ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಾಗಲೋಟದಲ್ಲಿರುವ ಕಾಂಗ್ರೆಸ್‌ನ ನಾಯಕರು, ಕಾರ್ಯಕರ್ತರು, ದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ವೇಳೆ ಜೈ ಭಜರಂಗ್ ಬಲಿ ಘೋಷಣೆ ಮೂಲಕ ಬಿಜೆಪಿಗೆ ಟಾಂಗ್ ನೀಡಿದರು.
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ನಾಗಲೋಟದಲ್ಲಿರುವ ಕಾಂಗ್ರೆಸ್‌ನ ನಾಯಕರು, ಕಾರ್ಯಕರ್ತರು, ದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಈ ವೇಳೆ ಜೈ ಭಜರಂಗ್ ಬಲಿ ಘೋಷಣೆ ಮೂಲಕ ಬಿಜೆಪಿಗೆ ಟಾಂಗ್ ನೀಡಿದರು. ಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ತಾನು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಘೋಷಿಸಿತ್ತು. ಈ ಹೇಳಿಕೆಗೆ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ವಿರೋಧಿ ಬಣ ಬಿಜೆಪಿ ಇದೇ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಅಬ್ಬರದ ಪ್ರಚಾರ ಮಾಡಿತ್ತು, ಎಲ್ಲೆಡೆ ಸ್ವತ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಪ್ರಚಾರದ ವೇಳೆ ಜೈ ಭಜರಂಗಿ ಬಲಿ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್‌ನ ಈ ಬಜರಂಗದಳ ನಿಷೇಧ ಘೋಷಣೆಯನ್ನು ಪ್ರಚಾರದ ವಸ್ತುವಾಗಿಸಿದ್ದರು.
ಬೆಂಗಳೂರಿನಲ್ಲಿ ನಡೆದ ರೋಡ್ ಶೋಗಳಲ್ಲಿ (Road show) ರೋಡ್ ಶೋ ವಾಹನದ ಮುಂದೆ ಭಜರಂಗಿಯ ದೊಡ್ಡ ಪ್ರತಿಮೆಯನ್ನು ಇರಿಸಿ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಟಾಂಗ್ ನೀಡುವ ಪ್ರಯತ್ನ ಮಾಡಿದ್ದರು. ಜೊತೆಗೆ ಆಂಜನೇಯನ (Bajarangi) ಮುಖವಾಡ ಧರಿಸಿ ರೋಡ್‌ಶೋದಲ್ಲಿ ಅನೇಕರು ಭಾಗಿಯಾಗಿದ್ದರು. ಆದರೆ ಚುನಾವಣೆಯಲ್ಲಿ ಇದ್ಯಾವುದು ಕೆಲಸ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದವರೆ ಅನೇಕ ಕಡೆ ಸೋಲಿನ ಅಂಚಿನಲ್ಲಿದ್ದು, ಇತ್ತ ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ದಾಪುಗಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಈಗ ಕಾಂಗ್ರೆಸ್ ನಾಯಕರು ಜೈ ಭಜರಂಗಿ ಘೋಷಣೆ ಕೂಗುವ ಮೂಲಕ ಬಿಜೆಪಿಗೆ ಟಾಂಗ್ ನೀಡುವ ಪ್ರಯತ್ನ ಮಾಡಿದ್ದಾರೆ.
ಇತ್ತ ಚುನಾವಣೆ ವೇಳೆ, ಭಜರಂಗಿಗೂ ಆಂಜನೇಯನಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ನಾಯಕರು ತಮ್ಮ ನಡೆಯನ್ನು ಸಮರ್ಥಿಸಿಕೊಂಡರೆ ಅತ್ತ ಸಿಎಂ ಆಗಿದ್ದ ಬೊಮ್ಮಾಯಿ ರಾಮನಿಗೂ ಆಂಜನೇಯನಿಗೂ ಇರುವ ಸಂಬಂಧವೇ ಆಂಜನೇಯನಿಗೂ ಭಜರಂಗಿಗೂ ಎಂದು ಹೇಳಿಕೊಂಡಿದ್ದರು. ಇದೆಲ್ಲದರ ಮಧ್ಯೆ ಬಿಜೆಪಿ ಸೋಲಿನಂಚಿಗೆ ತಲುಪಿದ್ದರೆ ಕಾಂಗ್ರೆಸ್ ಗೆಲುವಿನ ಬೆನ್ನೇರಿ ಓಡುತ್ತಿದ್ದು, ಕರ್ನಾಟಕದಲ್ಲಿ (Karnataka) ಭಜರಂಗದಳವನ್ನು ಬ್ಯಾನ್ ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಭಜರಂಗದಳ ಬ್ಯಾನ್ ಮಾಡೋಕಾಗಲ್ಲ, ಕಾಂಗ್ರೆಸ್ ಧೀಮಂತ ನಾಯಕನ ಹಿಂದೇಟು
ಇತ್ತ ದೆಹಲಿಯಲ್ಲಿ ಸಂಭ್ರಮಾಚರಣೆಯಲ್ಲಿ (celebration) ತೊಡಗಿರುವ ಕಾಂಗ್ರೆಸ್ ನಾಯಕರು ಭಜರಂಗಿ ಬಿಜೆಪಿ ಜೊತೆ ಇಲ್ಲ ಕಾಂಗ್ರೆಸ್ ಜೊತೆಯಲ್ಲಿದೆ. ಬಿಜೆಪಿಗೆ ಭಜರಂಗ ಬಲಿ ದಂಡ ವಿಧಿಸಿದ್ದಾನೆ ಎಂದು ಆಂಜನೇಯನ ವೇಷದಲ್ಲಿದ್ದ ಓರ್ವ ಕಾರ್ಯಕರ್ತ ಹೇಳು ಮೂಲಕ ಬಿಜೆಪಿ ಕಾಲೆಳೆದಿದ್ದಾರೆ. ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿಎಫ್‌ಐ ಅಥವಾ ಇತರ ಸಂಸ್ಥೆಗಳನ್ನು ಪ್ರೋತ್ಸಾಹಿಸುವುದಿಲ್ಲ ಎಂದು ನಾವು ನಂಬುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿತ್ತು. ಅಲ್ಲದೇ ಕಾಂಗ್ರೆಸ್ ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಭಜರಂಗದಳವನ್ನು ಹೋಲಿಕೆ ಮಾಡಿದ್ದಲ್ಲದೇ ಅಧಿಕಾರಕ್ಕೆ ಬಂದರೆ ಬ್ಯಾನ್ ಮಾಡುವುದಾಗಿ ಹೇಳಿತ್ತು.
ಬಜರಂಗದಳ ಬ್ಯಾನ್: ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಕಾಂಗ್ರೆಸ್ ನಾಯಕರು!
ಇದಾದ ಬಳಿಕ ಕರ್ನಾಟಕಕ್ಕೆ ಚುನಾವಣಾ ಪ್ರಚಾರಕ್ಕೆ ಬಂದ ನರೇಂದ್ರ ಮೋದಿ ಸೇರಿದ್ದ ಜನಸ್ತೋಮಕ್ಕೆ ಜೈ ಭಜರಂಗ ಬಲಿ ಘೋಷಣೆ ಕೂಗಿಸುವ ಮೂಲಕ ಕಾಂಗ್ರೆಸ್‌ಗೆ ಟಾಂಗ್ ನೀಡುವ ಪ್ರಯತ್ನ ಮಾಡಿದ್ದರು.