Karnataka assembly election: ರಾಜ್ಯದಲ್ಲಿ ಕಾಂಗ್ರೆಸ್‌ ಸಿಎಂ ನಿಶ್ಚಿತ: ಸತೀಶ್ ಜಾರಕಿಹೊಳಿ

Published : May 13, 2023, 02:44 AM IST
Karnataka assembly election: ರಾಜ್ಯದಲ್ಲಿ ಕಾಂಗ್ರೆಸ್‌ ಸಿಎಂ ನಿಶ್ಚಿತ: ಸತೀಶ್ ಜಾರಕಿಹೊಳಿ

ಸಾರಾಂಶ

ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ನೂರಕ್ಕೆ ನೂರರಷ್ಟುಬರುವುದಿಲ್ಲ. ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 120ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಈ ಬಾರಿ ಕಾಂಗ್ರೆಸ್‌ ಸರ್ಕಾರ ರಚಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ಬೆಳಗಾವಿ (ಮೇ.13) : ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ನೂರಕ್ಕೆ ನೂರರಷ್ಟುಬರುವುದಿಲ್ಲ. ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 120ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದು, ಈ ಬಾರಿ ಕಾಂಗ್ರೆಸ್‌ ಸರ್ಕಾರ ರಚಿಸುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಾರಾಗುತ್ತಾರೆ? ಎನ್ನುವುದಕ್ಕಿಂತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರುವುದು ಮುಖ್ಯವಿದೆ. ಬಹುಮತ ಸಿಕ್ಕ ನಂತರ ಎಲ್ಲ ಶಾಸಕರು ಸೇರಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದರು.

Karnataka assembly election: ಪಕ್ಷೇತರರ ಸೆಳೆಯಲು ಡಿಕೆಶಿ, ಸಿದ್ದರಾಮಯ್ಯ, ಸಿಎಂ ಯತ್ನ...

ಗೌಡರ ಸಲಹೆ ಬೇಕು?: ಮೈತ್ರಿಗೆ ನಾವು ಸಿದ್ಧ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಸರ್ಕಾರ ಆಡಳಿತಕ್ಕೆ ಬರುವ ದೃಷ್ಟಿಯಿಂದ ಈ ಹೇಳಿಕೆ ನೀಡಿದ್ದರೆ ಒಳ್ಳೆಯದು. ದೇವೇಗೌಡರದ್ದು, ಕುಮಾರಸ್ವಾಮಿ ಸಲಹೆ ಇದ್ದರೆ ಒಳ್ಳೆಯದು ಎಂದು ಹೇಳಿದ ಅವರು ಕಡೆಗೆ ಮೈತ್ರಿಗೂ ಮುಕ್ತ ಎಂಬ ಸುಳುಹು ಬಿಚ್ಚಿಟ್ಟರು.

ಅಶೋಕ್‌ ಪ್ಲಾನ್‌ ಫಲಿಸದು: ಕಡಿಮೆ ಕ್ಷೇತ್ರದಲ್ಲಿ ಗೆದ್ದರೂ ಸರ್ಕಾರ ರಚನೆ ಮಾಡುತ್ತೇವೆ ಎಂಬ ಆರ್‌.ಅಶೋಕ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ 75ರಿಂದ 80 ಕ್ಷೇತ್ರ ಮಾತ್ರ ಗೆಲ್ಲುತ್ತದೆ. ಅವರಿಗೆ ಸರ್ಕಾರ ಮಾಡಲು 30 ರಿಂದ 40 ಸೀಟ್‌ ಬೇಕಾಗುತ್ತದೆ. ಇನ್ನು, ಬಿಜೆಪಿ ಆಪರೇಷನ್‌ ಕಮಲ ಮಾಡುವುದು ಅವರ ಹಗಲುಗನಸಾಗಿದೆ. ಸುಮ್ಮನೆ ವಿಪಕ್ಷದಲ್ಲಿ ಕುಳಿತು ಒಳ್ಳೆಯ ಸಲಹೆ ನೀಡುವುದು ಸೂಕ್ತ ಎಂದು ವ್ಯಂಗ್ಯವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ
ಸಿಎಂ, ಡಿಸಿಎಂ, ಸಚಿವರ ದಂಡು ನಾಳೆ ದೆಹಲಿಗೆ