Karnataka Assembly Elections 2023: ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿಯಿಂದ ವೋಟಿಂಗ್‌!

Published : Mar 31, 2023, 10:52 AM IST
Karnataka Assembly Elections 2023: ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿಯಿಂದ ವೋಟಿಂಗ್‌!

ಸಾರಾಂಶ

ರಾಜ್ಯದಲ್ಲಿ ಮುಂದಿನ ವಿಧಾನಸಭೆಗೆ ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿಯಿಂದ ವೋಟಿಂಗ್‌ ಪ್ರಕ್ರಿಯೆ ಆರಂಭವಾಗಿದೆ. ಬೆಂಗಳೂರಿನ ಮೂರು ಕಡೆಗಳಲ್ಲಿ ಮತದಾನ ಕೇಂದ್ರವನ್ನೂ ತೆರೆಯಲಾಗಿದೆ.

ಬೆಂಗಳೂರು (ಮಾ.31): ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಗ ಯಾರನ್ನು ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಬೇಕು ಎನ್ನುವ ವಿಚಾರದಲ್ಲಿ ಬಿಜೆಪಿ ಆಂತರಿಕ ಮತದಾನ ನಡೆಸುತ್ತಿದೆ. ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆಗಾಗಿ ವೋಟಿಂಗ್ ನಡೆಯುತ್ತಿದೆ. ಬೆಂಗಳೂರಲ್ಲಿ ವೋಟಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಬೆಳಿಗ್ಗೆ 9ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಸಂಜೆ 5 ರ ವರೆಗೂ ಮತದಾನ-ಅಭಿಪ್ರಾಯ ಸಂಗ್ರಹ ನಡೆಯಲಿದೆ. ಆಯಾ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ರಾಷ್ಟ್ರೀಯ ಪದಾಧಿಕಾರಿಗಳು ಇದರಲ್ಲಿ ಮತದಾನ ಮಾಡಲಿದ್ದಾರೆ. ಬೆಂಗಳೂರಿನ ಮೂರು ಕಡೆಗಳಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ. ಪ್ಯಾಲೇಸ್‌ ಗ್ರೌಂಡ್‌ನಲ್ಲಿ 9 ಕ್ಷೇತ್ರ, ಸೌತ್‌ ಆಂಡ್‌ ಸರ್ಕಲ್‌ನಲ್ಲಿ 10 ಕ್ಷೇತ್ರ ಹಾಗೂ ಬ್ಯಾಟರಾಯನಪುರದಲ್ಲಿ 9 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಮತದಾನ ನಡೆಸುತ್ತಿದೆ. ರಾಜ್ಯದಾದ್ಯಂತ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಧಾದಿಕಾರಿಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನಡೆಯಲಿದೆ ಅಭಿಪ್ರಾಯ ಸಂಗ್ರಹ ಕಾರ್ಯ ನಡೆಯಲಿದೆ. ಅತಿ ಹೆಚ್ಚು ಕ್ಷೇತ್ರ ಹೊಂದಿರುವ ಬೆಂಗಳೂರಿನಲ್ಲಿ 3 ಕಡೆ  ಕೇಂದ್ರ ಸ್ಥಾಪನೆ ಮಾಡಲಾಗಿದೆ. ಬೆಳಗಾವಿಯಲ್ಲಿ 2 ಕೇಂದ್ರ, ಇತರೆ ಜಿಲ್ಲೆಯಲ್ಲಿ 1 ಕೇಂದ್ರ ಸ್ಥಾಪನೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಅಭಿಪ್ರಾಯ ಸಂಗ್ರಹ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಓಟಿಂಗ್‌: ಇಂದು 224 ಕ್ಷೇತ್ರಗಳಲ್ಲಿ ಮತದಾನ

ಪದಾಧಿಕಾರಿಗಳು ಮೂವರು ಅಭ್ಯರ್ಥಿಗಳ ಹೆಸರನ್ನ ಬರೆದು ಮತಪೆಟ್ಟಿಗೆಯಲ್ಲಿ ಹಾಕಲಾಗುತ್ತೆ. ಈ ಕಾರ್ಯನಿರ್ವಹಣೆ ಮೇಲ್ವಿಚಾರಣೆಗೆ ವೀಕ್ಷಕರ ನೇಮಕ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹ ಮುಗಿದ ಬಳಿಕ, ಅದನ್ನ ವೀಕ್ಷಕರು ರಾಜ್ಯ ಘಟಕಕ್ಕೆ ಸಲ್ಲಿಸಲಿದ್ದು, ಅಭ್ಯರ್ಥಿಯನ್ನು ಅಂತಿಮ ಮಾಡಲಾಗುತ್ತದೆ. ಇದರ ಆಧಾರದ ಮೇಲೆ ಏಪ್ರಿಲ್ 1 ಅಥವಾ 3 ರಂದು ರಾಜ್ಯ ಪಧಾದಿಕಾರಿಗಳ ಸಭೆ ನಡೆಯಲಿದ್ದು. ಸಭೆ ಬಳಿಕ ಈ ಅಭಿಪ್ರಾಯವನ್ನ ಕೇಂದ್ರ ಸಂಸದೀಯ ಮಂಡಳಿಗೆ ರವಾನಿಸಲಾಗುತ್ತೆ ಎಂದ ಮಾಹಿತಿ ನೀಡಿದ್ದಾರೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಶಾಸಕ ಕುಮಾರಸ್ವಾಮಿ ವಿರುದ್ಧ ದೂರು

ಪ್ರತಿ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಜವಾಬ್ದಾರಿ ಹೊತ್ತಿರುವ 100 - 120 ಪದಾಧಿಕಾರಿಗಳು ಅಭ್ಯರ್ಥಿ ಆಯ್ಕೆ ಸಂಬಂಧ ಮತದಾನ ನಡೆಯಲಿದೆ. ಒಟ್ಟು ಇಡಿ ರಾಜ್ಯದಿಂದ 20 ಸಾವಿರ ಪದಾಧಿಕಾರಿಗಳು ಇಂದಿನ ಮತದಾನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಗಾಂಧಿ ನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿ ಆಯ್ಕೆ ಸಂಬಂಧ ನಡೆದ ಮತದಾನ ಪ್ರಕ್ರಿಯೆ ಈಗಾಗಲೇ ಮುಕ್ತಾಯವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಬೃಹತ್‌ ಪ್ರತಿಭಟನೆ
ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!