
ಬೆಂಗಳೂರು (ಮೇ.11) ಕರ್ನಾಟಕ ವಿಧಾನಸಭೆ 224 ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಗಿದಿದೆ. ಹಗಲು-ರಾತ್ರಿಯೆನ್ನದೇ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಅಭ್ಯರ್ಥಿಗಳು, ಕಾರ್ಯಕರ್ತರು ನಿರಾಳರಾಗಿದ್ದಾರೆ.
ವರುಣಕ್ಷೇತ್ರದಲ್ಲಿ ಸಿದ್ದರಾಮಯ್ಯರ ಗೆಲುವಿಗಾಗಿ ಕುಟುಂಬದಿಂದ ದೂರ ಉಳಿದು ಪ್ರಚಾರಕಾರ್ಯದಲ್ಲಿ ತೊಡಗಿದ್ದ ಪಕ್ಷದ ಕಾರ್ಯಕರ್ತರ ಶ್ರಮ, ಬದ್ಧತೆ ಬಗ್ಗೆ ಮಾಜಿ ಮುಖ್ಯಮಂತ್ರಿ ಕೊಂಡಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ಕಾರ್ಯಕರ್ತರಿಗೆ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Karnataka election 2023: ಸಿದ್ದರಾಮಯ್ಯ ಸಿಎಂ ಆಗುವ ಸಾಧ್ಯತೆ ಇದ್ದರೆ ಬೆಂಬಲ: ಜನಾರ್ದನ ರೆಡ್ಡಿ
ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರ(Varuna assembly constituency)ಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರೆಲ್ಲರನ್ನೂ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ನನಗೆ ಸಾಧ್ಯವಾಗಿಲ್ಲ.
ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದಿದ್ದಾರೆ. ಇದೇ ವೇಳೆ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಮನವಿ ಮಾಡಿಕೊಂಡಿರುವ ಸಿದ್ದರಾಮಯ್ಯನವರು, ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದಿದ್ದಾರೆ.
ಕಾರ್ಯಕರ್ತರ ಮೇಲಿನ ತಮ್ಮ ನಾಯಕರ ಕಾಳಜಿಗೆ ಖುಷಿಗೊಂಡಿದ್ದಾರೆ. ಟ್ವೀಟರ್‌ನಲ್ಲೇ ಮತ್ತೊಮ್ಮೆ ಸಿದ್ದರಾಮಯ್ಯ, ಜೈ ಸಿದ್ದರಾಮಯ್ಯ ಘೋಷಣೆ ಮೊಳಗಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.