ಜಿದ್ದಾಜಿದ್ದಿನ ಅಖಾಡ ಎನ್ನಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬರು ದೇವರಿಗೆ ಮುಡಿ ನೀಡುವುದರ ಮೂಲಕ ತಮ್ಮ ಹರಕೆ ತೀರಿಸಿದ್ದಾರೆ.
ಚನ್ನಪಟ್ಟಣ (ಮೇ.14) : ಜಿದ್ದಾಜಿದ್ದಿನ ಅಖಾಡ ಎನ್ನಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬರು ದೇವರಿಗೆ ಮುಡಿ ನೀಡುವುದರ ಮೂಲಕ ತಮ್ಮ ಹರಕೆ ತೀರಿಸಿದ್ದಾರೆ.
ತಾಲೂಕಿನ ಜಗದಾಪುರ ಗ್ರಾಮದ ಕೃಷ್ಣೇಗೌಡ ಎಂಬವವರು ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮುಡಿ ನೀಡುವ ಮೂಲಕ ತಮ್ಮ ಹರಕೆ ತೀರಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರಾದ ಕೃಷ್ಣೇಗೌಡ ಕುಮಾರಸ್ವಾಮಿ ಅವರ ಕಟ್ಟಾಬೆಂಬಲಿಗ. ತೀವ್ರ ಹಣಾಹಣಿಯಿಂದ ಕೂಡಿದ್ದ ಚುನಾವಣೆಯಲ್ಲಿ ಕ್ಷೇತ್ರದಿಂದ ಕುಮಾರಸ್ವಾಮಿ ಗೆಲುವು ಸಾಧಿಸುವಂತಾಗಲಿ ಎಂದು ಶ್ರೀ ಕೆಂಗಲ್ ಆಂಜನೇಯಸ್ವಾಮಿಯ ಮೊರೆ ಹೋಗಿದ್ದ ಅವರು, ಎಚ್‌ಡಿಕೆ ಗೆದ್ದರೆ ಮುಡಿ ನೀಡುವುದಾಗಿ ಹರಕೆ ಹೊತ್ತಿದ್ದರು. ಶನಿವಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದ, ಸಿ.ಪಿ.ಯೋಗೇಶ್ವರ್ ವಿರುದ್ಧ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು.
ಇದರ ಬೆನ್ನಲ್ಲೆ ಭಾನುವಾರ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿದ ಕೃಷ್ಣೇಗೌಡ ಮುಡಿ ನೀಡುವ ಮೂಲಕ ತಮ್ಮ ಹರಕೆ ತೀರಿಸಿದ್ದಾರೆ. ಕೃಷ್ಣೇಗೌಡ ಎಚ್‌ಡಿಕೆ ಗೆಲುವಿಗಾಗಿ ಹರಕೆ ಹೊತ್ತಿದ್ದು, ಅದನ್ನು ತೀರಿಸಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದು ತಾಲೂಕಿನಲ್ಲಿ ಸಾಕಷ್ಟುವೈರಲ್ ಆಗಿದೆ.
'ಕಂಗೆಟ್ಟು ದೂರಹೋಗುವ ಜಾಯಮಾನವಲ್ಲ' ನಿಖಿಲ್ ಕುಮಾರಸ್ವಾಮಿ ಭಾವುಕ ಪೋಸ್ಟ್!