ಪೈಕಿ 66ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ ಗಳಿಸಿದೆ.

ಬೆಂಗಳೂರು: ಪಕ್ಷವನ್ನು ಅಧಿಕಾರಕ್ಕೆ ತರಲು ಕಾಂಗ್ರೆಸ್‌ ನಾಯಕರು ನಡೆಸಿದ ಪ್ರಜಾಧ್ವನಿ ಯಾತ್ರೆಯ ಯಶಸ್ಸು ಉತ್ತಮ ಫಲ ತಂದುಕೊಟ್ಟಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಯಾತ್ರೆ ನಡೆಸಿದ 18 ಜಿಲ್ಲೆಗಳ 88 ಕ್ಷೇತ್ರಗಳ ಪೈಕಿ 66ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯ ಗಳಿಸಿದೆ.

ಭಾರತ್‌ ಜೋಡೋ ಯಾತ್ರೆ (Bharat Jodo Yatra) ಯಶಸ್ವಿಯಾದ ಬಳಿಕ ಜನವರಿಯಲ್ಲಿ ಒಟ್ಟಾಗಿ ಪ್ರಜಾಧ್ವನಿ ಯಾತ್ರೆ ನಡೆಸಿದ ಇಬ್ಬರೂ ನಾಯಕರು ನಂತರ ಫೆ.3ರಿಂದ ಪ್ರತ್ಯೇಕ ಯಾತ್ರೆ ಕೈಗೊಂಡಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಯಾತ್ರೆ ನಡೆಸಿದರೆ, ದಕ್ಷಿಣ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್‌ ಭರ್ಜರಿ ಪ್ರಚಾರ ನಡೆಸಿದರು. ಈ ಪೈಕಿ ಸಿದ್ದರಾಮಯ್ಯ ಯಾತ್ರೆ ನಡೆಸಿದ 10 ಜಿಲ್ಲೆಗಳ 51 ಕ್ಷೇತ್ರಗಳ ಪೈಕಿ 11 ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಗಳಿಸಿದೆ. ಅದೇ ರೀತಿ ಡಿ.ಕೆ.ಶಿವಕುಮಾರ್‌ ಅವರು ಯಾತ್ರೆ ನಡೆಸಿದ 8 ಜಿಲ್ಲೆಗಳ 37 ಕ್ಷೇತ್ರಗಳ ಪೈಕಿ 26ಕ್ಕೂ ಹೆಚ್ಚು ಕ್ಷೇತ್ರಗಳು ಕಾಂಗ್ರೆಸ್‌ ಪಾಲಾಗಿವೆ. ಉಳಿದ 11 ಕ್ಷೇತ್ರಗಳಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಡಿಕೆಶಿ ಯಾತ್ರೆ ಗೆದ್ದ ಕ್ಷೇತ್ರಗಳು:

ಡಿ.ಕೆ.ಶಿವಕುಮಾರ್‌ ಯಾತ್ರೆ ನಡೆಸಿದ್ದ ಕೋಲಾರ ಜಿಲ್ಲೆಯ ಕೋಲಾರ, ಮಾಲೂರು, ಕೆಜಿಎಫ್‌ (KGF), ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮುರು, ಹೊಸದುರ್ಗ, ಶಿವಮೊಗ್ಗ ಜಿಲ್ಲೆಯ ಸೊರಬ, ಸಾಗರ, ಭದ್ರಾವತಿ, ಮಂಡ್ಯ ಜಿಲ್ಲೆಯ ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಚಾಮರಾಜನಗರ ಜಿಲ್ಲೆಯ ಚಾಮರಾಜನಗರ (Chamarajanagara), ಗುಂಡ್ಲುಪೇಟೆ, ಕೊಳ್ಳೇಗಾಲ, ಮೈಸೂರು ಜಿಲ್ಲೆಯ ನಂಜನಗೂಡು, ವರುಣ, ನಾಗಮಂಗಲ, ಟಿ.ನರಸೀಪುರ, ಪಿರಿಯಾಪಟ್ಟಣ, ತುಮಕೂರು ಜಿಲ್ಲೆಯ ಕುಣಿಗಲ್‌, ರಾಮನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.

ಯಾತ್ರೆ ನಡೆದಿದ್ದ ಮುಳಬಾಗಿಲು, ಹೊಳಲ್ಕೆರೆ, ಶಿವಮೊಗ್ಗ, ಶಿಕಾರಿಪುರ, ತೀರ್ಥಹಳ್ಳಿ, ಚನ್ನಪಟ್ಟಣ, ಹಾಸನ (Hasana), ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಹನೂರು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಜಯಗಳಿಸಿವೆ.

ಸಿದ್ದು ಯಾತ್ರೆಯ ಗೆದ್ದ ಕ್ಷೇತ್ರಗಳು:

ಸಿದ್ದರಾಮಯ್ಯ ಯಾತ್ರೆ ನಡೆಸಿದ ಬೀದರ್‌ ಜಿಲ್ಲೆಯ ಬೀದರ್‌, ಭಾಲ್ಕಿ, ಕಲಬುರಗಿ (Kalaburagi) ಜಿಲ್ಲೆಯ ಚಿತ್ತಾಪುರ, ಅಫ್ಜಲ್ಪುರ, ಜೇವರ್ಗಿ, ಹಾವೇರಿ ಜಿಲ್ಲೆಯ ಹಿರೇಕೆರೂರು, ಉತ್ತರ ಕನ್ನಡದ ಹಳಿಯಾಳ, ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ರೋಣ, ಬೆಳಗಾವಿ ಜಿಲ್ಲೆಯ ಕಿತ್ತೂರು, ರಾಯಬಾಗ, ಬೆಳಗಾವಿ ಉತ್ತರ, ಬೆಳಗಾವಿ ಗ್ರಾಮೀಣ, ರಾಮದುರ್ಗ (Ramdurga), ಸವದತ್ತಿ ಯಲ್ಲಮ್ಮ, ಚಿಕ್ಕೋಡಿ ಸದಲಗಾ, ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ, ತೇರದಾಳ, ಬೀಳಗಿ, ಹುನಗುಂದ, ಮುಧೋಳ, ವಿಜಯಪುರ ಜಿಲ್ಲೆಯ ಬಬಲೇಶ್ವರ, ಬಸವವನಬಾಗೇವಾಡಿ, ಮುದ್ದೇಬಿಹಾಳ, ಸಿಂದಗಿ, ಯಾದಗಿರಿ ಜಿಲ್ಲೆಯ ಶಹಾಪುರ, ಸುರಪುರ(Surapura), ದಾವಣಗೆರೆ ಜಿಲ್ಲೆಯ ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಚನ್ನಗಿರಿ, ಹೊನ್ನಾಳಿ, ಜಗಳೂರು ಹಾಗೂ ಧಾರವಾಡ ಜಿಲ್ಲೆಯ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಧಾರವಾಡ ಪೂರ್ವ ಸೇರಿದಂತೆ 38ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಗಳಿಸಿದೆ.

ಉಳಿದಂತೆ ಯಾತ್ರೆ ನಡೆದ ಹುಮ್ನಾಬಾದ್‌, ಔರಾದ್‌, ಬೀದರ್‌ ದಕ್ಷಿಣ, ಹೂವಿನಹಡಗಲಿ, ಕಲಬುರಗಿ ಗ್ರಾಮೀಣ, ಚಿಂಚೋಳಿ, ನವಲಗುಂದ, ಖಾನಾಪುರ, ಜಮಖಂಡಿ, ವಿಜಯಪುರ, ದೇವರಹಿಪ್ಪರಗಿ ಕ್ಷೇತ್ರಗಳು ಮಾತ್ರ ಬಿಜೆಪಿ ಮತ್ತು ಜೆಡಿಎಸ್‌ ಪಾಲಾಗಿವೆ.

Karnataka election results 2023: ಐದು ಅಪ್ಪ-ಮಕ್ಕಳ ಜೋಡಿಯ ಗೆಲುವಿ ...

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌