ಬಾಗಲಕೋಟೆ: ಬೀಳಗಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಸಚಿವ ಮುರುಗೇಶ್ ನಿರಾಣಿ

By Ravi JanekalFirst Published Apr 13, 2023, 2:55 PM IST
Highlights

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು.  ಇದೇ 19ರಂದು  ನಿರಾಣಿಅವರು ಮತ್ತೊಮ್ಮೆ  ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೀಳಗಿ (ಏ.13): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮರು ಆಯ್ಕೆ ಬಯಸಿ ತಮ್ಮ ತವರು ಕ್ಷೇತ್ರ ಬೀಳಗಿಯಲ್ಲಿ ಸಾಂಕೇತಿಕವಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. 

ಈ ವೇಳೆ ಬಾಗಲಕೋಟೆ ಲೋಕಸಭಾ ಸದಸ್ಯರಾದ   ಪಿ.ಸಿ.ಗದ್ದಿಗೌಡರ್(PC Gaddigowdar), ವಿಧಾನಪರಿಷತ್ ಸದಸ್ಯ ಹಣಮಂತ ನಿರಾಣಿ(Hanamanth nirani),  ಸ್ಥಳೀಯ ಮುಖಂಡರಾದ  ಈರಣ್ಣ ಗಿಡ್ಡಪ್ಪಗೋಳ, ಮಲ್ಲಿಕಾರ್ಜುನ ಅಂಗಡಿ, ಬಿ. ಜಿ. ರೇವಡಿಗಾರ, ಶಂಭೋಜಿ ಇನ್ನೂ ಅನೇಕ ಪಕ್ಷದ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Karnataka Assembly Elections 2023: ಇಂದಿನಿಂದ ನಾಮಪತ್ರ ಭರಾಟೆ..!

ತಾಲ್ಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಯಾಗಿರುವ ತಹಸೀಲ್ದಾರ್ ಅವರಿಗೆ ನಾಮಪತ್ರ ಸಲ್ಲಿಕೆ  ಮಾಡಿದರು.  ಇದೇ 19ರಂದು  ನಿರಾಣಿ(Murugesh R Nirani) ಅವರು ಮತ್ತೊಮ್ಮೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ನಿರಾಣಿ ಅವರು  ಸಿದ್ದೇಶ್ವರ  ಹಾಗೂ ಗಣೇಶ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡರು. 

ಯಾವುದೇ ಚುನಾವಣೆ ವೇಳೆ ನಿರಾಣಿ ಅವರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ  ಸಲ್ಲಿಸಿದ ಬಳಿಕವೇ ನಾಮಪತ್ರವನ್ನು ಸಲ್ಲಿಕೆ ಮಾಡುತ್ತಾರೆ. ಇದನ್ನು ಕಳೆದ ಹಲವು ವರ್ಷಗಳಿಂದ ಚಾಚು ತಪ್ಪದೆ ಮಾಡಿಕೊಂಡು ಬಂದಿದ್ದಾರೆ.

ಈಗಾಗಲೇ ಬೀಳಗಿ ಕ್ಷೇತ್ರ(Bilagi assembly constituency)ದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ನಿರಾಣಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡುತ್ತಾ ತಮಗೆ ಮತ್ತೊಮ್ಮೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಬೀಳಗಿಯಲ್ಲಿ ಬೀಡು ಬಿಟ್ಟಿರುವ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. 

ಈ ಹಿಂದೆ 2008ರಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವರಾದ ವೇಳೆ ಹಾಗೂ ಪ್ರಸ್ತುತ ಹಾಲಿ ಸರ್ಕಾರದಲ್ಲಿ ಸಚಿವರಾಗಿ ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಯೋಜನೆಗಳು, ಜನಪರ ಕಾರ್ಯಕ್ರಮಗಳನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. 

 ಕೆರೆಗಳಿಗೆ ನೀರು ತುಂಬಿಸಿರುವುದು, ದಶಕಗಳ ಕಾಲ ಬಾಕಿ ಇದ್ದ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತಂದಿರುವುದು, ಪ್ರತಿ ಗ್ರಾಮಗಳಲ್ಲೂ ಶುದ್ದ ನೀರು ಕುಡಿಯುವ ಘಟಕ,  ರಸ್ತೆಗಳ ಡಾಂಬರೀಕರಣ, ಚರಂಡಿ ನಿರ್ಮಾಣ, ವಿದ್ಯುತ್ ದೀಪ ಅಳವಡಿಕೆ, ಸರ್ಕಾರಿ ಶಾಲಾ ಕಟ್ಟಡಗಳ ನಿರ್ಮಾಣ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ಸೇರಿದಂತೆ ಅಭಿವೃದ್ಧಿ ಕಾರ್ಯಗಳೇ ಪ್ರಚಾರದ ಅಸ್ತ್ರವಾಗಿದೆ. 

ಬೆಂಗಳೂರು: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮೊದಲೇ ಗಂಗಾಂಬಿಕೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ..!

ಇನ್ನು ನಿರಾಣಿ  ಅವರು ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಯುವಕರು ಬೇರೆ ಪಕ್ಷಗಳನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಅವರ ಆತ್ಮಸ್ಥೈರ್ಯವನ್ನು ಇನ್ನಷ್ಟು ಹೆಚ್ಚಿಸಿದೆ. ಅಲ್ಲದೆ ಮಹಿಳೆಯರು, ಯುವಕರು, ಯುವತಿಯರು, ಹಿರಿಯ ನಾಗರಿಕರು ಸೇರಿದಂತೆ ಪ್ರತಿಯೊಂದು ಸಮುದಾಯದಿಂದಲೂ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿರುವುದು  ಬಿಜೆಪಿಗೆ ನೈತಿಕ ಶಕ್ತಿಯನ್ನು ಹೆಚ್ಚಿಸಿದೆ. 

ಕ್ಷೇತ್ರದ ಯಾವುದೇ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ ವೇಳೆ ಪ್ರತಿಯೊಬ್ಬರು ಮನೆ ಮಗನಂತೆ ಬರಮಾಡಿಕೊಂಡು ಆತ್ಮೀಯತೆ ತೋರುತ್ತಿರುವುದು ನಿರಾಣಿಯವರಲ್ಲಿ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. 

ಇದೇ 19ರಂದು  ನಿರಾಣಿ ಅವರು ಮತ್ತೊಮ್ಮೆ ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. *

click me!