Karnataka Election Results 2023: 10 ಬಾರಿ ಒಂದೇ ಚಿಹ್ನೆ, ಒಂದೇ ಪಕ್ಷದಡಿ ಸ್ಪರ್ಧಿಸಿ ಗೆದ್ದು ಬೀಗಿದ ಆರಗ ಜ್ಞಾನೇಂದ್ರ

By Govindaraj S  |  First Published May 13, 2023, 1:05 PM IST

ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ವಿರುದ್ಧ ಆರಗ ಜ್ಞಾನೇಂದ್ರ 11 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. 


ಶಿವಮೊಗ್ಗ (ಮೇ.13): ಕೃಷಿಭೂಮಿ ಹೋರಾಟಗಳಿಂದ ಹೆಸರುವಾಸಿಯಾಗಿರುವ ಸಹ್ಯಾದ್ರಿ ಬೆಟ್ಟಗಳ ತಪ್ಪಲು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ವಿರುದ್ಧ ಆರಗ ಜ್ಞಾನೇಂದ್ರ 11 ಸಾವಿರಕ್ಕೂ ಹೆಚ್ಚು ಮತಗಳಿಂದ ಜಯಗಳಿಸಿದ್ದಾರೆ. ಸತತ ಐದನೇ ಬಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ ಪರಸ್ಪರ ಸ್ಪರ್ಧಿಸಿದ್ದರು. ಈ ಹಿಂದೆ ಮೂರು ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರೆ ಕಿಮ್ಮನೆ ಎರಡು ಬಾರಿ ಗೆದ್ದಿದ್ದಾರೆ. ಒಟ್ಟಾರೆ 4 ಬಾರಿ ತೀರ್ಥಹಳ್ಳಿ ಕ್ಷೇತ್ರವನ್ನು ಆರಗ ಜ್ಞಾನೇಂದ್ರ ಪ್ರತಿನಿಧಿಸಿದ್ದಾರೆ. ಒಟ್ಟಾರೆಯಾಗಿ ಜ್ಞಾನೇಂದ್ರ 5ನೇ ಗೆದಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು 3 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.

ವಿಶೇಷವಾಗಿ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ, ಎಐಸಿಸಿ ಅಧ್ಯಕ್ಷ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿದರೆ ರಾಜ್ಯದಲ್ಲಿ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸುತ್ತಿರುವವರಲ್ಲಿ ಆರಗ ಜ್ಞಾನೇಂದ್ರ ಪ್ರಮುಖರು. ಮಲ್ಲಿಕಾರ್ಜುನ ಖರ್ಗೆಯವರು 10 ಬಾರಿ ವಿಧಾನಸಭೆಗೆ ಸ್ಪರ್ಧಿಸಿ ದಾಖಲೆ ನಿರ್ಮಿಸಿದ್ದಾರೆ. ಈಗ ಆರಗ ಜ್ಞಾನೇಂದ್ರ ಕೂಡ 10ನೇ ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಜೊತೆಗೆ, 10 ಬಾರಿಯೂ ಒಂದೇ ಪಕ್ಷ ಮತ್ತು ಒಂದೇ ಚಿಹ್ನೆಯಡಿ ಸ್ಪರ್ಧೆ ಮಾಡಿದ್ದಾರೆ. 1983ರಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಅವರು ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. 

Latest Videos

undefined

Karnataka Election 2023 Live: 130 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಭಾರಿ ಮುನ್ನಡೆ, ಸಂಭ್ರಮ ಎಲ್ಲೆಡೆ...

ಆಗ ಶಿಕಾರಿಪುರದಿಂದ ಯಡಿಯೂರಪ್ಪ ಮತ್ತು ಶಿವಮೊಗ್ಗದಿಂದ ಎಂ.ಆನಂದ ರಾವ್‌ ಕೂಡ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಯಡಿಯೂರಪ್ಪ ಮತ್ತು ಆನಂದ ರಾವ್‌ ಗೆಲುವು ಸಾಧಿಸಿದ್ದರು. ಆದರೆ, ಜ್ಞಾನೇಂದ್ರ ಸೋತಿದ್ದರು. ಆರಗ ಅವರು 10 ಬಾರಿ ಬಿಜೆಪಿಯಿಂದ ಕಮಲ ಚಿಹ್ನೆಯಡಿ ಸ್ಪರ್ಧಿಸಿದ್ದು, 4 ಬಾರಿ ಗೆಲುವು ಸಾಧಿಸಿದ್ದಾರೆ. ಜೊತೆಗೆ, ಒಮ್ಮೆ ಗೆದ್ದವರು ಮತ್ತೊಮ್ಮೆ ಗೆಲ್ಲುವುದಿಲ್ಲ ಎಂಬ ತೀರ್ಥಹಳ್ಳಿ ಕ್ಷೇತ್ರದ ನಂಬಿಕೆಯನ್ನು ಕೂಡ ಪುಡಿಗಟ್ಟಿ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕೂಡ ಹಿರಿಯ ರಾಜಕಾರಣಿ ಆಗಿದ್ದರೂ, ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಒಂದೇ ಪಕ್ಷ ಮತ್ತು ಒಂದೇ ಚಿಹ್ನೆಯಡಿ 10 ಬಾರಿ ಸ್ಪರ್ಧಿಸಿಲ್ಲ.

Karnataka Election Results 2023: ಶೆಟ್ಟರ್‌ನ 'ಕೈ' ಬಿಟ್ಟು ವಿನಯ್‌ಗೆ ಜೈ ಎಂದ ಮತದಾರ!

ಇನ್ನು 2018ರಲ್ಲಿ ಸುಮಾರು 22 ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. 2013 ಹಾಗೂ 2008ರಲ್ಲಿ ಕಿಮ್ಮನೆ 2 ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಇನ್ನು 1999ರಲ್ಲಿ 4 ಸಾವಿರ ಹಾಗೂ 2004ರಲ್ಲಿ ಒಂದೂವರೆ ಸಾವಿರ ಮತಗಳಿಂದ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದರು. ಈ ಬಾರಿ ಕಣದಲ್ಲಿ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ ಜತೆಗೆ ಎಎಪಿಯಿಂದ ಶಿವಕುಮಾರ್, ಜೆಡಿಎಸ್​ನಿಂದ ರಾಜಾರಾಮ್ ಸ್ಫರ್ಧಿಸಿದ್ದರು. ಕಳೆದ ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿ 40 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದಿದ್ದ ಮಂಜುನಾಥ ಗೌಡ ಈ ಬಾರಿ ಕಾಂಗ್ರೆಸ್ ಸೇರಿದ್ದಾರೆ. 

click me!