
ಬೆಂಗಳೂರು: ದೇಶದ ಗಮನ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾರಕರಾಗಿ ಅಬ್ಬರದ ಪ್ರಚಾರ ನಡೆಸಿದ್ದ 19 ಜಿಲ್ಲೆಗಳ ಪೈಕಿ ಪಕ್ಷದ ಅಭ್ಯರ್ಥಿಗಳು ನಿರೀಕ್ಷಿತ ಪ್ರಮಾಣದಲ್ಲಿ ಗೆಲುವು ಸಾಧಿಸುವಲ್ಲಿ ಸಫಲರಾಗಿಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು ಏಳು ದಿನಗಳ ಕಾಲ 19 ಜಿಲ್ಲೆಗಳಲ್ಲಿ 19 ಸಾರ್ವಜನಿಕ ಸಮಾವೇಶ ಹಾಗೂ ಆರು ರೋಡ್ ಶೋ ನಡೆಸಿದ್ದರು. ಬೆಂಗಳೂರು, ಮೈಸೂರು (Mysore), ಕಲಬುರಗಿ, ಬೀದರ್, ಬೆಳಗಾವಿ, ವಿಜಯಪುರ, ಕೋಲಾರ, ಹಾಸನ (hasana), ರಾಮನಗರ, ಚಿತ್ರದುರ್ಗ, ವಿಜಯನಗರ, ರಾಯಚೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಳ್ಳಾರಿ, ತುಮಕೂರು, ಬಾದಾಮಿ, ಹಾವೇರಿ (Haveri), ಶಿವಮೊಗ್ಗ ಜಿಲ್ಲೆಗಳಲ್ಲಿ ಮೋದಿ ಅಬ್ಬರದ ಪ್ರಚಾರ ಮಾಡಿದ್ದರು.
ಈ 19 ಜಿಲ್ಲೆಗಳ 164 ವಿಧಾನಸಭಾ ಕ್ಷೇತ್ರಗಳ ಪೈಕಿ 52 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಪೈಕಿ ಬೆಂಗಳೂರು ನಗರದಲ್ಲಿ ನಡೆಸಿದ ರೋಡ್ ಶೋ (Road Show) ಹೆಚ್ಚು ಲಾಭ ತಂದು ಕೊಟ್ಟಿದೆ.
ಎಲ್ಲಿ ಎಷ್ಟು?:
ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ ಬಿಜೆಪಿ 15 ಕ್ಷೇತ್ರ, ಮೈಸೂರು ಜಿಲ್ಲೆ 11 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರ, ಚಿತ್ರದುರ್ಗ ಜಿಲ್ಲೆಯಲ್ಲಿ 6 ಕ್ಷೇತ್ರಗಳ ಪೈಕಿ ಒಂದು, ಹಾವೇರಿ ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಒಂದು, ರಾಮನಗರ ಜಿಲ್ಲೆಯಲ್ಲಿ 4 ಕ್ಷೇತ್ರಗಳ ಪೈಕಿ ಶೂನ್ಯ, ಬಳ್ಳಾರಿ ಜಿಲ್ಲೆಯಲ್ಲಿ 4 ಕ್ಷೇತ್ರಗಳ ಪೈಕಿ ಶೂನ್ಯ, ತುಮಕೂರು ಜಿಲ್ಲೆಯ 11 ಕ್ಷೇತ್ರಗಳ ಪೈಕಿ 2, ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 6, ಉತ್ತರ ಕನ್ನಡ ಜಿಲ್ಲೆಯ 6 ಕ್ಷೇತ್ರಗಳ ಪೈಕಿ 2, ಕಲಬುರಗಿ ಜಿಲ್ಲೆಯ 9 ಕ್ಷೇತ್ರಗಳ ಪೈಕಿ 2, ರಾಯಚೂರು ಜಿಲ್ಲೆಯ 7 ಕ್ಷೇತ್ರಗಳ ಪೈಕಿ 2, ಬೀದರ್ ಜಿಲ್ಲೆಯಲ್ಲಿ 6 ಕ್ಷೇತ್ರಗಳ ಪೈಕಿ 4, ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು, ಹಾಸನ ಜಿಲ್ಲೆಯ ಏಳು ಕ್ಷೇತ್ರಗಳ ಪೈಕಿ 2, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಶೂನ್ಯ, ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 7, ಶಿವಮೊಗ್ಗ ಜಿಲ್ಲೆಯಲ್ಲಿ 7 ಕ್ಷೇತ್ರಗಳ ಪೈಕಿ 3, ವಿಜಯನಗರ ಜಿಲ್ಲೆಯ 5 ಕ್ಷೇತ್ರಗಳ ಪೈಕಿ 1, ಹಾಗೂ ಬಾಗಲಕೋಟೆಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.