Ticket fight: ಕಮಲ ಪಾಳಯದಲ್ಲಿ ತಾರಕಕ್ಕೇರಿದ ಬಣ ರಾಜಕೀಯ!

By Kannadaprabha News  |  First Published Mar 11, 2023, 3:50 PM IST

ಬೆಳಗಾವಿ ಜಿಲ್ಲೆಯಲ್ಲಿ ಕಮಲ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ. ಬಿಜೆಪಿಗೆ ಇಲ್ಲಿ ಬಿಜೆಪಿಯೇ ಟಾರ್ಗೆಟ್‌ ಆಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇರೆ ಕ್ಷೇತ್ರದಲ್ಲಿ ಹಸ್ತಕ್ಷೇಪಕ್ಕೆ ಸ್ವಪಕ್ಷೀಯರಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ.


ಶ್ರೀಶೈಲ ಮಠದ

 ಬೆಳಗಾವಿ (ಮಾ.11) : ಬೆಳಗಾವಿ ಜಿಲ್ಲೆಯಲ್ಲಿ ಕಮಲ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ. ಬಿಜೆಪಿಗೆ ಇಲ್ಲಿ ಬಿಜೆಪಿಯೇ ಟಾರ್ಗೆಟ್‌ ಆಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇರೆ ಕ್ಷೇತ್ರದಲ್ಲಿ ಹಸ್ತಕ್ಷೇಪಕ್ಕೆ ಸ್ವಪಕ್ಷೀಯರಲ್ಲೇ ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ.

Tap to resize

Latest Videos

ಬಿಜೆಪಿಯಲ್ಲಿ ಮೂಲ ಹಾಗೂ ವಲಸಿಗರ ನಡುವೆ ರಾಜಕೀಯ ಗುದ್ದಾಟ ನಡೆಯುತ್ತಿದೆ. ವಿಶೇಷವಾಗಿ ಅಥಣಿ ವಿಧಾನಸಭೆ ಕ್ಷೇತ್ರ(Athani assembly constituency)ದ ವಿಚಾರದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Lakshman savadi) ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ(Ramesh jarkiholi) ನಡುವಿನ ರಾಜಕೀಯ ಭಿನ್ನಾಭಿಪ್ರಾಯ ಬಣ ರಾಜಕೀಯಕ್ಕೆ ಪುಷ್ಪಿ ನೀಡುತ್ತಿದೆ. ಅಥಣಿ ಸೇರಿದಂತೆ ಬೇರೆ ಕ್ಷೇತ್ರಗಳಲ್ಲಿ ರಮೇಶಜಾರಕಿಹೊಳಿ ಹಸ್ತಕ್ಷೇಪ ಮಾಡುತ್ತಿರುವುದು ಸಹಜವಾಗಿಯೇ ಅವರದ್ದೇ ಪಕ್ಷದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಸವದಿ ವರ್ಸೆಸ್‌ ಜಾರಕಿಹೊಳಿ ಎನ್ನುವಂತಾಗಿದೆ.

Karnataka election 2023: ಧಾರವಾಡ ಜಿಲ್ಲೆಯಲ್ಲಿ ಮಹಿಳಾ ಶಾಸಕರಾಗಿದ್ದು ಬರೀ ಮೂವರು!

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಪರೇಷನ್‌ ಕಮಲಕ್ಕೆ ಒಳಗಾದ ಮಹೇಶ ಕುಮಟಳ್ಳಿ(Mahesh kumatahalli) ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದುಬಂದರು. ಕುಮಟಳ್ಳಿ ಅವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗ. ಮುಂಬರುವ ವಿಧಾನಸಭೆ ಚುನಾವಣೆ(Assembly election)ಯಲ್ಲಿ ತಮ್ಮ ಆಪ್ತ ಕುಮಟಳ್ಳಿ ಅವರನ್ನು ಗೆಲ್ಲಿಸಲು ರಮೇಶ ಜಾರಕಿಹೊಳಿ ಅಥಣಿ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಅಲ್ಲದೇ, ಮಹೇಶ ಕುಮಟಳ್ಳಿ ಅವರೇ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ರಮೇಶ ಘೋಷಣೆ ಮಾಡಿರುವುದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾಗಿ, ರಮೇಶ ಜಾರಕಿಹೊಳಿ ಬೇರೆ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಪರೋಕ್ಷವಾಗಿ ವಿರೋಧಿಸಿರುವ ಲಕ್ಷ್ಮಣ ಸವದಿ ಅವರು, ಕೇಂದ್ರ ಗೃಹ ಸಚಿವ ಅಮಿತ ಶಾ(Amit shah) ಅವರು ಒಂದು ಕ್ಷೇತ್ರದಲ್ಲಿ ಇನ್ನೊಬ್ಬರು ಹಸ್ತಕ್ಷೇಪ ಮಾಡಬಾರದೆಂದು ಮಾರ್ಗದರ್ಶನ ಮಾಡಿದ್ದಾರೆ. ನಾವು ಅವರ ಮಾರ್ಗದರ್ಶನದಲ್ಲೇ ನಡೆಯುತ್ತೇವೆ ಎಂದು ತೀಕ್ಷ$್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕ್ಷೇತ್ರದ ಜನರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡಹೇರುತ್ತಿದ್ದಾರೆ. ಪಕ್ಷ ಟಿಕೆಟ್‌ ನೀಡದರೆ ಸ್ಪರ್ಧಿಸುವುದಾಗಿ ಸವದಿ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ, ರಮೇಶ ಜಾರಕಿಹೊಳಿ ಇದಕ್ಕೆ ಸುತುರಾಂ ಒಪ್ಪುತ್ತಿಲ್ಲ. ತಮ್ಮ ಆಪ್ತ ಮಹೇಶ ಕುಮಟಳ್ಳಿಗೆ ಈ ಬಾರಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ (BJP Ticket)ನೀಡಲೇಬೇಕು. ಇಲ್ಲದಿದ್ದರೆ ನಾನು ಕೂಡ ಗೋಕಾಕ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ದಿಸುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ಅಥಣಿ, ನಿಪ್ಪಾಣಿ, ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ರಮೇಶ ಜಾರಕಿಹೊಳಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಸಹಜವಾಗಿಯೇ ಸ್ವಪಕ್ಷದ ನಾಯಕರಲ್ಲೇ ಅಸಮಾಧಾನ ಮೂಡಿಸಿದೆ. ರಮೇಶ ಜಾರಕಿಹೊಳಿ ವಿರುದ್ಧ ಸಾಲು ಸಾಲಾಗಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ, ಇದಾದ ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ರಮೇಶ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ. ಈ ರಾಜಕೀಯ ಬೆಳವಣಿಗೆ ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದಕ್ಕೆ ನಿದರ್ಶನ. ರಮೇಶ ಜಾರಕಿಹೊಳಿ ತಾವೇ ಪಕ್ಷದ ಹೈಕಮಾಂಡ್‌ ಎನ್ನುಕೊಂಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇಲ್ಲಿ ಬಿಜೆಪಿಗರನ್ನು ಬಿಜೆಪಿಗರೇ ಟಾರ್ಗೆಟ್‌ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಅಭ್ಯರ್ಥಿ ಘೋಷಣೆ ಮಾಡುತ್ತಿರುವ ನಾಯಕರು

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್‌ ಇನ್ನು ಬಿಡುಗಡೆ ಮಾಡಿಲ್ಲ. ಆದರೆ, ಜಿಲ್ಲೆಯ ನಾಯಕರು ಮಾತ್ರ ತಮ್ಮ ಬೆಂಬಲಿಗರನ್ನೇ ಬಿಜೆಪಿ ಅಭ್ಯರ್ಥಿ ಎಂದು ಬಹಿರಂಗಸಭೆಗಳಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಿಪ್ಪಾಣಿ ಕ್ಷೇತ್ರದಲ್ಲಿ ಶಶಿಕಲಾ ಜೊಲ್ಲೆ ಬಿಜೆಪಿ ಅಭ್ಯರ್ಥಿಯೆಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಘೋಷಿಸಿದ್ದರೆ, ಅಥಣಿ ಕ್ಷೇತ್ರದಲ್ಲಿ ಮಹೇಶ ಕುಮಟಳ್ಳಿ ಅವರೇ ಬಿಜೆಪಿ ಅಭ್ಯರ್ಥಿಯೆಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಘೋಷಿಸಿದ್ದಾರೆ.ಇದು ಪಕ್ಷದ ಕಾರ್ಯಕರ್ತರಲ್ಲೇ ಗೊಂದಲ ಮೂಡಿಸುವಂತೆ ಮಾಡಿದೆ.

ಸರ್ಕಾರದ ಸಾಧನೆಯೇ ಬಿಜೆಪಿಗೆ ಶ್ರೀರಕ್ಷೆ: ಲಕ್ಷ್ಮಣ ಸವದಿ

ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೊಲ್ಲೆ ದಂಪತಿ ಪಣ ತೊಟ್ಟಿದ್ದಾರೆ. ಹಾಗಾಗಿ, ಜೊಲ್ಲೆ ದಂಪತಿ ಕಟ್ಟಿಹಾಕಲು ತಮ್ಮ ಆಪ್ತ ಉತ್ತಮ ಪಾಟೀಲ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ನಿಪ್ಪಾಣಿ ಕ್ಷೇತ್ರದಿಂದ ಕಣಕ್ಕಿಳಿಸಲು ರಮೇಶ ಜಾರಕಿಹೊಳಿ ತಯಾರಿ ನಡೆಸಿದ್ದಾರೆ. ಜಾರಕಿಹೊಳಿ ನಡೆ ಜೊಲ್ಲೆ ದಂಪತಿಯನ್ನು ಕೆರಳಿಸುವಂತೆ ಮಾಡಿದೆ. ಬಿಜೆಪಿಗೆ ಬಿಜೆಪಿಯೇ ಶತ್ರು ಎನ್ನುವಂತಾಗಿದೆ. ನಮಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ರಮೇಶ ಜಾರಕಿಹೊಳಿಗೆ ಅವರಿಗೆ ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದರು.

click me!