ಬಿಜೆಪಿ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ, ಈ ಸಲ 40 ಸೀಟ್‌ಗಳನ್ನೂ ಗೆಲ್ಲಲ್ಲ: ರೋಹನ್ ಗುಪ್ತಾ

By Kannadaprabha News  |  First Published Apr 21, 2023, 10:38 AM IST

ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಜನತೆ ಅರಿತಿದ್ದು, ಈ ಚುನಾವಣೆಯಲ್ಲಿ ಶೇ. 40ರ ಸರ್ಕಾರ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಎಐಸಿಸಿ ಮಾಧ್ಯಮ ಮತ್ತು ಸಮೂಹ ಸಂವಹನ ಸಮಿತಿ ರಾಜ್ಯ ಉಸ್ತುವಾರಿ ರೋಹನ್‌ ಗುಪ್ತಾ ಹೇಳಿದರು.


ಹುಬ್ಬಳ್ಳಿ (ಏ.21) : ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಜನತೆ ಅರಿತಿದ್ದು, ಈ ಚುನಾವಣೆಯಲ್ಲಿ ಶೇ. 40ರ ಸರ್ಕಾರ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಎಐಸಿಸಿ ಮಾಧ್ಯಮ ಮತ್ತು ಸಮೂಹ ಸಂವಹನ ಸಮಿತಿ ರಾಜ್ಯ ಉಸ್ತುವಾರಿ ರೋಹನ್‌ ಗುಪ್ತಾ ಹೇಳಿದರು.

ಗುರುವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ಸಿನಿಂದ ಹಮ್ಮಿಕೊಳ್ಳಲಾಗಿದ್ದ ಬೆಳಗಾವಿ ವಿಭಾಗದ ಮಾಧ್ಯಮ ಸಂವಹನ ಕೇಂದ್ರ ಉದ್ಘಾಟನಾ(Inauguration of Media Communication Centre) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

Tap to resize

Latest Videos

ಕೊನೇ ದಿನವೂ ಕೋಟಿ ಕುಳಗಳು ಕಣಕ್ಕೆ: ಡಿಕೆಸು 353 ಕೋಟಿ ಆಸ್ತಿಗೆ ವಾರಸುದಾರನಾದರೆ ಆಯನೂರು ಆಸ್ತಿ 4 ಪಟ್ಟು ಹೆಚ್ಚಳ

ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ದುರಾಡಳಿತವನ್ನು ಜನರು ಅರಿತಿದ್ದಾರೆ. ಭ್ರಷ್ಟಾಚಾರದಲ್ಲಿಯೇ ಮುಳುಗಿರುವ ಬಿಜೆಪಿ ಸರ್ಕಾರವನ್ನು ಈ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುವ ಮೂಲಕ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ನೀಡಿಲು ಜನತೆ ಸಿದ್ಧರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಚರ್ಚೆಯಲ್ಲಿರುವ 40% ಸರ್ಕಾರದ ಕೂಗು ಜೋರಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದಿರಲಿ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಈ ಬಾರಿ ಕಾಂಗ್ರೆಸ್‌ 140ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಂದಿನಿ ರಾಜ್ಯದ ಅಸ್ಮಿತೆ:

ನಂದಿನಿ ಕರ್ನಾಟಕದ ಅಸ್ಮಿತೆಯಾಗಿದ್ದು ಯಾವುದೇ ಕಾರಣಕ್ಕೂ ಇದನ್ನು ಮುಚ್ಚಲು ಬಿಡುವುದಿಲ್ಲ. ಈಗಾಗಲೇ ನಂದಿನಿಯನ್ನು ಅಮೂಲ್‌ನೊಂದಿಗೆ ವಿಲೀನಗೊಳಿಸುವ ಹುನ್ನಾರವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಇದರ ಕುರಿತು ಈಗಾಗಲೇ ಕಾಂಗ್ರೆಸ್‌ ಹೋರಾಟ ನಡೆಸಿದೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಲೆ:

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‌ ಅಲೆ ನೋಡಿ ಸಂತಸವಾಗುತ್ತಿದೆ. ಬೆಳಗ್ಗೆ ಧಾರವಾಡದಲ್ಲಿ ವಿನಯ ಕುಲಕರ್ಣಿ ಹಾಗೂ ದೀಪಕ ಚಿಂಚೋರೆ ಪರ ರಾರ‍ಯಲಿಗೆ ಹೋದ ವೇಳೆ ಸೇರಿದ್ದ ಜನಬೆಂಬಲ ನೋಡಿದರೆ ಜಿಲ್ಲೆಯ ಏಳೂ ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸುವುದು ನಿಶ್ಚಿತ. ಹಾಗೆಯೇ ಬೇರೆ ಬೇರೆ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಉತ್ಸಾಹ ನೋಡಿದರೆ ಈ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದರು.

 

ಶೆಟ್ಟರ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಆನೆ ಬಲ: ರಣದೀಪಸಿಂಗ್‌ ಸುರ್ಜೇವಾಲಾ

ಬಿಜೆಪಿಯಿಂದ ಲಿಂಗಾಯತರಿಗೆ ಅಪಮಾನವಾಗಿಲ್ಲ, ಶೆಟ್ಟರ್‌ ಅವರಿಂದಲೇ ಲಿಂಗಾಯತರಿಗೆ ಅಪಮಾನವಾಗಿದೆ ಎಂಬ ಮಾಜಿ ಸಿಎಂ ಕೆ.ಎಸ್‌. ಈಶ್ವರಪ್ಪ ಹೇಳಿಕೆಗೆ ಸ್ಪಷ್ಟನೆ ನೀಡಿದ ಶೆಟ್ಟರ್‌, ಇದು ಅವರು ಹೇಳುತ್ತಿರುವ ಮಾತಲ್ಲ. ಬಿಜೆಪಿ ಹೈಕಮಾಂಡ್‌ ಅವರಿಗೆ ಒತ್ತಡ ಹಾಕಿಸಿ ಈ ರೀತಿ ಹೇಳಿಸುತ್ತಿದೆ. ಚುನಾವಣೆಯಲ್ಲಿ ನೋಡೋಣ ಯಾರು ಯಾರಿಗೆ ಅಪಮಾನ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ ಎಂದರು.

ಬಿಜೆಪಿ ಶೇ. 40ರ ಸರ್ಕಾರ ಎಂಬ ಹೇಳಿಕೆ ಕುರಿತು ಮಾತನಾಡಿದ ಶೆಟ್ಟರ್‌, ಭ್ರಷ್ಟಾಚಾರವಿರುವುದಂತೂ ನಿಜ. ಆದರೆ, ನಾನು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಹೇಳುವುದಿಲ್ಲ ಎಂದರು. ಈ ವೇಳೆ ಮಹಾನಗರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ವಿದ್ಯಾನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಜತ್‌ ಉಳ್ಳಾಗಡ್ಡಿಮಠ, ಬಂಗಾರೇಶ ಹಿರೇಮಠ ಸೇರಿದಂತೆ ಹಲವರಿದ್ದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!