
ಹುಬ್ಬಳ್ಳಿ(ಏ.15): ಕರ್ನಾಟಕ ವಿಧಾಸಭಾ ಚುನಾವಣೆ ಬಿಜೆಪಿ ಸವಾಲಾಗಿ ಪರಿಣಮಿಸಿದೆ. ಟಿಕೆಟ್ ಹಂಚಿಕೆಯಲ್ಲಿ ಹಲವು ಪ್ರಯೋಗ ಮಾಡಿರುವ ಬಿಜೆಪಿ ಹೊಸ ಮುಖಗಳಿಗೆ ಅವಕಾಶ ನೀಡಿದೆ. ಇದು ಹಿರಿಯ ನಾಯಕರನ್ನು ಕೆರಳಿಸಿದೆ. ಟಿಕೆಟ್ ವಂಚಿತ ನಾಯಕರು ಇದೀಗ ಒಬ್ಬೊಬ್ಬರಾಗಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಾರೆ. ಟಿಕೆಟ್‌ಗಾಗಿ ಕಾಯುತ್ತಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ದೆಹಲಿ ಹೈಕಮಾಂಡ್‌ನಿಂದ ಸಂದೇಶಕ್ಕಾಗಿ ಕಾಯುತ್ತಿದ್ದೇನೆ. ಇಂದು ಯಾವುದೇ ಸಂದೇಶ ಬರದಿದ್ದರೆ, ಇಂದೇ ಬಿಜೆಪಿಗೆ ಗುಡ್ ಬೈ ಹೇಳುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ತಮ್ಮ ಹುಬ್ಬಳ್ಳಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. ಹೈಕಮಾಂಡ್ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇನೆ. ಇಂದು ರಾತ್ರಿಯೊಳಗೆ ಟಿಕೆಟ್ ವಿಚಾರದಲ್ಲಿ ಸ್ಪಷ್ಟತೆ ಬರದಿದ್ದರೆ, ಇಂದೇ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ. ನನ್ನ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ. ಸ್ಪರ್ಧಿಸುವುದಾದರೆ ನಾನೇ ಸ್ಪರ್ಧಿಸುತ್ತೇನೆ. ನನಗೆ ಟಿಕೆಟ್ ಕೊಡಿ. ಇಲ್ಲದಿದ್ದರೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.
ಪ್ರಧಾನಿ ಮೋದಿ ಕೈಕುಲುಕಿದ್ದ ರೌಡಿಶೀಟರ್ ಫೈಟರ್ ರವಿ ಬಿಜೆಪಿಗೆ ರಾಜೀನಾಮೆ!
ಬೆಳಗಾವಿಗೆ ಆಗಮಿಸಿರುವ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ರಾತ್ರಿ 8.30ರ ಸುಮಾರಿಗೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈಗಾಗಲೇ ಶೆಟ್ಟರ್‌ಗೆ ಪ್ರಧಾನ್ ಸಂದೇಶವೊಂದನ್ನು ರವಾನಿಸಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿ ಚರ್ಚಿಸುವುದಾಗಿ ಹೇಳಿದ್ದಾರೆ. ಅಲ್ಲಿವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದಾರೆ. ಹೀಗಾಗಿ ಇಂದು ರಾತ್ರಿ 8.30ರ ವರೆಗೆ ಕಾಯುತ್ತೇನೆ. ಬಳಿಕ ಹೈಕಮಾಂಡ್‌ನಿಂದ ಟಿಕೆಟ್ ವಿಚಾರ ಯಾವುದೇ ಸ್ಪಷ್ಟತೆ ಸಿಗದಿದ್ದರೆ, ನನ್ನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶೆಟ್ಟರ್ ಹೇಳಿದ್ದಾರೆ.
ಕಾಂಗ್ರೆಸ್ ಅಥವಾ ಇತರ ಪಕ್ಷಗಳಿಂದ ಯಾವುದೇ ಆಫರ್ ಬಂದಿಲ್ಲ. ನನ್ನ ಜೊತೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಟಿಕೆಟ್ ವಿಚಾರದಲ್ಲಿ ಸ್ಪಷ್ಟತೆ ನೀಡಿದ ಬಳಿಕ ಹಿತೈಷಿಗಳು, ಹಿರಿಯರ ಜೊತೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇನೆ. ಆದರೆ ಈ ಪ್ರಹಸನಕ್ಕೆ ಇಂದೇ ಅಂತ್ಯಹಾಡಲಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ರಾತ್ರಿ 8.30ರ ಬಳಿಕ ಧರ್ಮೇಂದ್ರ ಪ್ರಧಾನ್ ಜೊತೆ ಚರ್ಚೆ ನಡೆಸುತ್ತೇನೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಮಾತನಾಡಿದ್ದಾರೆ. ಯಾವುದೇ ನಿರ್ಧಾರ ಪ್ರಕಟಿಸಬೇಡಿ ಎಂದು ಸೂಚಿಸಿದ್ದಾರೆ. ಹೀಗಾಗಿ ಅವರ ಜೊತೆ ಚರ್ಚಿಸುತ್ತೇನೆ. ಟಿಕೆಟ್ ಸಿಗದಿದ್ದರೆ ಇಂದು ರಾತ್ರಿ ನನ್ನ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ.
ಸೈಲೆಂಟ್ ಸುನೀಲ ನಮ್ಮ ಪಕ್ಷದವನೇ ಅಲ್ಲ: ನಳೀನ್ ಕುಮಾರ್ ಕಟೀಲ್!
ನನ್ನ ಕ್ಷೇತ್ರದಲ್ಲಿ ಬಿಜೆಪಿ ಸಂಘನೆ ಘಟ್ಟಿಯಾಗಿದೆ. ನೂರಕ್ಕೆ ನೂರು ಗೆಲ್ಲುತ್ತೇನೆ. ಕುಟುಂಬದಲ್ಲಿ ಇತರ ಯಾರೂ ಸ್ಪರ್ಧಿಸುವುದಿಲ್ಲ. ಇದು ನನ್ನ ಸ್ಪಷ್ಟ ನಿಲುವು. ನನಗೆ ಟಿಕೆಟ್ ನಿರಾಕರಿಸಲು ಕಾರಣವೇನು? ಯಾವ ವಿಚಾರ ಟಿಕೆಟ್ ನೀಡಲು ಅಡ್ಡಿಯಾಗುತ್ತಿದೆ ಎಂದು ಕೇಳಿದ್ದೇನೆ. ಇದಕ್ಕೆ ಉತ್ತರ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.