ಕಾಂಗ್ರೆಸ್‌ನ ಶೆಟ್ಟರ್‌ ಗೆಲ್ತಾರೆ: ಬೀಗರ ಪರ ಬಿಜೆಪಿ ಸಂಸದೆ ಅಂಗಡಿ ಬ್ಯಾಟಿಂಗ್!

Published : May 11, 2023, 01:38 AM IST
ಕಾಂಗ್ರೆಸ್‌ನ ಶೆಟ್ಟರ್‌ ಗೆಲ್ತಾರೆ: ಬೀಗರ ಪರ ಬಿಜೆಪಿ ಸಂಸದೆ ಅಂಗಡಿ ಬ್ಯಾಟಿಂಗ್!

ಸಾರಾಂಶ

ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13ರಿಂದ14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ (ಮೇ.11) : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13ರಿಂದ14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿರುವ ಮತಕೇಂದ್ರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ (Jagadish shettar) ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ ಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್‌ ಶೆಟ್ಟರ ಪಕ್ಷ ಭೇದ ಮರೆತು ಕೆಲಸ ಮಾಡಿದ್ದರಿಂದ ಬೀಗರದು ಚೆನ್ನಾಗಿದೆ. ಚೆನ್ನಾಗಿ ನಡೀತಾ ಇದೆ. ಅವರು ಬರ್ತಾರೆ ಎಂದು ತಮ್ಮ ಬೀಗರಾದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ ಪರವಾಗಿ ಬ್ಯಾಟಿಂಗ್‌ ಮಾಡಿದರು.

ಬಿಎಸ್‌ವೈ ಅಧಿಕಾರ ಬಿಡಲು ಬಿಎಲ್ ಸಂತೋಷ್ ಕಾರಣ: ಜಗದೀಶ ಶೆಟ್ಟರ್

ಅಲ್ಲದೇ ಶೆಟ್ಟರ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಟಿಕ್ಸ್‌ನಲ್ಲಿ ಹಾಗೆ ಎಲ್ಲಾ ಆಗೋದು ಎಂದ ಅವರು, ಮೊದಲಿಂದಲೂ ಜಗದೀಶ್‌ ಶೆಟ್ಟರ ಅಲ್ಲಿ ಹೆಸರು ಮಾಡಿದ್ದಾರೆ ಎಂದರು.

ಬಿಜೆಪಿ ಸಂಸದರಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಪರವಾಗಿ ಸಪೋರ್ಚ್‌ ಕುರಿತು ಪ್ರತಿಕ್ರಿಯಿಸಿದ ಅವರು, ಅವರದು ಅಲ್ಲಿ, ನಮ್ಮದು ಇಲ್ಲಿ ಎಂದು ಸಮಜಾಯಿಷಿ ನೀಡಿದರು. ಮುಂದಿನ ಚುನಾವಣೆಯಲ್ಲಿ ತಾವು ಪಕ್ಷ ಬದಲಾವಣೆ ಮಾಡುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ