ಕಾರ್ಯಕರ್ತರ ಸ್ಫೂರ್ತಿ, ದೇವರ ಅನುಗ್ರಹದಿಂದ ಕಾಂಗ್ರೆಸ್‌ ಗೆ 141ಸ್ಥಾನಗಳಲ್ಲಿ ಗೆಲುವು

By Gowthami K  |  First Published Apr 23, 2023, 10:18 PM IST

ಕಾರ್ಯಕರ್ತರ ಸ್ಫೂರ್ತಿ, ದೇವರ ಅನುಗ್ರಹದಿಂದ ಕಾಂಗ್ರೆಸ್‌ಗೆ ಹೊಸಶಕ್ತಿ ಬಂದಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 141ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


ಚಿಕ್ಕಮಗಳೂರು (ಏ.23): ಕಾರ್ಯಕರ್ತರ ಸ್ಫೂರ್ತಿ, ದೇವರ ಅನುಗ್ರಹದಿಂದ ಕಾಂಗ್ರೆಸ್‌ಗೆ ಹೊಸಶಕ್ತಿ ಬಂದಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 141ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬ ದೇವಸ್ಥಾನದಲ್ಲಿ ಇಂದು ಚಂಡಿಕಾಯಾಗ, ಪೂರ್ಣಾಹುತಿ ಹೋಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಬಿ.ಎಸ್.ಯಡಿಯೂರಪ್ಪ ಅವರನ್ನು ಉಪಯೋಗಿ ಸಿಕೊಂಡು ನಂತರ ಅಧಿಕಾರದಿಂದ ತೆಗೆದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ವೇಳೆ ಯಡಿಯೂರಪ್ಪ ಅವರು ಕಣ್ಣೀರು ಹಾಕಿಕೊಂಡು ಕೆಳಗಿಳಿಸಿದರು ಎಂದರು.

ವರುಣ ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗುವೆ: 
ವರುಣ ಕ್ಷೇತ್ರಕ್ಕೂ ಪ್ರಚಾರಕ್ಕೆ ಹೋಗುತ್ತೇವೆ. ಸಮಯ ನಿಗಧಿಯಾಗಿಲ್ಲ, ವರುಣಾ ಮಾತ್ರವಲ್ಲ, ಯಾರೇ ಎಲ್ಲಿಗೆ ಕರೆದರೂ ಪ್ರಚಾರಕ್ಕೆ ಹೋಗುತ್ತೇನೆ. ಬಿಜೆಪಿ ಸರಕಾರದ ಹಗರಣಗಳ ಬಗ್ಗೆ ಶಾಸಕರು ಮತ್ತು ಮಂತ್ರಿಗಳು ಸಾಕ್ಷಿ ಬಿಟ್ಟು ಹೋಗಿದ್ದಾರೆ. ಅವುಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತವೇ ಎಂದ ಅವರು, ಶೃಂಗೇರಿ ಶಾರದಾ ಪೀಠದಲ್ಲಿ ಚಂಡಿಕಾಯಾಗ ನಡೆಸಿದ್ದು, ಮನಸ್ಸಿನ ಶಾಂತಿ, ನೆಮ್ಮದಿ ಹಾಗೂ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಜನಸೇವೆಗೆ ಅವಕಾಶ ಮಾಡಿಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು.

Tap to resize

Latest Videos

undefined

ರಾಜ್ಯದಲ್ಲಿ ಖರ್ಗೆ, ರಾಹುಲ್‌ಗಾಂಧಿ, ಸಿದ್ದರಾಮಯ್ಯ, ಪ್ರಿಯಾಂಕಗಾಂಧಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ. ಎಲ್ಲಾ ಕಡೆ ದೇವರ ಆಶೀರ್ವಾದ ಪಡೆದಿದ್ದೇನೆ. ದೇವರ ಆಶೀರ್ವಾದದೊಂದಿಗೆ ದೇವರ ಸನ್ನಿಧಿಯಿಂದಲೇ ಪ್ರಚಾರ ಕೂಡ ಆರಂಭಿಸುತ್ತೇನೆ ಎಂದು ಹೇಳಿದರು.

ಕನಕಪುರದಲ್ಲಿ ಆರ್. ಅಶೋಕ್ ಕೆಲ ನಿಮಿಷದ ಮತ ಪ್ರಚಾರದ ಬಗ್ಗೆ ಉಡುಪಿಯಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕನಕಪುರದ ಬಿಜೆಪಿ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಕನಕಪುರದಲ್ಲಿ ಎಷ್ಟು ಬೇಕಾದ್ರು ಪ್ರಚಾರ ಮಾಡಲಿ ಅವರಿಗೆ ದೊಡ್ಡ ಅವಕಾಶ ಇದೆ. ಯಾರ ಮನವನ್ನು ಬೇಕಾದರೂ ಒಲಿಸಲಿ. ಮತದಾರರ ಬಳಿ ಏನು ಬೇಕಾದರೂ ಕೇಳಿಕೊಳ್ಳಲಿ. ಅಶೋಕ್ ಗೆ ಯಾವುದೇ ಅಡಚಣೆ ಮಾಡಲ್ಲ ನಾವು ಅಡ್ಡ ಬರಲ್ಲ. ಕಾಂಗ್ರೆಸ್ ಕಾರ್ಯಕರ್ತರು ಯಾರು ಮಾತನಾಡಬಾರದು ಗೌರವದಿಂದ ನಡೆದುಕೊಳ್ಳಬೇಕು ಎಂದು ಕನಕಪುರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಡಿಕೆ ಶಿವಕುಮಾರ್ ಮನವಿ ಮಾಡಿಕೊಂಡರು.

ಡಿಕೆ ಶಿವಕುಮಾರ್ ಭಯದಿಂದ ಟೆಂಪಲ್ ರನ್ ಮಾಡುತ್ತಿದ್ದಾರೆ ಆರ್ ಅಶೋಕ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಕೆಶಿ,  ಟೆಂಪಲ್ ರನ್ ಮಾಡುತ್ತಿಲ್ಲ ಪ್ರಚಾರ ಮಾಡುತ್ತಿದ್ದೇನೆ. ನಮ್ಮ ಧರ್ಮ ನಮ್ಮ ಸಂಸ್ಕೃತಿ ನಮ್ಮ ದೇವರ ಬಗ್ಗೆ ನನಗೆ ನಂಬಿಕೆ ಇದೆ. ನಾನು ಹೋದ ಕ್ಷೇತ್ರದ ಎಲ್ಲಾ ದೇವಸ್ಥಾನಗಳಿಗೂ ಭೇಟಿ ಕೊಡುತ್ತಿದ್ದೇನೆ ಪ್ರಾರ್ಥನೆ ಮಾಡುತ್ತಿದ್ದೇನೆ.

ಬಿಜೆಪಿಯಲ್ಲಿ‌ ಲಿಂಗಾಯತರ ಕಡೆಗಣನೆ, ಹುಬ್ಬಳ್ಳಿಯಲ್ಲಿ ರಾಹುಲ್ - ಶೆಟ್ಟರ್ ಸುದೀರ್ಘ

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ಉಪ್ಪಿನಕಾಯಿ ಹಾಕಲು ಎಂದು ಹೇಳಿದ  ಸಿಎಂ ಬಸವರಾಜ್ ಬೊಮ್ಮಾಯಿಗೆ  ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದು,  ಬಿಜೆಪಿ ರಾಜ್ಯಾದ್ಯಂತ ಜಾಹೀರಾತನ್ನು ಕೊಟ್ಟಿದೆ ಯಾಕೆ ಕೊಟ್ರೀ? ಮಹಿಳೆಯರಿಗೆ 2-3 ಸಾವಿರ ಹಣ ಕೊಡುವ ಭರವಸೆ ಕೊಟ್ಟಿದ್ದಾರೆ. ಬಜೆಟ್ನಲ್ಲಿ 1000 ಕೊಡುವುದಾಗಿ ಘೋಷಣೆ ಮಾಡಿದ್ದಾರೆ ಯಾಕೆ ಮಾಡಿದ್ರು? ಪ್ರಣಾಳಿಕೆಯಲ್ಲಿ ಏಳರಿಂದ ಹತ್ತು ಗಂಟೆಗೆ ಕರೆಂಟ್ ಕೊಡುತ್ತೇವೆ ಎಂದಿದ್ದಾರೆ ಯಾಕೆ ಕೊಟ್ಟಿದ್ದಾರೆ? ರೈತರ ಆದಾಯ ಡಬಲ್ ಮಾಡುತ್ತೇವೆ ಎಂದಿದ್ದಾರೆ ಅದು ಯಾವ ಕಾರ್ಡು? ಕಾಂಗ್ರೆಸ್ ನಲ್ಲಿ ಬದ್ಧತೆ ಇದೆ ಮೊದಲ ಕ್ಯಾಬಿನೆಟ್ ನಲ್ಲಿ ಹೇಳಿದ್ದನ್ನು ಅನುಷ್ಠಾನಕ್ಕೆ ತರುತ್ತೇವೆ ನಾವು ಅನುಷ್ಠಾನ ಮಾಡದಿದ್ದರೆ ಮುಂದೆ ನಾವು ಮತ ಕೇಳೋದಿಲ್ಲ ಎಂದಿದ್ದಾರೆ.

Karnataka Election: ಹಿರೇಕೆರೂರು ಕ್ಷೇತ್ರದ ಗಲ್ಲಿ ಗಲ್ಲಿಯಲ್ಲಿ ಬಿ ಸಿ ಪಾಟೀಲ್‌ ಅಬ್ಬರದ ಪ್ರಚಾರ

ಮೈಸೂರಿನಲ್ಲಿ ಸೋಮಣ್ಣ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದರ ಬಗ್ಗೆ ಮಾತನಾಡಿದ ಅವರು , ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮತಯಾಚನೆ ಮಾಡುವ ಹಕ್ಕಿದೆ. ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಹೋಗಬಾರದು. ಯಾರು ಎಲ್ಲಿ ಬೇಕಾದರೂ ಪ್ರಚಾರ ಮಾಡಬಹುದು. ಮೈಸೂರು ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಸೂಚನೆ ನೀಡಿದ್ದಾರೆ.

click me!