Karnataka Assembly Election 2018ರಂತೆ ಈ ಬಾರಿಯೂ ಸಮೀಕ್ಷೆ ಲೆಕ್ಕಾಚಾರ ಉಲ್ಟಾ ಮಾಡುತ್ತಾ ಫಲಿತಾಂಶ?

Published : May 10, 2023, 05:05 PM IST
Karnataka Assembly Election 2018ರಂತೆ ಈ ಬಾರಿಯೂ ಸಮೀಕ್ಷೆ ಲೆಕ್ಕಾಚಾರ ಉಲ್ಟಾ ಮಾಡುತ್ತಾ ಫಲಿತಾಂಶ?

ಸಾರಾಂಶ

ಕರ್ನಾಟಕ ವಿಧಾನಸಭಾ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಇದೀಗ ಚುನಾವಣೋತ್ತರ ಸಮೀಕ್ಷೆ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 2018ರಂತೆ ಸಮೀಕ್ಷೆ ಲೆಕ್ಕಾಚಾರವನ್ನೇ ಉಲ್ಟಾ ಮಾಡುತ್ತಾ ಫಲಿತಾಂಶ? 2018ರಲ್ಲಿ ಸಮೀಕ್ಷೆ ಹಾಗೂ ಫಲಿತಾಂಶ ನಡುವಿನ ಅಂತರವೇನು?

ಬೆಂಗಳೂರು(ಮೇ.10): ಕರ್ನಾಟಕ ವಿಧಾನಸಭಾ ಚುನಾವಣೆ ಕೊನೆಯ ಹಂತ ತಲುಪುತ್ತಿದೆ. ಸಂಜೆ 6 ಗಂಟೆಗೆ ಮತದಾನ ಅಂತ್ಯಗೊಳ್ಳಲಿದೆ. ಬಳಿಕ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಳ್ಳಲಿದೆ. ಮೂರು ಪಕ್ಷಗಳು ಗೆಲುವಿನ ವಿಶ್ವಾಸದಲ್ಲಿದೆ. ಇದರ ನಡುವೆ ಅತಂತ್ರ ವಿಧಾನಸಭೆ ಮಾತುಗಳು ಕೇಳಿಬರುತ್ತಿದೆ. 2018ರ ಫಲಿತಾಂಶಕ್ಕೂ ಚುನಾವಣೋತ್ತರ ಸಮೀಕ್ಷೆಗೂ ಭಾರಿ ವ್ಯತ್ಯಾಸವಾಗಿತ್ತು. ಇದೇ ರೀತಿ ಈ ಬಾರಿಯ ಚನಾವಣಾ ಫಲಿತಾಂಶ ಹಲವು ಅಚ್ಚರಿಗಳನ್ನು ನೀಡುವ ಸಾಧ್ಯತೆ ಇದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

2018ರಲ್ಲಿ ಒಟ್ಟಾರೆ ಚುನಾವಣಾ ಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪೂರ್ಣಬಹುಮತ ಪಡೆಯಲಿದೆ ಎಂದಿತ್ತು. ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಸರಿಸುಮಾರು 100 ಸ್ಥಾನ ಗೆಲ್ಲಲಿದೆ ಎಂದಿತ್ತು. ಇನ್ನು ಬಿಜೆಪಿ 94 ರಿಂದ 97 ಸ್ಥಾನಕ್ಕೆ ಕುಸಿಯಲಿದೆ ಎಂದಿತ್ತು. ಇದು ಚುನಾವಣೋತ್ತರ ಸಮೀಕ್ಷೆಗಳ ಒಟ್ಟಾರೆ ಫಲಿತಾಂಶವಾಗಿತ್ತು. ಆದರೆ 2018ರ ಫಲಿತಾಂಶದಲ್ಲಿ ಬಿಜೆಪಿ 104 ಸ್ಥಾನ ಗೆದ್ದುಕೊಂಡರೆ, ಕಾಂಗ್ರೆಸ್ 80 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.

Karnataka Elections 2023 LIVE: ಮತದಾದನಕ್ಕಿನ್ನು ಎರಡೇ ಗಂಟೆ ಅವಕಾಶ, ಎಕ್ಸಿಟ್ ಪೋಲ್ 6 ಗಂಟೆಗೆ!...

2013ರಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 122 ಸ್ಥಾನ ಗೆದ್ದು ಅಭೂತಪೂರ್ವ ಗೆಲುವು ಸಾಧಿಸಿತ್ತು. ಇನ್ನು ಒಡೆದು ಹೋಳಾಗಿದ್ದ ಬಿಜೆಪಿ 40 ಸ್ಥಾನಕ್ಕೆ ಕುಸಿದಿತ್ತು. ಕಳೆದ ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಹಲವು ಅಚ್ಚರಿಗಳಾಗಿವೆ. ಹೀಗಾಗಿ ಈ ಬಾರಿಯ ಚುನಾವಣೋತ್ತರ ಸಮೀಕ್ಷೆ ಹಾಗೂ ಫಲಿತಾಂಶದ ನಡುವೆ ಅಚ್ಚರಿಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ.

ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ 8,802 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮತದಾನ ಆಗಿಲ್ಲ ಅನ್ನೋದು ಮತ್ತೆ ಚಿಂತೆಗೆ ಕಾರಣವಾಗಿದೆ. ಸರಿಸುಮಾರು 1 ಕೋಟಿ ಮತದಾರರನ್ನು ಹೊಂದಿರುವ ಬೆಂಗಳೂರಿನಲ್ಲಿ ಅರ್ಧದಷ್ಟು ಜನ ಮತದಾನದಿಂದ ದೂರ ಉಳಿಯುತ್ತಿರುವುದು ಆಯೋಗದ ಚಿಂತೆ ಹೆಚ್ಚಿಸಿದೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 389 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 

Karnataka Assembly Election 2023 ಸಂಜೆ 6 ಗಂಟೆಗೆ ಹೊರಬೀಳಲಿದೆ ಸಮೀಕ್ಷೆ, ಯಾರಿಗೆ ಅಧಿಕಾರ?

ನಗರದಲ್ಲಿ ಒಟ್ಟು 97.13 ಲಕ್ಷ ಮತದಾರರಿದ್ದಾರೆ. ಈ ಪೈಕಿ 50.24 ಲಕ್ಷ ಪುರುಷರು ಹಾಗೂ 46.88 ಲಕ್ಷ ಮಹಿಳಾ ಮತದಾರರಿದ್ದಾರೆ. 2.37 ಲಕ್ಷ 80 ವರ್ಷ ಮೇಲ್ಪಟ್ಟವರಿದ್ದು, 25,790 ಮಂದಿ ಅಂಗವಿಕಲ ಮತದಾರರಿದ್ದಾರೆ. 2,017 ಎನ್‌ಆರ್‌ಐ ಮತದಾರರಿದ್ದಾರೆ. 1,43,536 ಯುವ ಮತದಾರರು, 1,760 ಸೇವಾ ಮತದಾರರಿದ್ದಾರೆ.ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 41 ಸಾವಿರ ಅಧಿಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಈ ಪೈಕಿ 36 ಸಾವಿರ ಮಂದಿ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೇ.20 ರಷ್ಟುಅಧಿಕಾರಿ ಸಿಬ್ಬಂದಿಯನ್ನು ಕಾಯ್ದಿರಿಸಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?