
ಬೆಂಗಳೂರು(ಮೇ.10): ಭಾರಿ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ನಡೆಯುತ್ತಿದೆ. 5.3 ಕೋಟಿ ಮತದಾರರು ಪೈಕಿ ಕೆಲವೆಡೆ ಉತ್ತಮ ಮತದಾನವಾಗಿದೆ. ಈ ಬಾರಿಯೂ ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಪ್ರದೇಶದಲ್ಲೇ ಮತಾದನ ಪ್ರಮಾಣ ಹೆಚ್ಚಾಗಿದೆ. ಒಂದಂಡೆ ಮತದಾನ ಪ್ರಕ್ರಿಯೆ ಚುರುಕಾಗುತ್ತಿದ್ದರೆ, ಮತ್ತೊಂದೆಡೆ ಈ ಬಾರಿ ಯಾರು ಅಧಿಕಾರ ಹಿಡಿಯಲಿದ್ದಾರೆ ಅನ್ನೋ ಲೆಕ್ಕಾಚಾರ ಜೋರಾಗುತ್ತಿದೆ. ಸಂಜೆ 6 ಗಂಟೆಗೆ ಮತದಾನ ಅಂತ್ಯವಾಗಲಿದೆ. ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಪ್ರಟಕಗೊಳ್ಳಲಿದೆ. ಹಲವು ಸಂಸ್ಥೆಗಳು, ಮಾಧ್ಯಮಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಮುಂದಿನ ಸರ್ಕಾರದ ಚಿತ್ರಣ ನೀಲಿದೆ. ಹೀಗಾಗಿ ಕುತೂಹಲ ಇಮ್ಮಡಿಯಾಗಿದೆ.
ಸಂಜೆ 6 ಗಂಟೆ ಬಳಿಕ ಏಷ್ಯಾನೆಟ್ ಸುವರ್ಣನ್ಯೂಸ್.ಕಾಂನಲ್ಲಿ ಕರ್ನಾಟಕದ ಶೇಕಡವಾರು ಮತದಾನ, ಜಿಲ್ಲಾವಾರು ಮತದಾನ ಜೊತೆಗೆ ಸಮೀಕ್ಷಾ ವರದಿಯೂ ಪ್ರಕಟಗೊಳ್ಳಲಿದೆ. ಕರ್ನಾಟಕದಲ್ಲಿ ಅತಂತ್ರ ಸರ್ಕಾರ ರಚನೆಯಾಗುತ್ತಾ? ಪೂರ್ಣ ಬಹುಮತದ ಸರ್ಕಾರವೇ? ಈ ಎಲ್ಲಾ ಪ್ರಶ್ನೆಗೆ ಉತ್ತರ ಸಿಗಲಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಇದರ ಜೊತೆಗೆ ಇವರ ಹೋರಾಟದಿಂದ ಹಲವು ಕ್ಷೇತ್ರದಲ್ಲಿ ಜೆಡಿಎಸ್‌ಗೂ ವರವಾಗುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಕುತೂಹಲಗಳ ಆಗರವಾಗಿದೆ.
Karnataka Elections 2023 LIVE: ಮಧ್ಯಾಹ್ನ 3 ಗಂಟೆಗೆ ಬೆಂಗಳೂರಲ್ಲಿ ಶೇ.40 ಮತದಾನ
ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಈ ಬಾರಿ ತಮ್ಮದೇ ಸರ್ಕಾರ ಎನ್ನುತ್ತಿದೆ. ಇತ್ತ ಜೆಡಿಎಸ್ ಆತ್ಮವಿಶ್ವಾಸಕ್ಕೂ ಯಾವುದೇ ಕೊರತೆಯಿಲ್ಲ. 224 ಕ್ಷೇತ್ರಗಳಲ್ಲಿ ಅಧಿಪತ್ಯ ಸಾಧಿಸುವ ಪಕ್ಷ ಯಾವುದು? 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಿಜೆಪಿಗೆ ಪೂರ್ಣ ಬಹುಮತ ಸಿಗಲಿಲ್ಲ. ಇತ್ತ ಕಾಂಗ್ರೆಸ್ 76 ಸ್ಥಾನ ಗೆದ್ದು 2ನೇ ಅತೀ ದೊಡ್ಡ ಪಕ್ಷವಾಗಿದ್ದರೆ, ಜೆಡಿಎಸ್ 37 ಸ್ಥಾನ ಗೆದ್ದುಕೊಂಡಿತ್ತು. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿತ್ತು.
ಒಂದೂವರೆ ವರ್ಷದ ಬಳಿಕ ಮೈತ್ರಿ ಸರ್ಕಾರ ಪತನಗೊಂಡಿತು. ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಸೇರಿಕೊಳ್ಳುವ ಮೂಲಕ ಹೊಸ ಬಿಜೆಪಿ ಸರ್ಕಾರ ರಚನೆಯಾಯಿತು. ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 2021ರ ಜುಲೈನಲ್ಲಿ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದರು. ಹೀಗಾಗಿ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಸರತಿ ಸಾಲಲ್ಲಿ ನಿಂತು ವೋಟ್ ಮಾಡಿ, ಹೊಸ ಮತದಾರರಿಗೆ ಮಹತ್ವದ ಸಂದೇಶ ಸಾರಿದ ಜಾವಗಲ್ ಶ್ರೀನಾಥ್
2018ರಲ್ಲಿ ಅತಂತ್ರ ವಿಧಾನಸಭಾ ಸೃಷ್ಟಿಯಾಗಿತ್ತು. ಈ ಬಾರಿಯೂ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಅನ್ನೋ ಮಾತುಗಳೇ ಕೇಳಿಬರುತ್ತಿದೆ. ಆದರೆ ಕಳೆದ ಕೆಲ ದಿನಗಳಿಂದ ರಾಜಕೀಯ ಪಕ್ಷಗಳ ಮಾಡಿದ ತಪ್ಪು ನಡೆ ಕೆಲವರಿಗೆ ವರದಾನವಾಗುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.