ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬಿಜೆಪಿಯ ಮಹೇಶ್ ತೆಂಗಿನಕಾಯಿ ವಿರುದ್ದ ಸೋತಿದ್ದಾರೆ.
ಧಾರವಾಡ (ಮೇ.13): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬಿಜೆಪಿಯ ಮಹೇಶ್ ತೆಂಗಿನಕಾಯಿ ವಿರುದ್ದ ಸೋತಿದ್ದಾರೆ. 1994ರಿಂದ ಈ ವರೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿಯಿಂದ ಜಗದೀಶ ಶೆಟ್ಟರ್ ಆಯ್ಕೆಯಾಗಿದ್ದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಪುರುಷ ಮತದಾರರು-123584, ಮಹಿಳಾ ಮತದಾರರು-125617, ಇತರೆ-39, ಒಟ್ಟು-249240 ಮತದಾರರಿದ್ದರು. 2018 ರಲ್ಲಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಯಿಂದ 1,46,682 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದರು.
ಇನ್ನು ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ವಿನಯ್ ಕುಲಕರ್ಣಿ ಭರ್ಜರಿ ಜಯ ಗಳಿಸಿದ್ದಾರೆ. ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ಭಾರೀ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ. ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ವಿನಯ್ ಕುಲಕರ್ಣಿ ಗೆಲುವಿನ ಸಾಧನೆ ಮಾಡಿದ್ದಾರೆ. ಧಾರವಾಡ ಜಿಪಂ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿಗೆ ನಿರ್ಬಂಧಿಸಲಾಗಿತ್ತು. ಆದರೂ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಿನಯ್ ಕುಲಕರ್ಣಿ ಗೆಲುವು ಸಾಧಿಸಿದ್ದಾರೆ.
Karnataka Election 2023 Live: 130 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ...
ಬಿಜೆಪಿಯಿಂದ ಸ್ಪರ್ಧಿಸಿದ್ದ ಅಮೃತ್ ದೇಸಾಯಿ ಅವರು ಸುಮಾರು 15 ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲು ಅನುಭವಿಸಿದ್ದಾರೆ. ಇನ್ನು ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಪುರುಷ ಮತದಾರರು-107340, ಮಹಿಳಾ ಮತದಾರರು-106337, ಇತರೆ-10 , ಒಟ್ಟು-213687 ಮತದಾರರಿದ್ದರು. 2018 ರಲ್ಲಿ ಅಮೃತ್ ದೇಸಾಯಿ ಅವರು ಬಿಜೆಪಿಯಿಂದ 1,53,663 ಮತಗಳನ್ನು ಗಳಿಸಿ ಜಯಶಾಲಿಯಾಗಿದ್ದರು. 16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.